Mangaluru ಉನ್ನತ ಶಿಕ್ಷಣದಲ್ಲಿ ಕೌಶಲಾಭಿವೃದ್ಧಿಗೆ ಆದ್ಯತೆ : ಸಚಿವ ಡಾ| ಎಂ.ಸಿ. ಸುಧಾಕರ್
Team Udayavani, Dec 16, 2023, 11:09 PM IST
ಮಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅದೇ ಮಾದರಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಯಲ್ಲೂ ಹೆಚ್ಚಿನ ಕೌಶಲವನ್ನು ವಿದ್ಯಾರ್ಥಿಗಳಿಂದ ಕೈಗಾರಿಕೆಗಳು ಬಯಸುತ್ತವೆ.
ಉನ್ನತ ಶಿಕ್ಷಣ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ, ಭಾರೀ ಕೈಗಾರಿಕಾ ಇಲಾಖೆ ಮತ್ತು ಐಟಿಬಿಟಿ, ಸಣ್ಣ ಕೈಗಾರಿಕೆ ಇಲಾಖೆಗಳ ಸಚಿವರೊಂದಿಗೆ ಈ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದ ಚರ್ಚೆಗಳನ್ನು ನಡೆಸಲಾಗಿದೆ.
ಕೌಶಲಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಉದ್ದೇಶದಿಂದ ಮುಂದಿನ ದಿನಗಳಲ್ಲಿ ಕೆಲವೊಂದು ಬದಲಾವಣೆಗಳನ್ನು ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ಹೇಳಿದರು.
ಮಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಅವರು ಮಾತನಾಡಿ, ಪಿಯುಸಿ ಅನುತ್ತೀರ್ಣರಾದವರು, ಐಟಿಐ, ಡಿಪ್ಲೊಮಾ ಓದಿರುವವರು, ಎಂಜಿನಿಯರಿಂಗ್ ಪದವಿ ಪಡೆದು ಉದ್ಯೋಗ ಇಲ್ಲದವರಿಗೆ ಕೈಗಾರಿಕೆ ಜತೆ ಒಪ್ಪಂದ ಮಾಡಿಕೊಂಡು ಕೌಶಲಾಭಿವೃದ್ಧಿ ಕೇಂದ್ರಗಳನ್ನು ಎಲ್ಲ ಭಾಗದಲ್ಲೂ ತೆರೆಯಬೇಕು ಎನ್ನುವ ಉದ್ದೇಶವಿದೆ. ಸದ್ಯದಲ್ಲೆ ಈ ಕುರಿತಂತೆ ಮತ್ತೆ ಕೈಗಾರಿಕೆಗಳ ಜತೆ ಸಭೆ ಮಾಡಲಾಗುವುದು. ಕಿರು ಅವಧಿಯ ತರಬೇತಿಗಳನ್ನು ಆಯೋಜಿಸಿ, ನೇರವಾಗಿ ಕೈಗಾರಿಕೆಗಳಲ್ಲಿ ಉದ್ಯೋಗ ಸಿಗುವಂತಹ ಅವಕಾಶ ದೊರೆಯಲಿದೆ ಎಂದರು.
ಎಸ್‌ಇಪಿ ಹಂತ
ಹಂತವಾಗಿ ಅನುಷ್ಠಾನ
ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದ್ದು, ಹಲವಾರು ಜಿಲ್ಲೆಗಳಿಗೆ ಸಮಿತಿ ಭೇಟಿ ನೀಡಿ ವಿವಿಧ ಶಿಕ್ಷಣ ಸಂಸ್ಥೆಗಳು, ಶೈಕ್ಷಣಿಕ ಪ್ರಮುಖರು, ಶಿಕ್ಷಕರು, ಪ್ರಾಧ್ಯಾಪಕರು, ಸಾರ್ವಜನಿಕರ ಜತೆಗೆ ಸಭೆ ನಡೆಸುತ್ತಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ಸಮಗ್ರ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಸಮಿತಿಗೆ ವರದಿ ನೀಡಲು ಫೆ.28ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬಳಿಕ ವಿಧಾನ ಸಭೆ, ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆಸಲಾಗುವುದು. ಏಕಾಏಕಿ ಜಾರಿಗೊಳಿಸಲಾಗುವುದಿಲ್ಲ. ನಮ್ಮಲ್ಲಿರುವ ಮೂಲ ಸೌಕರ್ಯಗಳಿಗೆ ಅನುಗುಣವಾಗಿ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದರು.
ಎನ್‌ಇಪಿಯಿಂದ ಸಮಸ್ಯೆ
ಎನ್‌ಇಪಿಯಲ್ಲಿರುವ ವಿಚಾರ ಗಳನ್ನು ರಾಜ್ಯದಲ್ಲಿ ಎಷ್ಟರ ಮಟ್ಟಿಗೆ ಅನುಷ್ಠಾನ ಮಾಡಲು ಸಾಧ್ಯವಿದೆ. ಅವಲೋಕಿಸದೆ ಏಕಾಏಕಿ ಜಾರಿಗೆ ತಂದಿರುವುದರಿಂದ ಈಗ ಹಲವು ರೀತಿಯಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಎನ್‌ಇಪಿ ನಮಗೆ ಸೂಕ್ತ ಅಲ್ಲ ಎನ್ನುವುದನ್ನು ವಿಧಾನ ಪರಿಷತ್‌ನಲ್ಲಿ ವಿವರವಾಗಿ ತಿಳಿಸಿದ್ದೇನೆ. ಎನ್‌ಇಪಿ ಖಾಸಗಿ ವಿವಿಗಳಿಗೆ ಸೂಕ್ತ ವಿನಃ ಸರಕಾರಿ ವ್ಯವಸ್ಥೆಯಲ್ಲಿ ಅನುಷ್ಠಾನ ಸಾಧ್ಯವಿಲ್ಲ. ಇದರಿಂದ ಬಡ ಮಕ್ಕಳಿಗೆ ತೊಂದರೆಯಾಗುವುದೇ ಹೆಚ್ಚು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.