ಜಗದೀಶ್ ಕಾರಂತರ ಬಂಧನ ವಿರೋಧಿಸಿ ಪ್ರತಿಭಟನೆ
Team Udayavani, Oct 1, 2017, 3:51 PM IST
ಆಲಂಕಾರು: ಹಿಂದೂ ಜಾಗರಣ ವೇದಿಕೆಯ ರಾಜ್ಯ ಪ್ರಮುಖರಾದ ಜಗದೀಶ್ ಕಾರಂತರ ಬಂಧನ ವಿರೋಧಿಸಿ ಆಲಂಕಾರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಆಲಂಕಾರು ಬಸ್ ತಂಗುದಾಣದ ಬಳಿ ಸಾಂಕೇತಿಕ ರಸ್ತೆ ತಡೆ ಮಾಡುವುದರ ಮೂಲಕ ಪ್ರತಿಭಟಿಸಲಾಯಿತು.
ಆಲಂಕಾರು ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಜನಾರ್ದನ ಗೌಡ ಕಯ್ಯಪ್ಪೆ ಮಾತನಾಡಿ, ಸಿದ್ದ
ರಾಮಯ್ಯ ಸರಕಾರ ಹಿಂದೂಗಳ ದಮನಕ್ಕೆ ಪಣ ತೊಟ್ಟಂತಿದೆ. ಇದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಕುಮ್ಮಕ್ಕು ನೀಡುತ್ತಿದ್ದಾರೆ. ಜಿಲ್ಲೆಯಲ್ಲಿ ಹಿಂದುಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇದನ್ನು ಪ್ರತಿಭಟಿಸದಿದ್ದಲ್ಲಿ ರಾಜ್ಯ ಸರಕಾರ ಹಿಂದುಗಳ ಸರ್ವನಾಶ ಮಾಡುವುದರಲ್ಲಿ ಸಂಶಯವಿಲ್ಲ ಎಂದು ಆರೊಪಿಸಿದರು.
ಆಲಂಕಾರು ಹಿಂದು ಜಾಗರಣ ವೇದಿಕೆಯ ಸಂಚಾಲಕ ಧನಂಜಯ ಗೌಡ, ಕಾರ್ಯದರ್ಶಿ ಹರೀಶ್ ನೆಕ್ಕಿಲಾಡಿ,ನಿಕಟಪೂರ್ವ ಅಧ್ಯಕ್ಷ ಮಲ್ಲೇಶ್.ಎನ್, ಪೂವಪ್ಪ ಗೌಡ ಇಚ್ಚಾರು, ಮಾಜಿ ತಾ.ಪಂ ಸದಸ್ಯ ದಯಾನಂದ ಗೌಡ ಆಲಡ್ಕ, ದಿನೇಶ್ ಕೇಪುಳು, ಸುಧಾಕರ ಪೂಜಾರಿ, ಜಯಂತ ಪೂಜಾರಿ ನೆಕ್ಕಿಲಾಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.