ಸಾಧಕ ಗ್ರಾಮೀಣ ಶಾಲೆಗಳಿಗೆ ಪ್ರಶಸ್ತಿ ಪ್ರದಾನ


Team Udayavani, Feb 13, 2017, 3:45 AM IST

12-LOC-3.jpg

ಉಳ್ಳಾಲ: ನಿಟ್ಟೆ ಶಿಕ್ಷಣ ಸಂಸ್ಥೆ ಮತ್ತು ನಿಟ್ಟೆ ವಿ.ವಿ. ಆಶ್ರಯದಲ್ಲಿ ದ.ಕ. ಜಿಲ್ಲೆಯಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ಗ್ರಾಮೀಣ ಪ್ರದೇಶದ ಪ್ರೌಢಶಾಲೆಗಳಿಗೆ ನೀಡುವ “ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಅತ್ಯುತ್ತಮ ಶಾಲೆ ಪ್ರಶಸ್ತಿಯ 15 ಲಕ್ಷ ರೂ. ನಗದು ಬಹುಮಾನವನ್ನು ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸರಕಾರಿ ಪ್ರೌಢಶಾಲೆ ಮತ್ತು 10 ಲಕ್ಷ ರೂ. ನಗದು ಬಹುಮಾನವನ್ನು ವೇಣೂರು ಸರಕಾರಿ ಪ್ರೌಢ ಶಾಲೆಗೆ ಶನಿವಾರ ದೇರಳಕಟ್ಟೆಯ ನಿಟ್ಟೆ ವಿ.ವಿ. ಕ್ಯಾಂಪಸ್‌ನ ಕೆ.ಎಸ್‌. ಹೆಗ್ಡೆ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಾಲಾ ಪ್ರಶಸ್ತಿಯನ್ನು ನೀಡಿ ಪುರಸ್ಕರಿಸಲಾಯಿತು.

ಅತ್ಯುತ್ತಮ ಶಾಲಾ ಪುರಸ್ಕಾರ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ, ಮನುಷ್ಯನ ಜೀವನದಲ್ಲಿ ಶಿಕ್ಷಣ ಅತೀ ಪ್ರಾಮುಖ್ಯ. ಆಧ್ಯಾತ್ಮಿಕ ವಿದ್ಯೆ ಎನ್ನುವುದು ಶುದ್ಧ ವಿಜ್ಞಾನವಾ
ಗಿದ್ದು ಇದನ್ನು ಆಧುನಿಕ ಶಿಕ್ಷಣ ದೊಂದಿಗೆ ಮಕ್ಕಳಿಗೆ ಕಲಿಸುವ ಕಾರ್ಯವನ್ನು ಶಿಕ್ಷಕರು ಮಾಡಬೇಕು. ಶಿಕ್ಷಕರು ಹಣ ಮಾಡುವ ಶಿಕ್ಷಣವನ್ನು ಕಲಿಸಿದರೆ ಅದು ಬದುಕಿಗೆ ಪೂರಕವಾಗದು. ಅಂತಹ ಶಿಕ್ಷಣ ಪಡೆದ ಮಕ್ಕಳು ತಮ್ಮ ವೈಯಕ್ತಿಕ ಜೀವನದಲ್ಲಿ ಬರುವಂತಹ ಸಣ್ಣ ಸಮಸ್ಯೆಯನ್ನೂ ಎದುರಿಸಲಾಗದ ಸ್ಥಿತಿಗೆ ತಲುಪುತ್ತಾರೆ ಎಂದು ಹೇಳಿದರು.

ಶ್ಲಾಘನೀಯ ಕಾರ್ಯ 

ಹಿಂದೆ ಮೈಸೂರು ಪ್ರಾಂತ್ಯದಲ್ಲಿ ಸಾಕ್ಷರತೆ ಶೇ. 5ರಷ್ಟಿತ್ತು. ಖಾಸಗಿ ಶಾಲೆಗಳ ಹಾಗೂ ಸರಕಾರಿ ವ್ಯವಸ್ಥೆಯಿಂದ ಸದ್ಯ ಶೇ. 76ಕ್ಕೆ ಬಂದು ನಿಂತಿದೆ. ಖಾಸಗಿ ಸಂಸ್ಥೆಗಳು ಸಮಾಜಕ್ಕೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಗುರುತರವಾದ ಕಾರ್ಯವನ್ನು ಮಾಡಿಕೊಂಡು ಬಂದಿದೆ. ಈ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಅದರಲ್ಲೂ ಸರಕಾರಿ ಶಾಲೆಗಳನ್ನು ಗುರುತಿಸಿ ಆ ಶಾಲೆಗೆ ಆರ್ಥಿಕ ಸಹಾಯವನ್ನು ಮಾಡುವ ಮೂಲಕ ಉನ್ನತ ಸ್ಥಿತಿಯಲ್ಲಿರುವ ನಿಟ್ಟೆ ಶಿಕ್ಷಣ ಸಂಸ್ಥೆಯು ಪ್ರಜ್ಞಾವಂತ ರಾಗಿದ್ದು ಅತ್ಯುತ್ತಮ ಶಾಲಾ ಪುರಸ್ಕಾರ ನೀಡುವ ಮೂಲಕ ಕತ್ತಲಿನಲ್ಲಿ ರುವವರಿಗೆ ಬೆಳಕನ್ನು ನೀಡುವ ಕಾರ್ಯ ಶ್ಲಾಘನೀಯ ಎಂದರು.

ನಡ, ತಾಕೊಡೆ ಶಾಲೆಗೂ ನೆರವು
ಶೈಕ್ಷಣಿಕ ಅಭಿವೃದ್ಧಿ ನಡೆಸಿರುವ ಬೆಳ್ತಂಗಡಿಯ ನಡ ಸರಕಾರಿ ಪ್ರೌಢ ಶಾಲೆಗೆ ಒಂದು ಲಕ್ಷ ರೂ. ನಗದು ಮತ್ತು ಮೂಡಬಿದಿರೆ ತಾಕೊಡೆಯ ಆದರ್ಶ ಪ್ರೌಢಶಾಲೆಗೆ ಎರಡು ಲಕ್ಷ ರೂ. ಆರ್ಥಿಕ ನೆರವಿನ ಚೆಕ್ಕನ್ನು ವಿತರಿಸಲಾಯಿತು. ನಿಟ್ಟೆ ವಿ.ವಿ.ಯ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಾಸನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶಂಭೂನಾಥ ಸ್ವಾಮೀಜಿ, ನಿವೃತ್ತ ಲೋಕಾಯುಕ್ತ ಎನ್‌. ಸಂತೋಷ್‌ ಹೆಗ್ಡೆ, ನಿಟ್ಟೆ ವಿ.ವಿ.ಯ ಉಪಕುಲಾಪತಿ ಡಾ| ಶಾಂತಾರಾಮ ಶೆಟ್ಟಿ, ಬೆಂಗಳೂರು ವಿ.ವಿ. ವಿಶ್ರಾಂತ ಉಪಕುಲಪತಿ ಡಾ| ಎನ್‌.ಆರ್‌. ಶೆಟ್ಟಿ, ಮಂಗಳೂರು ವಿ.ವಿ. ಉಪಕುಲಪತಿ ಪ್ರೊ| ಕೆ. ಭೈರಪ್ಪ, ಡಿಡಿಪಿಐ ವಾಲ್ಟರ್‌ ಡಿಮೆಲ್ಲೋ, ಟ್ರಸ್ಟಿಗಳಾದ ಬಿ.ಆರ್‌. ಹೆಗ್ಡೆ, ಗುರುಪ್ರಸಾದ್‌ ಅಡ್ಯಂತಾಯ ಉಪಸ್ಥಿತರಿದ್ದರು.

ಹಣಕಾಸು ವಿಭಾಗ ನಿರ್ದೇಶಕ ರಾಜೇಂದ್ರ ಎಂ. ಸ್ವಾಗತಿಸಿದರು. ಪಠ್ಯೇತರ ವಿಭಾಗದ ನಿರ್ದೇಶಕ ಪ್ರೊ| ರಾಜಶೇಖರ್‌ ಎಂ. ಕಾರ್ಯಕ್ರಮ ನಿರ್ವಹಿಸಿದರು ನಿಟ್ಟೆ ವಿ.ವಿ.ಯ ಕುಲ ಸಚಿವ ಡಾ| ಎಂ.ಎಸ್‌. ಮೂಡಿತ್ತಾಯ ವಂದಿಸಿದರು. 

ಟಾಪ್ ನ್ಯೂಸ್

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Mangaluru: ಅನಧಿಕೃತ ಫ್ಲೆಕ್ಸ್‌ , ಬ್ಯಾನರ್‌ ತೆರವು ಆರಂಭ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.