ಮಂಗಳೂರಿಗೆ ಪ್ರಧಾನಿ ಭೇಟಿ : ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪರೇಖೆ ಅಂತಿಮ
Team Udayavani, Aug 24, 2022, 9:48 AM IST
ಮಂಗಳೂರು : ನವಮಂಗಳೂರು ಬಂದರು ಪ್ರಾಧಿಕಾರದಲ್ಲಿ (ಎನ್ಎಂಪಿಎ) ಸುಮಾರು 1,200 ಕೋ.ರೂ. ವೆಚ್ಚದ ವಿವಿಧ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಸಾಗರಮಾಲದ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಸೆ. 2ರಂದು ಮಂಗಳೂರಿಗೆ ಆಗಮಿಸಲಿದ್ದು ಇನ್ನೆರಡುದಿನಗಳಲ್ಲಿ ಕಾರ್ಯ ಕ್ರಮದ ರೂಪರೇಖೆ ಅಂತಿಮಗೊಳ್ಳಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗ್ಗೆ ಕೊಚ್ಚಿಯಲ್ಲಿ ಕಾರ್ಯಕ್ರಮದ ಬಳಿಕ ಸಂಜೆ 3.45ಕ್ಕೆ ಮಂಗಳೂರಿಗೆ ಆಗಮಿಸಲಿದ್ದು, ಎನ್ಎಂಪಿಎಗೆ ಭೇಟಿ ನೀಡಿ ಅಲ್ಲಿ ವಿವಿಧ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಬಹುತೇಕ ಗೋಲ್ಡ್ ಫಿಂಚ್ ಸಿಟಿಮೈದಾನದಲ್ಲಿ ಸಮಾವೇಶ ನಡೆಯಲಿದೆ ಎಂದರು.
ಪ್ರಧಾನಿಯವರ ಜತೆ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ, ಕೇಂದ್ರ ಬಂದರು ಮತ್ತು ನೌಕಾಯಾನ ಸಚಿವ ಸರ್ಬಾನಂದ ಸೋನೊವಾಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಮುಂತಾದವರು ಆಗಮಿಸುವ ನಿರೀಕ್ಷೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಬೆಳ್ಳಾರೆ: ಪದವಿಪೂರ್ವ ಕಾಲೇಜಿನ ಎಲ್ಲ ಉಪನ್ಯಾಸಕರೂ ವರ್ಗಾವಣೆ! ಸಂಕಷ್ಟದಲ್ಲಿ ವಿದ್ಯಾರ್ಥಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.