Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ
Team Udayavani, Jul 23, 2024, 12:26 PM IST
ಮಂಗಳೂರು: ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆಗೆ
ಆಗ್ರಹಿಸುತ್ತಿರುವುದು ಅವೈಜ್ಞಾನಿಕ ಎಂದು ವಿರೋಧಿಸಿ ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗ ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಸಂಘದ ಅಧ್ಯಕ್ಷ ಆನಂದ ಕೆ. ಮಾತನಾಡಿ, ಈ ಸಾಧನಗಳ ಅಳವಡಿಕೆಯ ಆದೇಶ ಗೊಂದಲಮಯವಾಗಿದೆ. ಇದು ಟ್ಯಾಕ್ಸಿ ಮತ್ತು ಮ್ಯಾಕ್ಸಿಕ್ಯಾಬ್ ಚಾಲಕ ಮಾಲಕರ ಉದ್ಯೋಗದ ಮೇಲೆ ಹೆಚ್ಚುವರಿ ಹೊರೆಯಾಗಿದೆ. ರಾಜ್ಯ ಸರಕಾರ ಈ ಸಾಧನ ಅಳವಡಿಸಲು 7,590 ರೂ. ಗಳನ್ನುನಿಗದಿಪಡಿಸಿದ್ದರೂ ರಾಜ್ಯದ ಎಲ್ಲ ಸಾರಿಗೆ ಕಚೇರಿಗಳಲ್ಲಿ 13,000 ರೂ.ನಿಂದ 15,000 ರೂ.ವರೆಗೆ ಪಡೆಯಲಾಗುತ್ತಿದೆ. ಇದು ವಾಹನ ಚಾಲಕ ಮಾಲಕರಿಗೆ ಮಾಡುತ್ತಿರುವ ಅನ್ಯಾಯ ಎಂದರು.
ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಮಂಗಳೂರು ಆರ್ಟಿಒ ಶ್ರೀಧರ್ ಮಲ್ಲಾಡ್ ಮಾತನಾಡಿ, ಚಾಲಕರ ಮನವಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಸಂಘದ ಗೌರವಾಧ್ಯಕ್ಷ ದಿನೇಶ್ ಕುಂಪಲ, ಕಮಲಾಕ್ಷ, ಶರತ್, ಮನೋಜ್, ಬೋಜಣ್ಣ, ಶುಭಕರ ಶೆಟ್ಟಿ, ಉದಯ್ ಕುಮಾರ್, ಲೋಕೇಶ್ ಗೌಡ ಸಹಿತ ನೂರಾರು ಸಂಖ್ಯೆಯ ಚಾಲಕರು ಇದ್ದರು.
ಇದನ್ನೂ ಓದಿ: Budget 2024: 30 ಲಕ್ಷ ಯುವಕರಿಗೆ 1 ತಿಂಗಳ ಪಿಎಫ್ , ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.