ಗ್ರಾಮಕರಣಿಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ


Team Udayavani, Jul 27, 2017, 8:55 AM IST

Protest-PDO-26-7.jpg

ಬೆಳ್ತಂಗಡಿ: ಬಳೆಂಜ ಗ್ರಾಮದ ಗ್ರಾಮಕರಣಿಕರಾದ ಮೇಘನಾ ಅವರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಒಡ್ಡಿರುವ ಘಟನೆಯನ್ನು ಖಂಡಿಸಿ ಬುಧವಾರ ತಾಲೂಕು ಕಚೇರಿ ಸಿಬಂದಿ ಮತ್ತು ಗ್ರಾಮ ಕರಣಿಕರ ಸಂಘದ ವತಿಯಿಂದ ಪ್ರತಿಭಟನೆ ಜರಗಿತು. ಗ್ರಾಮ ಕರಣಿಕರ ಕಚೇರಿಗೆ ಬಂದ ಅಶೋಕ್‌ ಆಚಾರ್ಯ ಅವರು ಯಾವುದೋ ಕಡತದ ಮಾಹಿತಿಯನ್ನು ಪಡೆಯುತ್ತಿದ್ದಾಗ ಏಕಾಏಕಿ ಕೋಪಗೊಂಡು ಗ್ರಾಮಕರಣಿಕರಾದ ಮೇಘನಾ ಅವರ ಮೇಲೆ ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿದ್ದಾರೆ. ಮೇಘನಾ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದಾರೆ. ಸಾರ್ವಜನಿಕರ ಎದುರುಗಡೆಯೇ ಸರಕಾರಿ ನೌಕರರೋರ್ವರ ಮೇಲೆ ಹಲ್ಲೆ ನಡೆಸಲಾಗಿದೆ. ಆರೋಪಿಯು ಈ ಹಿಂದೆ ಹಲವಾರು ಸಮಯಗಳಿಂದ ಗ್ರಾಮಕರಣಿಕರ ಕಚೆೇರಿಯಲ್ಲಿ ಮತ್ತು ತಾಲೂಕು ಕಚೇರಿಗಳಲ್ಲಿ ವಿನಾಕಾರಣ ಕಿರುಕುಳ ನೀಡಿ ಮಾನಸಿಕ ಹಿಂಸೆ ನೀಡಿದ್ದರು ಎಂದು ಪ್ರತಿಭಟನಕಾರರು ಆಪಾದಿಸಿದರು.

ಕಠಿನ ಶಿಕ್ಷೆಗೆ ಆಗ್ರಹ 
ಗ್ರಾಮ ಕರಣಿಕರ ಸಂಘದ ಜಿಲ್ಲಾಧ್ಯಕ್ಷ ಜನಾರ್ದನ್‌ ಮಾತನಾಡಿ, ಗ್ರಾಮ ಕರಣಿಕರ ಮೇಲಿನ ಹಲ್ಲೆ, ಬೆದರಿಕೆ ಘಟನೆಗಳು ಜಿಲ್ಲಾದ್ಯಂತ ಹೆಚ್ಚಾಗುತ್ತಿದ್ದು ಈ ನಿಟ್ಟಿನಲ್ಲಿ ಸಂಘಟಿತ ಹೋರಾಟ ಮಾಡುತ್ತಿದ್ದೇವೆ. ಈ ಪ್ರಕರಣದಲ್ಲಿ ಆರೋಪಿಗೆ ಕಠಿನ ಶಿಕ್ಷೆ ಆಗಿ ಎಲ್ಲರೂ ನೆಮ್ಮದಿಯಿಂದ ಕಾರ್ಯನಿರ್ವಹಿಸುವಂತಾಗಬೇಕು ಎಂದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್‌ ತಿಪ್ಪೇಸ್ವಾಮಿ, ಈ ಬಗ್ಗೆ ಅಶೋಕ್‌ ಆಚಾರ್ಯ ಅವರ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗಿದೆ. ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಹಕ್ಕಿನ ಹೆಸರಿನಲ್ಲಿ ಸರಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಬೆದರಿಸುವ ಕೆಲಸ ನಡೆಯಬಾರದು. ಮಾಹಿತಿ ಪಡೆದು ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕೆಲಸ ನಡೆಯಬೇಕು ಎಂದರು. ಮನವಿ ನೀಡುವ ಸಂದರ್ಭ ಗ್ರಾಮಕರಣಿಕರ ಸಂಘದ ತಾಲೂಕು ಅಧ್ಯಕ್ಷ ಪ್ರದೀಪ್‌ ಕುಮಾರ್‌ ಪಿ., ಕಾರ್ಯದರ್ಶಿ ಮಂಜುನಾಥ್‌ ಬಾರಿ, ಉಪಾಧ್ಯಕ್ಷ ವಿಜಯ್‌ ಆರ್‌., ಕೋಶಾಧಿಕಾರಿ ಹರೀಶ್‌ ಕೆ. ಎನ್‌. ಮೊದಲಾದವರಿದ್ದರು.

ಖಂಡನೆ
ಕರ್ತವ್ಯದಲ್ಲಿದ್ದ ಬಳೆಂಜ ಗ್ರಾಮಕರಣಿಕರಾದ ಮೇಘನಾ ಅವರ ಮೇಲೆ ಹಲ್ಲೆ ಮಾಡಿದ ಕೃತ್ಯವನ್ನು ದಸಂಸ ಅಂಬೇಡ್ಕರ್‌ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಚಂದು ಎಲ್‌., ತಾಲೂಕು ಮುಖಂಡರಾದ ಬಿ.ಕೆ. ವಸಂತ್‌, ವೆಂಕಣ್ಣ ಕೊಯ್ಯೂರು, ಸೇಸಪ್ಪ ಅಳದಂಗಡಿ ಮುಂತಾದವರು ಖಂಡಿಸಿದ್ದಾರೆ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.