ಗರಿಷ್ಠ ಭದ್ರತೆಗೆ ಸಾಕ್ಷಿಯಾದ ಜಿಲ್ಲೆ
Team Udayavani, Oct 30, 2017, 11:11 AM IST
ಮಹಾನಗರ: ಪ್ರಧಾನಿ ನರೇಂದ್ರ ಮೋದಿ ಜಿಲ್ಲಾ ಭೇಟಿ ಹಿನ್ನೆಲೆಯಲ್ಲಿ ರವಿವಾರ ಮಧ್ಯಾಹ್ನ ತನಕ ಜಿಲ್ಲೆಯಲ್ಲಿ ಕಟ್ಟೆಚ್ಚರದ ಪರಿಸ್ಥಿತಿ ಇತ್ತು. ಭದ್ರತೆಗಾಗಿ ಒಟ್ಟು 2,500 ಪೊಲೀಸರನ್ನು ನಿಯೋಜಿಸಲಾಗಿತ್ತು.
ಪ್ರಧಾನಿಯವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಅಲ್ಲಿಂದಲೇ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿದರು. ಅಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಅದೇ ಹೆಲಿಕಾಪ್ಟರ್‌ನಲ್ಲಿ ಹಿಂದಿರುಗಿ ವಾಯು ಪಡೆಯ ವಿಮಾನದಲ್ಲಿ ಬೆಂಗಳೂರಿಗೆ ನಿರ್ಗಮಿಸಿದರು. ಅವರು ವಿಮಾನ ನಿಲ್ದಾಣದಿಂದ ಹೊರಗೆ ಬಾರದಿದ್ದರೂ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಕಾವಲು ಏರ್ಪಡಿಸಲಾಗಿತ್ತು.
ಮಂಗಳೂರಿನಿಂದ ಕೆ.ಪಿ.ಟಿ., ಯೆಯ್ನಾಡಿ ಮೂಲಕ ಹಾದು ಹೋಗುವ ಏರ್ ಪೋರ್ಟ್ ರಸ್ತೆಯ ಪ್ರಮುಖ ಪಾಯಿಂಟ್
ಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿತ್ತು. ವಿಮಾನ ನಿಲ್ದಾಣದ ಹೊರ ಭಾಗದಲ್ಲಿಯೂ ಅಗ್ನಿ ಶಾಮಕ ವಾಹನಗಳು, ಆ್ಯಂಬುಲೆನ್ಸ್ ಮತ್ತು ಪೊಲೀಸ್ ವಾಹನಗಳ ವ್ಯವಸ್ಥೆ ಮಾಡಲಾಗಿತ್ತು.
ಡಿಜಿಪಿ ಆರ್.ಕೆ. ದತ್ತಾ ಅವರು ಶನಿವಾರ ಜಿಲ್ಲೆಗೆ ಆಗಮಿಸಿದ್ದು, ಮಂಗಳೂರು ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಬಗ್ಗೆ ಮಾರ್ಗದರ್ಶನ ನೀಡಿದ್ದರು. ರವಿವಾರ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ನೇತೃತ್ವದಲ್ಲಿ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್, ಎಸಿಪಿಗಳಾದ ಉದಯ ನಾಯ್ಕ, ಕೆ. ರಾಮ ರಾವ್, ರಾಜೇಂದ್ರ ಡಿ.ಎಸ್., ಮಂಜುನಾಥ ಶೆಟ್ಟಿ ಮಾರ್ಗದರ್ಶನದಲ್ಲಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.