Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್ ಖಾದರ್
ದ.ಕ.ಜಿಲ್ಲಾ ಬ್ಯಾರಿ ಪ್ರತಿನಿಧಿ ಸಮಾವೇಶ
Team Udayavani, Jan 9, 2025, 12:00 AM IST
ಮಂಗಳೂರು: ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುನ್ನ ಅದರ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಸ್ಪೀಕರ್ ಯು.ಟಿ.ಖಾದರ್ ಸಲಹೆ ನೀಡಿದರು.
ನಗರದ ಕುದು¾ಲ್ ರಂಗರಾವ್ ಪುರಭವನದ ಯು.ಟಿ. ಫರೀದ್ ವೇದಿಕೆಯಲ್ಲಿ ಬುಧವಾರ ಜರಗಿದ ದ.ಕ.ಜಿಲ್ಲಾ ಬ್ಯಾರಿ ಪ್ರತಿನಿ ಧಿ ಸಮಾವೇಶವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಅಲ್ಪಸಂಖಾಕರ ಅಭಿವೃದ್ಧಿ ನಿಗಮದ ಮೂಲಕ ಬ್ಯಾರಿ ಮುಸ್ಲಿಮರಿಗೆ ಅನೇಕ ಯೋಜನೆಗಳನ್ನು ನೀಡಲಾಗುತ್ತದೆ. ಅದರಿಂದ ಬ್ಯಾರಿ ಮುಸ್ಲಿಮರಿಗೆ ಎಷ್ಟು ಪ್ರಮಾಣದಲ್ಲಿ ಪ್ರಯೋಜನವಾಗಿದೆ ಎಂಬುದರ ಅಂಕಿ ಅಂಶ ಪಡೆದು ಅಧ್ಯಯನ ನಡೆಸಬೇಕು. ಈಗ ಕೊಡುವ ಅನುದಾನಕ್ಕಿಂತಲೂ ಕಡಿಮೆ ಅನುದಾನವನ್ನು ಹೊಸ ನಿಗಮಕ್ಕೆ ಕೊಟ್ಟರೆ ಬ್ಯಾರಿ ಜನಾಂಗಕ್ಕೆ ನಷ್ಟ ವಾದೀತು ಎಂದು ಅವರು ಹೇಳಿದರು. ಮಹಾಸಭಾದ ಅಧ್ಯಕ್ಷ ಅಝೀಝ್ ಬೈಕಂಪಾಡಿ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಅಖೀಲ ಭಾರತ ಬ್ಯಾರಿ ಮಹಾಸಭಾದ ಗೌರವಾಧ್ಯಕ್ಷ ಕರ್ನಾಟಕ ರಾಜ್ಯ ಆಲೈಡ್ ಆ್ಯಂಡ್ ಹೆಲ್ತ್‌ಕೇರ್ ಕೌನ್ಸಿಲ್ ಅಧ್ಯಕ್ಷ ಡಾ| ಯು.ಟಿ. ಇಫ್ತಿಕಾರ್ ಆಲಿ ಫರೀದ್ ಅವರನ್ನು ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.