ಖಾಸಗಿ ವಾಹನ ಸಂಚಾರ ಸಂಪೂರ್ಣ ಬಂದ್
ಕೋವಿಡ್- 19 ಮಣಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಬಿಗಿ ಕ್ರಮ
Team Udayavani, Apr 3, 2020, 12:17 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಎ. 14ರ ವರೆಗೆ ವಿಧಿಸಿರುವ ಸೆ. 144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧಗಳನ್ನು ಹೇರಿದೆ. ಶುಕ್ರವಾರದಿಂದ ಖಾಸಗಿ ವಾಹನಗಳ ಓಡಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಸಾರ್ವಜನಿಕರು ತಮ್ಮ ಸಮೀಪದ ಅಂಗಡಿಗ ಳಿಂದಲೇ ಖರೀದಿಸಬೇಕು ಎಂದು ಸೂಚಿಸಲಾಗಿದೆ.
ದಿನಸಿ ಖರೀದಿಗಾಗಿ ಮೀಸಲಿಟ್ಟಿರುವ ಬೆಳಗ್ಗೆ 7ರಿಂದ 12ರ ವರೆಗಿನ ಸಮಯ ವನ್ನು ಬಹುತೇಕ ಜನರು ದುರುಪಯೋಗ ಮಾಡುತ್ತಿದ್ದು, ಅನಗತ್ಯ ತಿರುಗಾಟ ಅಧಿಕವಾಗುತ್ತಿದೆ. ಇದನ್ನು ಮನಗಂಡು ಜಿಲ್ಲಾಡಳಿತ ಖಾಸಗಿ ವಾಹನ ಸಂಚಾರವನ್ನೇ ನಿರ್ಬಂಧಿಸುವ ತೀರ್ಮಾನಕ್ಕೆ ಬಂದಿದೆ.
ಗುರುತಿನ ಚೀಟಿ ಹೊಂದಿದ ವೈದ್ಯಕೀಯ ಸಿಬಂದಿ ಮತ್ತು ವಾರ್ತಾ ಇಲಾಖೆಯ ಪಾಸ್ ಹೊಂದಿರುವ ಮಾಧ್ಯಮದವರಿಗೆ ಮಾತ್ರ ಖಾಸಗಿ ವಾಹನಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವೈದ್ಯಕೀಯ ಸೇವೆಗಾಗಿ ಹಾಗೂ ಆ್ಯಂಬುಲೆನ್ಸ್ ಬಳಕೆಗಾಗಿ ಎಲ್ಲ ಸಾರ್ವಜನಿಕರು 108/ 1077 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿ ಸೌಲಭ್ಯ ಪಡೆಯಬಹುದು. 108 ಆ್ಯಂಬುಲೆನ್ಸ್ ಸೇವೆ ಲಭ್ಯವಿಲ್ಲದಿದ್ದಲ್ಲಿ ಮಾತ್ರವೇ ಸಾರ್ವಜನಿಕರು 1077 ಟೋಲ್ ಫ್ರೀ ನಂಬರ್‌ಗೆ ಕರೆ ಮಾಡಿದ್ದಲ್ಲಿ ಖಾಸಗಿ ವಾಹನಗಳಿಗೆ ವೈದ್ಯಕೀಯ ತುರ್ತು ಪಾಸ್ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳು ಮತ್ತು ಆಹಾರ ಪದಾರ್ಥಗಳನ್ನು ಕೊಂಡೊಯ್ಯಲು ಬಳಸುವ ಕಮರ್ಷಿಯಲ್ ತ್ರಿಚಕ್ರ, ಚತುಷcಕ್ರಗಳ ಲಘು ಸಾರಿಗೆ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಸಾರ್ವಜನಿಕರಿಗೆ ತುರ್ತಾಗಿ ಸಂಚರಿಸಬೇಕಾದ ಅಗತ್ಯವಿದ್ದರೆ, ಉಪವಿಭಾಗಾಧಿ ಕಾರಿ ಕಚೇರಿಗೆ ಅರ್ಜಿ ಸಲ್ಲಿಸಿ ಅಲ್ಲಿಂದ ವಿಶೇಷ ಪಾಸ್ ಪಡೆದುಕೊಂಡು ಸಂಚರಿಸ ಬಹುದು ಎಂದು ನಗರ ಪೊಲೀಸ್ ಆಯುಕ್ತಡಾ| ಪಿ.ಎಸ್. ಹರ್ಷ ತಿಳಿಸಿದ್ದಾರೆ.
214ರಲ್ಲಿ 205 ನೆಗೆಟಿವ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 214 ಮಂದಿಯ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 9 ಪಾಸಿಟಿವ್ ಬಂದಿದ್ದರೆ, ಉಳಿದ 205 ಪ್ರಕರಣ ನೆಗೆಟಿವ್ ಬಂದಿದೆ.
5,875 ಮಂದಿ ಗೃಹ ನಿಗಾವಣೆ ಯಲ್ಲಿದ್ದು, 300 ಮಂದಿ 28 ದಿನಗಳ ಗೃಹ ನಿಗಾವಣೆ ಪೂರೈಸಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 30 ಮಂದಿ ನಿಗಾದಲ್ಲಿದ್ದಾರೆ. 239 ಮಂದಿಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, 223 ಮಾದರಿ
ಸ್ವೀಕೃತವಾಗಿದೆ. 16 ಮಂದಿಯ ಮಾದರಿಯನ್ನು ಗುರುವಾರ ಪರೀಕ್ಷೆಗೆ ಕಳುಹಿಸಲಾ ಗಿದೆ. 16 ಮಂದಿಯ ವರದಿ ಗುರುವಾರ ಆರೋಗ್ಯ ಇಲಾಖೆ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. 3 ಮಂದಿ ಹೊಸದಾಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.
ಮಂಗಳೂರು ನಗರದಲ್ಲಿ 154 ವಾಹನಗಳು ವಶಕ್ಕೆ
ಮಂಗಳೂರು: ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ರಸ್ತೆಯಲ್ಲಿ ಅನಾವಶ್ಯಕ ವಾಗಿ ವಾಹನ ಚಲಾಯಿಸಿದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರಗಿಸಿದ್ದು, ನಗರದಲ್ಲಿ ಸಂಜೆ ವೇಳೆಗೆ 154 ಖಾಸಗಿ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ| ಹರ್ಷ ತಿಳಿಸಿದ್ದಾರೆ. ಎಲ್ಲರೂ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಸೆಂಟ್ರಲ್ ಮಾರುಕಟ್ಟೆಯ ಹಣ್ಣು ,ತರಕಾರಿ ಬೈಕಂಪಾಡಿಗೆ ಸ್ಥಳಾಂತರ
ನಗರದ ಸೆಂಟ್ರಲ್ ಮಾರುಕಟ್ಟೆಯ ಎಲ್ಲ ಹಣ್ಣು ಮತ್ತು ತರಕಾರಿ ಸಗಟು ವ್ಯಾಪಾರಿಗಳನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶದಲ್ಲಿ ಚಿಲ್ಲರೆ ವ್ಯಾಪಾ ರಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶವನ್ನೂ ನಿಬ ìಂಧಿಸಲಾಗಿದೆ. ಬಂದರಿನಲ್ಲಿ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. ಸಗಟು ವ್ಯಾಪಾರಸ್ಥರು ರಿಟೇಲ್ ವ್ಯಾಪಾರಸ್ಥರಿಗೆ ಮಾತ್ರವೇ ಮಾರಾಟ ಮಾಡಬೇಕು. ಬಂದರಿನಲ್ಲಿ ಬೆಳಗ್ಗೆ 7ರಿಂದ 12ರ ವರೆಗೆ ವಾಹನಗಳ ಸಾರಕು ಇಳಿಸಲು ಅವಕಾಶವಿದೆ. ಮಧ್ಯಾಹ್ನ 1ರಿಂದ ಸಂಜೆ 7ರ ವರೆಗೆ ಸಗ ಟು ಮಾರಾಟಗಾರರು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.