ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಗಳೊಂದಿಗೆ ನಿಷೇಧಾಜ್ಞೆ
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲ ನಿರ್ಬಂಧಗಳ ಸಡಿಲಿಕೆ
Team Udayavani, Aug 4, 2022, 4:40 PM IST
ಮಂಗಳೂರು : ಸರಣಿ ಹತ್ಯೆಗಳ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಗಳೊಂದಿಗೆ ನಿಷೇಧಾಜ್ಞೆ ವಿಸ್ತರಿಸಿ ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಗುರುವಾರ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 8ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಹೇರಲಾಗಿದ್ದು, 18 ವರ್ಷ ಮೇಲ್ಪಟ್ಟ ಯುವಕರು ಬೈಕ್ ನಲ್ಲಿ ಸಹ ಸವಾರರ ಸಂಚಾರಕ್ಕೆ ಅವಕಾಶವಿರುವುದಿಲ್ಲ, ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು ಸಂಚರಿಸಬಹುದಾಗಿದೆ.
ಪ್ರತಿಭಟನೆ, 5 ಕ್ಕಿಂತ ಹೆಚ್ಚು ಜನರು ಗುಂಪು ಗೂಡುವುದು, ಘೋಷಣೆಗಳನ್ನು ಕೂಗುವುದನ್ನು, ಶಸ್ತ್ರಾಸ್ತ್ರ ಗಳ ಒಯ್ಯುವುದನ್ನು ನಿಷೇಧಿಸಲಾಗಿದೆ.
ನಿಷೇಧಾಜ್ಞೆ ಸರಕಾರದ ಆದೇಶದಂತೆ ನಡೆಯುವ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ.
ಜಿಲ್ಲಾ ವ್ಯಾಪ್ತಿಯಲ್ಲಿ ಕೆಲ ನಿರ್ಬಂಧಗಳ ಸಡಿಲಿಕೆ
ನಾಳೆ(ಆಗಸ್ಟ್ 5) ಯಿಂದ ಮುಂದಿನ 3 ದಿನಗಳವರೆಗೆ ಜಿಲ್ಲೆಯಾದ್ಯಂತ ನಿರ್ಬಂಧಗಳನ್ನು ಸಡಿಲಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಗುರುವಾರ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಗೆ ಅಂಗಡಿಗಳನ್ನು ಮುಚ್ಚಲು ಅವಕಾಶ ನೀಡಲಾಗಿದೆ. ಮದ್ಯದಂಗಡಿಗಳನ್ನು ಆಗಸ್ಟ್ 05 ರಿಂದ ಸಂಜೆ 6 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಸಿಆರ್ ಪಿಸಿ 144 ಅಡಿಯಲ್ಲಿ ವಿಧಿಸಲಾದ ಇತರ ನಿರ್ಬಂಧಗಳು ಮೊದಲಿನಂತೆಯೇ ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ :ಮಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಜಾರಿ; ಗಡಿಯಲ್ಲಿ 1 ವರ್ಷ ಚೆಕ್‌ಪೋಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.