ಟಿಪ್ಪು ಜಯಂತಿ ವಿರುದ್ಧ ಉಭಯ ಜಿಲ್ಲೆಗಳಲ್ಲಿ ಪ್ರತಿಭಟನೆ
Team Udayavani, Nov 10, 2018, 9:42 AM IST
ಮಂಗಳೂರು/ಉಡುಪಿ: ಟಿಪ್ಪು ಸುಲ್ತಾನ್ ಜಯಂತಿಯ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿ ಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮತ್ತು ಉಡುಪಿ ಜಿಲ್ಲಾ ಘಟಕದಿಂದ ಜಿಲ್ಲಾ ಬಿಜೆಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನ ಸಭೆ ನಡೆಯಿತು.
ಬಹುಸಂಖ್ಯಾಕರ ಭಾವನೆಗೆ ಘಾಸಿ: ನಳಿನ್
ಟಿಪ್ಪು ಮತಾಂಧ ಎಂಬ ಭಾವನೆ ಜನರಲ್ಲಿದೆ. ಟಿಪ್ಪು ಜಯಂತಿ ಬಹುಸಂಖ್ಯಾಕ ಮಂದಿಯ ನಂಬಿಕೆಗೆ ಧಕ್ಕೆ ತರುತ್ತದೆ. ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ, ಮುಸ್ಲಿಂ, ಕ್ರೆçಸ್ತರ ಭಾವನೆಗೆ ಘಾಸಿ ಮಾಡುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಮಂಗಳೂರಿನಲ್ಲಿ ಹೇಳಿದರು.
ಟಿಪ್ಪು ಮೀರಿಸಿದ ಮತಾಂಧ ಸಿದ್ದು
“ಸಿಎಂ ಕುಮಾರಸ್ವಾಮಿ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ರೀತಿಯಲ್ಲಿ ಸಿದ್ದರಾಮಯ್ಯನವರ ಜಯಂತಿಯನ್ನೂ ಆಚರಿಸಲಿ. ಟಿಪ್ಪು ಜಯಂತಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು 2015ರಲ್ಲಿ ಆಚರಿಸುವ ಮೂಲಕ ಟಿಪ್ಪುವಿಗಿಂತ ದೊಡ್ಡ ಮತಾಂಧ ಎಂಬುದನ್ನು ತೋರಿಸಿದ್ದಾರೆ’ ಎಂದು ಲೇವಡಿ ಮಾಡಿದರು.
ಸಿಎಂ ವಿರುದ್ಧ ಅವಹೇಳನಕಾರಿ ಪದ
“ಟಿಪ್ಪು ಜಯಂತಿ ಆಮಂತ್ರಣ ಪತ್ರದಲ್ಲಿ ಸಿಎಂ ಕುಮಾರಸ್ವಾಮಿ ತನ್ನ ಹೆಸರನ್ನೇ ನಮೂದಿಸದೆ ಸಂಶಯಕ್ಕೆ ಎಡೆ ಮಾಡಿದ್ದಾರೆ’ ಎನ್ನುವ ಮೂಲಕ ನಳಿನ್ ಅವರು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ.
ದ.ಕ. ಜಿಲ್ಲಾದ್ಯಂತ ನಿಷೇಧಾಜ್ಞೆ ; ಬಿಗಿ ಪೊಲೀಸ್ ಬಂದೋಬಸ್ತು
ಮಂಗಳೂರು: ಸರಕಾರಿ ಕಾರ್ಯಕ್ರಮವಾಗಿರುವ ಟಿಪ್ಪು ಜಯಂತಿಗೆ ವ್ಯಾಪಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 6 ಗಂಟೆಯಿಂದ ರವಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಸಿಆರ್‌ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್. ಶಶಿಕಾಂತ ಸೆಂಥಿಲ್ ಆದೇಶಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ರವಿಕಾಂತೇ ಗೌಡ ಅವರ ವರದಿಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭ ಯಾವುದೇ ಸಾರ್ವಜನಿಕ, ರಾಜ ಕೀಯ ಮುಂತಾದ ಬಹಿರಂಗ ಸಭೆ, ಸಮಾರಂಭ, ಜಾಥಾ, ಮೆರವಣಿಗೆ ನಡೆಸುವುದನ್ನು; ಯಾವುದೇ ವ್ಯಕ್ತಿ, ಸಂಘಟನೆಯ ಸದಸ್ಯರು ಪ್ರತಿಭಟನ ಮೆರವಣಿಗೆ, ಬ್ಯಾನರ್, ಬಂಟಿಂಗ್ಸ್, ಬಾವುಟ, ಧ್ವನಿವರ್ಧಕ ಅಳವಡಿಸಿ ಘೋಷಣೆ ಕೂಗುವುದನ್ನು ಹಾಗೂ ಗುಂಪು ಗುಂಪಾಗಿ ಸೇರಿ ಪ್ರತಿಭಟನೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎರಡು ಪ್ಲಟೂನ್ ಕೆಎಸ್‌ಆರ್‌ಪಿ
ಟಿಪ್ಪು ಜಯಂತಿಗೆ ಸಂಬಂಧಿಸಿ ನಗರದಲ್ಲಿ ಒಂದು ಒಳಾಂಗಣ (ಇಂಡೋರ್) ಸಭೆಯನ್ನು ಮಾತ್ರ ನಡೆಸಲು ಅವಕಾಶವಿದೆ. ಹಾಲಿ ಇರುವ ಪೊಲೀಸರ ಹೊರತಾಗಿ 2 ಪ್ಲಟೂನ್ ಕೆಎಸ್‌ಆರ್‌ಪಿ ಸಿಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.
ಟಿಪ್ಪು ಪರಿಣಾಮ !
ಟಿಪ್ಪುವಿನ ಖಡ್ಗವನ್ನು ದೇಶಕ್ಕೆ ತಂದ ಉದ್ಯಮಿ ವಿಜಯ ಮಲ್ಯ ಅವರಿಗೆ ಭಾರತ ಬಿಟ್ಟು ವಿದೇಶದಲ್ಲಿ ಕದ್ದು ಬದುಕುವ ಪರಿಸ್ಥಿತಿ ಬಂದಿದೆ. ಅದೇ ರೀತಿ ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡರು. ಇದೀಗ ಕುಮಾರಸ್ವಾಮಿ ಅವರು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಅವರಿಗೂ ಅದೇ ಗತಿ ಬರಬಹುದು ಎಂದು ನಳಿನ್ ಕುಮಾರ್ ಹೇಳಿದರು.
ಬಿಜೆಪಿ ಗೆದ್ದರೆ ಟಿಪ್ಪು ಜಯಂತಿ ರದ್ದು : ಕೋಟ
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ತತ್‌ಕ್ಷಣವೇ ವಿವಾದಿತ ಟಿಪ್ಪು ಜಯಂತಿಯನ್ನು ರದ್ದು ಗೊಳಿಸಲಾಗುವುದು ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ಹೇಳಿದರು. “ಟಿಪ್ಪು ಜಯಂತಿಗೂ ಹಿಟ್ಲರ್ ಜಯಂತಿಗೂ ವ್ಯತ್ಯಾಸವಿಲ್ಲ. ಕುಮಾರ ಸ್ವಾಮಿ ಅವರಿಗೆ ಪ್ರಾಮಾಣಿಕತೆ ಇದ್ದರೆ ಅವರು ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಜರಗಲಿರುವ ಟಿಪ್ಪು ಜಯಂತಿಯನ್ನು ಉದ್ಘಾಟನೆ ಮಾಡಬಾರದು’ ಎಂದವರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.