ಸೌದಿಯಲ್ಲಿ  ಗೃಹ ಬಂಧನದಲ್ಲಿದ್ದ  ಮಹಿಳೆಯ ರಕ್ಷಣೆ


Team Udayavani, Nov 21, 2017, 9:04 AM IST

21-10.jpg

ಮಂಗಳೂರು: ಅನಾರೋಗ್ಯ ಪೀಡಿತ ಪತಿ ಮತ್ತು ಮಗನ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು  ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ ಮಂಗಳೂರಿನ ವಾಮಂಜೂರಿನ ಮಹಿಳೆಯೋರ್ವರು ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲಾ  ಎಸ್‌ಡಿಪಿಐ ಸಂಘಟನೆಯು ಸೌದಿಯಲ್ಲಿರುವ ತನ್ನ ಯುವಕರ ಸಂಘಟನೆಯ ಮೂಲಕ ಈ ಮಹಿಳೆಯನ್ನು ಪತ್ತೆಹಚ್ಚಿ 
ರಕ್ಷಿಸುವಲ್ಲಿ ನೆರವಾಗಿದೆ. 

ವಾಮಂಜೂರಿನ ಕೆಲರಾಯ್‌ಕೋಡಿ 2ನೇ ಬ್ಲಾಕ್‌ನ  ಬಾಲಪ್ಪ ಬಾಲಕೃಷ್ಣ (55) ಅವರ ಪತ್ನಿ ವಿಜಯಾ (43) ಸೌದಿ ಅರೇಬಿಯಾದಲ್ಲಿ ಸಂಕಷ್ಟಕ್ಕೆ ಸಿಲುಕಿದ ಮಹಿಳೆ. ಹಲವು ತಿಂಗಳುಗಳಿಂದ ಸರಿಯಾಗಿ ಫೋನ್‌ ಸಂಪರ್ಕಕ್ಕೆ ಸಿಗದೆ, ಊರಿಗೆ ಮರಳಲೂ ಸಾಧ್ಯವಾಗದೆ ಸೌದಿ ಅರೇಬಿಯಾದ ದಮಾಮ್‌ ನಗರದಲ್ಲಿ ಗೃಹಬಂಧನದಲ್ಲಿರುವ ವಿಜಯಾ ಅವರ ಬಿಡುಗಡೆಯ ನಿರೀಕ್ಷೆಯಲ್ಲಿ ವೃದ್ಧ ಪತಿ ಮತ್ತು ಪ್ರಥಮ ಪಿಯುಸಿಯಲ್ಲಿ ಕಲಿಯುತ್ತಿರುವ ಮಗ ಜಗಜೀವನ್‌ ದಿನ ದೂಡುತ್ತಿದ್ದಾರೆ. 

ತೀರಾ ಬಡ ಕುಟುಂಬಕ್ಕೆ ವಿಜಯಾ ಅವರೇ ಆಧಾರಸ್ತಂಭವಾಗಿದ್ದರು. ಹಾಗಾಗಿ 2015ರ ಜು. 15ರಂದು ಬಜಪೆಯ ಮಹಿಳೆಯೋರ್ವರ ಪರಿಚಯದ ಮೂಲಕ ಸೌದಿ ಅರೇಬಿಯಾಕ್ಕೆ ಮನೆಗೆಲಸದ ಉದ್ಯೋಗಕ್ಕೆಂದು ಅವರು ತೆರಳಿದ್ದರು. ಕೆಲವು ತಿಂಗಳು ಮಾತ್ರ ಫೋನ್‌ ಸಂಪರ್ಕದಲ್ಲಿದ್ದ ವಿಜಯಾ ಅನಂತರದ ದಿನಗಳಲ್ಲಿ ಅಪರೂಪಕ್ಕೊಮ್ಮೆ ಮಾತ್ರ ಸಂಪರ್ಕಕ್ಕೆ ಸಿಗುತ್ತಿದ್ದರು. ಯಾವಾಗಲಾದರೊಮ್ಮೆ ಹಣ ಕಳುಹಿಸಿ ಕೊಡುತ್ತಿದ್ದರು. 

ಎರಡು ವರ್ಷಗಳ ಬಳಿಕ ಪತಿಗೆ ವಿಪರೀತ ಅನಾರೋಗ್ಯದ ಕಾರಣ ಊರಿಗೆ ಮರಳಲು ಬಯಸಿದ ವಿಜಯಾ ಅವರಿಗೆ ಸೌದಿ ಪ್ರಾಯೋಜಕರು ಸ್ಪಂದನೆ ನೀಡಿಲ್ಲ.  ವಿಶೇಷವೆಂದರೆ ಇದುವರೆಗೆ ವಿಜಯಾ ಅವರಿಗೆ ಒಂದು ಮೊಬೈಲ್‌ ಫೋನ್‌ ಸೌಲಭ್ಯವನ್ನೂ ಪ್ರಾಯೋಜಕರು ಒದಗಿಸಿಲ್ಲ. ಹಾಗಾಗಿ ವಿಜಯಾ ಅವರ ಪರಿಸ್ಥಿತಿ ತಿಳಿಯಲು ಅನಕ್ಷರಸ್ಥ  ಬಾಲಕೃಷ್ಣ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. 

ಬಾಲಕೃಷ್ಣ ಅವರು ಊರಿನ ಪರಿಚಯದವರಿಗೆ ಈ ವಿಚಾರವನ್ನು ತಿಳಿಸಿದ್ದರು. ಮಾಹಿತಿ ಪಡೆದ ಎಸ್‌ಡಿಪಿಐ ಪಕ್ಷದ ರಿಯಾಜ್‌ ಫರಂಗಿಪೇಟೆ ಅವರು ಸೌದಿ ಅರೇಬಿಯಾದಲ್ಲಿರುವ ಕರಾವಳಿಯ ಯುವಕರಿಗೆ ಮಾಹಿತಿ ನೀಡಿದ್ದು, ಅನಿವಾಸಿ ಭಾರತೀಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಇಂಡಿಯನ್‌ ಸೋಶಿಯಲ್‌ ಫೋರಮ್‌ (ಐ.ಎಸ್‌.ಎಫ್‌.) ವಿಜಯಾ ಪ್ರಕರಣವನ್ನು ಭಾರತೀಯ ರಾಯಭಾರ ಕಚೇರಿಯ ಗಮನಕ್ಕೆ ತಂದಿತ್ತು. ವಿಜಯಾ ಅವರನ್ನು  ಪತ್ತೆ ಮಾಡಿದ ಐ.ಎಸ್‌.ಎಫ್‌. ಸಂಘಟನೆಯು ಸೌದಿ ಕಾರ್ಮಿಕ ನ್ಯಾಯಾಲಯದಲ್ಲಿ ದೂರನ್ನೂ ದಾಖಲಿಸಿತು. 

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಪತ್ರಗಳನ್ನು ರಿಯಾಜ್‌ ಅವರು ಐ.ಎಸ್‌.ಎಫ್‌.ಗೆ ತಲುಪಿಸಿದ್ದು, ಶೀಘ್ರದಲ್ಲೇ ವಿಜಯಾ ಅವರು ತವರಿಗೆ ಮರಳುವಂತಾಗಬಹುದು ಎಂಬ ವಿಶ್ವಾಸವನ್ನು ಐ.ಎಸ್‌.ಎಫ್‌ ಫೋರಂ ವ್ಯಕ್ತಪಡಿಸಿದೆ. 
ಎಸ್‌ಡಿಪಿಐ ನಿಯೋಗ ಸಂತ್ರಸ್ತ ಮಹಿಳೆಯ ಪತಿ ಬಾಲಕೃಷ್ಣ ಅವರನ್ನು ವಾಮಂಜೂರಿನ ಅವರ ಮನೆಯಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರ. ಕಾರ್ಯದರ್ಶಿ ಎ.ಎಂ. ಅತವುಲ್ಲಾ ಅವರ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿತು. 

 ನಿಯೋಗದಲ್ಲಿ ನೂರುಲ್ಲಾ ಕುಳಾç, ನಾಸೀರ್‌ ಉಳಾçಬೆಟ್ಟು, ಇಕ್ಬಾಲ್‌ ವಾಮಂಜೂರು, ಇಂಡಿಯನ್‌ ಸೋಶಿಯಲ್‌ ಫೋರಂನ  ಸಲೀಂ ಗುರುವಾಯನಕೆರೆ ಹಾಗೂ ನಿಯಾಜ್‌ ಅಡೂರು ಉಪಸ್ಥಿತರಿದ್ದರು. ಕೋದಂಡರಾಮ ಸಾಲಿಯಾನ್‌ ಭೇಟಿ ನೀಡಿದ ಎಸ್‌ಡಿಪಿಐ ನಿಯೋಗದೊಂದಿಗೆ ಸಹಕರಿಸಿದರು.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.