ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ


Team Udayavani, Aug 10, 2018, 10:32 AM IST

gul-5.jpg

ಕಲಬುರಗಿ: ಕೇಂದ್ರ ಸರ್ಕಾರದ ರೈತ, ಕಾರ್ಮಿಕ ಜನವಿರೋಧಿ ಆರ್ಥಿಕ ನೀತಿ ಹಿಮ್ಮೆಟ್ಟಿಸಲು ಜನಪರ ಹಕ್ಕೊತ್ತಾಯಗಳ ಹೋರಾಟ ಬಲಪಡಿಸಲು ರಾಜ್ಯವ್ಯಾಪಿ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕರೆ ನೀಡಿದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿವಿಧ ರೈತ, ಕೃಷಿ, ಕೂಲಿಕಾರರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಸೂಪರ್‌ ಮಾರ್ಕೆಟ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮಾರುತಿ ಮಾನ್ಪಡೆ, ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದೇ ಗಾಳಿಗೆ ತೂರಿದೆ. ವಿದೇಶದಲ್ಲಿರುವ ಲಕ್ಷಾಂತರ ಕೋಟಿ ರೂ. ಕಪ್ಪು ಹಣ ಹೊರಗೆಳೆದು ಜನರ ಬ್ಯಾಂಕ್‌ ಖಾತೆಗೆ ತಲಾ 15 ಲಕ್ಷ ರೂ. ಜಮೆಯಾಗಲಿದೆ ಎಂದು ನೀಡಿದ್ದ ಭರವಸೆ ಸಂಪೂರ್ಣ ಹುಸಿಯಾಗಿದೆ ಎಂದು ಆರೋಪಿಸಿದರು.

ರೈತರ ಬೆಳೆಗಳಿಗೆ ಡಾ| ಎಂ.ಎಸ್‌. ಸ್ವಾಮಿನಾಥನ್‌ ವರದಿಯಂತೆ ಒಟ್ಟು ಉತ್ಪಾದನಾ ವೆಚ್ಚಕ್ಕೆ ಶೇ.50ರಷ್ಟು
ಲಾಭಾಂಶದ ಬೆಂಬಲ ಬೆಲೆಯನ್ನು ಕೇಂದ್ರ ನೀಡಿಲ್ಲ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಸಹ ಈಡೇರಿಸಿಲ್ಲ ಎಂದು ದೂರಿದರು. ರೈತರ, ಕೂಲಿಕಾರರ, ದಲಿತರ, ಆದಿವಾಸಿಗಳ ಹಾಗೂ ಸ್ರೀಶಕ್ತಿ ಸಂಘಗಳ ಎಲ್ಲ ಸಾಲ ಮನ್ನಾ ಮಾಡಬೇಕು. ಕಬ್ಬು ಬೆಳೆಗಾರರ ಬಾಕಿ ಹಣ ನೀಡಬೇಕು. ಪ್ರತಿ ಟನ್‌ ಕಬ್ಬಿಗೆ 3600 ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು. ವ್ಯವಸಾಯದಲ್ಲಿ ತೊಡಗಲು ಇಚ್ಛಿಸುವ ಅರ್ಹರಿಗೆ ತಲಾ 5 ಎಕರೆ ಜಮೀನು ನೀಡಬೇಕು. ಬಗರ್‌
ಹುಕುಂ ಬಡ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿದರು.

ಉದ್ಯೋಗ ಖಾತ್ರಿ ಯೋಜನೆ ಅವಧಿಯನ್ನು ಕನಿಷ್ಠ 200 ದಿನಗಳಿಗೆ ಹೆಚ್ಚಿಸಬೇಕು ಹಾಗೂ ಯೋಜನೆಯನ್ನು ನಗರಕ್ಕೂ ವಿಸ್ತರಿಸಬೇಕು. ಕೂಲಿಯನ್ನು 600 ರೂಗಳಿಗೆ ಹೆಚ್ಚಿಸಬೇಕು. ಕನಿಷ್ಠ 50 ದಿನಗಳ ಉದ್ಯೋಗ ಖಾತ್ರಿ ನಿರ್ವಹಿಸಿದ ಎಲ್ಲರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವ್ಯಾಪ್ತಿಗೆ ಸೇರಿಸಬೇಕು. ಬೆಳೆ ವಿಮೆಗಾಗಿ 18 ಖಾಸಗಿ ಕಂಪನಿಗಳೊಂದಿಗೆ ಒಪ್ಪಂದ ರದ್ದು ಪಡಿಸಿ ಜೀವವಿಮಾ ನಿಗಮದ ಮಾದರಿಯಲ್ಲಿ ಒಂದು ಸರ್ಕಾರಿ ವಿಮಾ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿದರು.

ವೃದ್ದ ರೈತರು, ಕೃಷಿ, ಕೂಲಿ ಕಾರ್ಮಿಕರಿಗೆ ತಲಾ 5 ಸಾವಿರ ರೂ. ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಕೇಂದ್ರ ಸರ್ಕಾರ 44 ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ನಿಲ್ಲಿಸಬೇಕು. ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಕೈಬಿಡಬೇಕು. ದುಡಿಯುತ್ತಿರುವ ಎಲ್ಲ ನೌಕರರನ್ನು ಖಾಯಂಗೊಳಿಸಬೇಕು. ಅಂಗನವಾಡಿ, ಬಿಸಿಯೂಟ, ಗ್ರಾಪಂ ನೌಕರರು, ಆಶಾ
ಕಾರ್ಯಕರ್ತೆಯರನ್ನು ಖಾಯಂಗೊಳಿಸಬೇಕು. 18 ಸಾವಿರ ರೂ. ಕನಿಷ್ಠ ವೇತನ ನಿಗದಿಪಡಿಸಬೇಕು. ಎಲ್ಲ ನಿವೇಶನ ಹಾಗೂ ವಸತಿ ರಹಿತರಿಗೆ ಹಿತ್ತಲು ಸಹಿತ ಉಚಿತ ಮನೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಶಾಂತಾ ಘಂಟಿ, ಅಶೋಕ ಮ್ಯಾಗೇರಿ, ಆನಂದರಾಜ, ಬಾಬುರಾವ ದಿಕ್ಸಂಗಿ, ಸುಧಾಮ ಧನ್ನಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-bng

Cyber ಕೈಚಳಕ: 2.47 ಕೋಟಿ ರೂ. ವಂಚನೆ

18-bng

Bengaluru: ಪೊಲೀಸ್‌ ಮೇಲೆ ಹಲ್ಲೆ ನಡೆಸಿದ್ದ ವಿದೇಶಿ ಪ್ರಜೆ ಸೆರೆ

17-bng

Bengaluru: ಅನಧಿಕೃತ ಕಾಲ್‌ಸೆಂಟರ್‌ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

16-bng

Bengaluru: ಪ್ರೀತಿಸಿದವಳು ದೂರಾಗಿದ್ದಕ್ಕೆ ಯುವಕ ಆತ್ಮಹತ್ಯೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.