ಮಕ್ಕಳ ಆರೋಗ್ಯಕ್ಕೆ ಆದ್ಯತೆ, ರಾಜ್ಯವ್ಯಾಪಿ ವಾತ್ಸಲ್ಯ
Team Udayavani, Aug 13, 2021, 6:21 AM IST
ಮಂಗಳೂರು: ಸಂಭಾವ್ಯ ಕೊರೊನಾ 3ನೇ ಅಲೆಯಲ್ಲಿ ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಲಾಗುತ್ತದೆ. ಅವರ ಆರೋಗ್ಯ ಸುಧಾರಣೆಗೆ ಸಂಬಂಧಿಸಿ ಉಡುಪಿ ಮತ್ತು ಹಾವೇರಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಂಡಿರುವ “ವಾತ್ಸಲ್ಯ’ ಯೋಜನೆಯನ್ನು ರಾಜ್ಯವ್ಯಾಪಿ ವಿಸ್ತರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ 32 ಹಾಸಿಗೆಗಳ ಐಸಿಯುವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಆರೋಗ್ಯದತ್ತ ಗಮನ ನೀಡುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ವಾತ್ಸಲ್ಯ ಯೋಜನೆಯನ್ನು ಎಲ್ಲ ಜಿಲ್ಲೆಗಳಿಗೆ ವಿಸ್ತರಿಸುತ್ತೇವೆ ಎಂದರು.
ಮಕ್ಕಳ ರೋಗ ನಿರೋಧಕ ಶಕ್ತಿ ಸದೃಢಗೊಳಿಸುವುದಕ್ಕಾಗಿ ಗ್ರಾಮ ಮಟ್ಟದಲ್ಲಿ ಮಕ್ಕಳ ಆರೋಗ್ಯ ಪರೀಕ್ಷೆ, ಚಿಕಿತ್ಸಾ ಶಿಬಿರ ನಡೆಸಬೇಕು, ಪೌಷ್ಟಿಕ ಆಹಾರ ಪೂರೈಕೆಗೆ ನಿಗಾ ಇರಿಸಬೇಕು ಎಂದು ಸಿಎಂ ಸೂಚನೆ ನೀಡಿದರು. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ನಿರ್ಮಿಸಲಾಗುವುದು, ವೆನ್ಲಾಕ್ ಐಸಿಯು ನಲ್ಲಿ ಶೇ. 50ರಷ್ಟು ಮಕ್ಕಳ ಚಿಕಿತ್ಸೆಗೆ ಮೀಸಲಿಡಲಾಗುವುದು ಎಂದರು.
ದ.ಕ. ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ನಿಯಂತ್ರಣ ಸರಕಾರದ ಉದ್ದೇಶ. ಕೇರಳ ಮತ್ತು ಮಹಾರಾಷ್ಟ್ರದಿಂದ ಕೋವಿಡ್ ರಾಜ್ಯಕ್ಕೆ ವ್ಯಾಪಿಸಿದ್ದರಿಂದ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಆರೋಗ್ಯ ಇಲಾಖೆ ಸನ್ನದ್ಧ :
ಮುಂದಿನ ದಿನಗಳಲ್ಲಿ ಯಾವುದೇ ಪರಿಸ್ಥಿತಿ ಎದುರಿಸಲು ಆರೋಗ್ಯ ಇಲಾಖೆ ಸನ್ನದ್ಧವಾಗಿರಬೇಕೆಂದು ಅಧಿಕಾರಿಗಳಿಗೆ ತಿಳಿಸಿದ್ದೇನೆ. ರಾಜ್ಯಾದ್ಯಂತ ವೆಂಟಿಲೇಟರ್, ಐಸಿಯು, ಆಮ್ಲಜನಕಯುಕ್ತ ಹಾಸಿಗೆ ಹೆಚ್ಚಿಸಲಾಗುವುದು ಎಂದರು.
ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೂ ಸೋಂಕು ಬಾಧಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವ ಡಾ| ಕೆ. ಸುಧಾಕರ್, ಎರಡೂ ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗಲಿರುವ ಸಂಖ್ಯೆ ವಿರಳ. ತಗಲಿದರೂ ತೀವ್ರತೆ ಕಡಿಮೆ ಇರುತ್ತದೆ ಎಂದರು.
ಪರ್ಯಾಯ ದಿನಗಳಲ್ಲಿ ತರಗತಿ:
9ನೇ ತರಗತಿಯಿಂದ ಪಿಯುಸಿಯ ವರೆಗೆ ದಿನ ಬಿಟ್ಟು ದಿನ ಶಾಲೆ, ಕಾಲೇಜು ತೆರೆಯುವ ಬಗ್ಗೆ ಚಿಂತನೆ ಮಾಡಲಾಗಿದೆ. ಇದರ ಪ್ರಗತಿಯನ್ನು ನೋಡಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.