ಹಳೆಯಂಗಡಿ ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಪ್ರತಿಭಟನೆ
Team Udayavani, Aug 2, 2019, 1:15 PM IST
ಹಳೆಯಂಗಡಿ: ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ಬಿಜೆಪಿಯ ಸ್ಥಾನೀಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಭಾಗದಲ್ಲಿ ಪ್ರತಿಭಟನೆ ನಡೆಯಿತು.
ಗ್ರಾಮ ಪಂಚಾಯತ್ ನ ಆಡಳಿತದಲ್ಲಿ ಗ್ರಾಮ ಸಭೆ ವಾರ್ಡ್ ಸಭೆ ಸಾಮಾನ್ಯ ಸಭೆ ಕಳೆದ 10 ತಿಂಗಳಿಂದ ನಡೆಯುತ್ತಿಲ್ಲ. ಗ್ರಾಮಸ್ಥರಿಗೆ ಯಾವೊಂದು ಸೌಲಭ್ಯ ಸಿಗುತ್ತಿಲ್ಲ. ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ.
ಮಂಗಳೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಣ ಅಧಿಕಾರಿ ಸದಾನಂದ ಅವರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್, ಹಳೆಯಂಗಡಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು., ನ್ಯಾಯವಾದಿ ಡೇನಿಯಲ್ ಡಿಸೋಜ, ಬಿಜೆಪಿಯ ಈಶ್ವರ್ ಕಟೀಲು, ನರೇಂದ್ರ ಪ್ರಭು, ಮನೋಜ್ ಕುಮಾರ್, ಶೂಗೇಂದ್ರ ಸಸಿಹಿತ್ಲು, ಸತೀಶ್ ಭಟ್, ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು
ಪಣಂಬೂರು ಎಸಿಪಿ ಶ್ರೀನಿವಾಸಗೌಡ ಹಾಗೂ ಮುಲ್ಕಿ ಇನ್ಸ್ಪೆಕ್ಟರ್ ಅನಂತಪದ್ಮನಾಭ ಇವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.