ಸಂಪ್ಯ ಠಾಣಾ ಎಸ್‌ಐ, ಸಿಬಂದಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ 


Team Udayavani, Dec 30, 2017, 4:19 PM IST

30-Dec-18.jpg

ನಗರ: ಸಂಪ್ಯ ಠಾಣಾಧಿಕಾರಿ ಮತ್ತು ಮೂವರು ಸಿಬಂದಿಯ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಅವರ ಅಮಾನತಿಗೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆಯು ಮಿನಿ ವಿಧಾನ ಸೌಧದ ಎದುರು ಹಮ್ಮಿಕೊಂಡ ಸರಣಿ- ಧರಣಿ ಪ್ರತಿಭಟನೆ ನಾಲ್ಕನೇ ದಿನವೂ ನಡೆಯಿತು. ಶುಕ್ರವಾರ ಬಂಟ್ವಾಳ ತಾಲೂಕು ಹಿಂದೂ ಜಾಗರಣಾ ವೇದಿಕೆ ಘಟಕದ ವತಿಯಿಂದ ಧರಣಿ ನಡೆಯಿತು.

ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಂತ್‌ ಬೆಳ್ಳಾರೆ ಮಾತನಾಡಿ, ಇಲಾಖೆಯ ಗೌರವವನ್ನು ಎತ್ತಿ ಹಿಡಿಯಬೇಕಾಗಿದ್ದ ಆರೋಪಿತ ಪೋಲೀಸರು ಹಿಂದೂ ವಿರೋಧಿ ನೀತಿಯನ್ನು ದೌರ್ಜನ್ಯದ ಮೂಲಕ ಪ್ರದರ್ಶಿಸಿದ್ದಾರೆ. ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ನಡೆಸುವಂತೆ ನಾವು ಒತ್ತಾಯಿಸುತ್ತೇವೆ. ಜ. 2ರಂದು ಅಷ್ಟ ದಿಕ್ಕುಗಳಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಪುತ್ತೂರಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮತ್ತು ಸ್ವಾಭಿಮಾನಿ ಹಿಂದೂಗಳು ಪಾದ ಯಾತ್ರೆಯ ಮೂಲಕ ಆಗಮಿಸಲಿದ್ದಾರೆ. ಸಂಜೆ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಬೃಹತ್‌ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ ಎಂದರು.

ಬಂಟ್ವಾಳ ತಾಲೂಕು ಹಿಂದೂ ಜಾಗರಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ್‌ ಮಾತನಾಡಿ, ಅಬ್ದುಲ್‌
ಖಾದರ್‌ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿಯಾಗಿ ಬಂದ ಬಳಿಕ 2 ವರ್ಷಗಳಿಂದ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿದರು.

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಗೋಪಾಲ್‌ ನಾೖಕ್‌ ಏಳ್ಮು ಡಿ, ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತ್ತಾಯ, ಮಂಗಳೂರು ವಿಭಾಗ ಸಹಸಂಚಾಲಕ ರವಿರಾಜ್‌ ಶೆಟ್ಟಿ ಕಡಬ, ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ, ಬಂಟ್ವಾಳ ತಾಲೂಕು ಅಧ್ಯಕ್ಷ ಚಂದ್ರ ಕಳಾಯಿ, ಕಾರ್ಯದರ್ಶಿ ಯೋಗೀಶ್‌, ಸಂಘಟನಾ ಕಾರ್ಯದರ್ಶಿ ಜಗದೀಶ್‌, ಜಿಲ್ಲಾ ಸಂಘಟನ ಕಾರ್ಯದರ್ಶಿ ಬಾಲಕೃಷ್ಣ, ಜಗದೀಶ್‌ ನೆತ್ತರಕೆರೆ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕರ್ತರ ಆಕ್ರೋಶ 
ಗ್ರಾಮಾಂತರ ಪೊಲೀಸ್‌ ಠಾಣಾಧಿಕಾರಿ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಅವರು ಅನುಸರಿಸುತ್ತಿರುವ ಹಿಂದೂ ವಿರೋಧಿ ನೀತಿಗೆ ಘೋಷಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪಿಎಫ್‌ಐ ಜತೆ ಸೇರಿ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. 

ಟಾಪ್ ನ್ಯೂಸ್

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Bantwal: ಅಪಘಾತ; ಗಾಯಾಳು ಸಾವು

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

3(1

Sullia: ಬಸ್‌ ತಂಗುದಾಣ ನಿರ್ವಹಣೆಗೆ ನಿರಾಸಕ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

BBK11: ಚೈತ್ರಾ ಅಭಿನಯ ‌ಕಂಡು‌ ಮೂಕವಿಸ್ಮಿತರಾದ ಮನೆಮಂದಿ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.