ಸಾರ್ವಜನಿಕ ಹಿತಾಸಕ್ತಿಗೆ ಸ್ಪಂದಿಸದಿದ್ದರೆ ಪ್ರತಿಭಟನೆ ತೀವ್ರ


Team Udayavani, Aug 3, 2017, 8:15 AM IST

28NLD4.jpg

ನೆಲ್ಯಾಡಿ : ಪಟ್ಟಣದಲ್ಲಿನ ಹೆದ್ದಾರಿಗೆ ಹೊಂದಿ ಕೊಂಡಿರುವ ಬಾರ್‌ ತೆರವುಗೊಳಿಸುವಂತೆ ಒತ್ತಾಯಿಸಿ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ, ಮದ್ಯದಂಗಡಿ ತೆರವು ಹೋರಾಟ ಸಮಿತಿ, ನೆಲ್ಯಾಡಿ-ಕೌಕ್ರಾಡಿ ಗ್ರಾಮಗಳ ಸ್ತ್ರೀಶಕ್ತಿ ಸ್ವ ಸಹಾಯ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ  ಬುಧವಾರ ಪ್ರತಿಭಟನೆ ನಡೆಯಿತು.

ಪ್ರತಿಭಟನ ಸಭೆ ಉದ್ದೇಶಿಸಿ ಮಾತನಾಡಿದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯ ಕಾರ್ಯ ದರ್ಶಿ ವಿವೇಕ್‌ ವಿನ್ಸೆಂಟ್‌ ಪಾಯಸ್‌, ಅಪಘಾತ, ಅಪರಾಧಗಳಿಗೆ ಮದ್ಯ ಪಾನವೇ ಪ್ರಮುಖ ಕಾರಣವಾಗಿರುವುದರಿಂದ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯ ಮದ್ಯದಂಗಡಿ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಈ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದರು.

ಈ ಆದೇಶ ಬರುವವರೆಗೂ ಮುಂಬಾಗಿಲ ಮೂಲಕ ವ್ಯವಹರಿಸುತ್ತಿದ್ದ ಇಲ್ಲಿಯ ಬಾರ್‌ ಈಗ ಅಡ್ಡದಾರಿ ಸೃಷ್ಟಿಸಿ ಹಿಂಬಾಗಿಲ ಮೂಲಕ ವ್ಯಾಪಾರ ಮಾಡಿ ಕಾನೂನಿನ ಕಣ್ಣಿಗೆ ಮಣ್ಣೆರಚುತ್ತಿದೆ. ಇದಕ್ಕೆ ಒಪ್ಪಿಗೆ ಕೊಟ್ಟ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಛೀಮಾರಿ ಹಾಕಬೇಕಿದೆ. ಈ ಕೂಡಲೇ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ಬಾರ್‌ ಅನ್ನು ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

ಅನ್ಯಾಯದ ವಿರುದ್ಧ ಪ್ರತಿಭಟನೆ
ವೇದಿಕೆ ಪುತ್ತೂರು ತಾ| ಅಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿ, ಇಲ್ಲಿ ನಡೆಯುತ್ತಿರುವ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ಮದ್ಯದಂಗಡಿಯಿಂದ ಜನರಿಗೆ ಆಗುವ ತೊಂದರೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುತ್ತಿದ್ದೇವೆ. ವಿವಿಧ ಇಲಾಖೆಗಳಿಗೆ, ಸಂಬಂಧಿಸಿದವರಿಗೆ ಮನವಿ ಮಾಡಿದ್ದರೂ ಸ್ಪಂದನೆ ದೊರೆಯದ ಕಾರಣ ಪ್ರತಿಭಟನೆಗೆ ಇಳಿದಿದ್ದೇವೆ ಎಂದರು.

ಬೆಳ್ತಂಗಡಿ ತಾ| ಪ್ರಾಂತ ರೈತ ಸಂಘದ ಅಧ್ಯಕ್ಷ ಬಿ.ಎಂ. ಭಟ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಪಾನ ಮತ್ತರಿಂದ, ಬಾರ್‌ಗೆ ಬರುವ ವಾಹನಗಳ ನಿಲುಗಡೆಯಿಂದ ಉಂಟಾದ ಸಮಸ್ಯೆಯ ಬಗ್ಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ,  ಪೊಲೀಸರು ಅಕ್ರಮ ಬಾರ್‌ ನಡೆಸುವವರಿಗೆ ರಕ್ಷಣೆ ಕೊಡಲು ಬಂದಿದ್ದಾರೆಯೇ ಎಂದು ಪ್ರಶ್ನಿಸಿದರು.

ಉಗ್ರ ಪ್ರತಿಭಟನೆಯ ಎಚ್ಚರಿಕೆ
ದ.ಕ. ಜಿಲ್ಲಾ ದಲಿತ ಸೇವಾ ಸಮಿತಿ ಜಿಲ್ಲಾ ಉಪಾಧ್ಯಕ್ಷ ಅಣ್ಣು ಎಳ್ತಿಮಾರ್‌ ಮಾತನಾಡಿ, ಕಾನೂ ನನ್ನು ಉಲ್ಲಂ ಸಿದ ಬಾರ್‌ ಮಾಲಕರು ಹೋರಾಟ ನಡೆಸುವವರಿಗೆ ಬೆದರಿಕೆ ಹಾಕುವ ಮೂಲಕ ಗೂಂಡಾಗಿರಿ ಪ್ರದರ್ಶಿಸುತ್ತಿದ್ದಾರೆ. ಕೂಡಲೇ ಬಾರ್‌ ತೆರವುಗೊಳಿಸದಿದ್ದರೆ ಉಗ್ರ ಪ್ರತಿಭಟನೆ ಅನಿವಾರ್ಯ ಎಂದು ಎಚ್ಚರಿಸಿದರು.

ಮದ್ಯದಂಗಡಿ ತೆರವುಗೊಳಿಸುವ ಹೋರಾಟ ಸಮಿತಿ ಅಧ್ಯಕ್ಷ ರವಿಚಂದ್ರ ಹೊಸವೊಕ್ಲು ಮಾತನಾಡಿ, ಕಾನೂನಿಗೆ ಮಣ್ಣೆರಚಿರುವ ಬಾರ್‌ನ ಮಾಲಕರಿಗೆ ಹೋರಾಟ ಸಮಿತಿಯವರನ್ನು ಕಿಡಿಗೇಡಿಗಳು ಎಂದು ಹೇಳುವ ನೈತಿಕ ಹಕ್ಕಿಲ್ಲ,  ಮದ್ಯದಂಗಡಿ ವಿರುದ್ಧದ ಹೋರಾಟ ನಡೆಯಲಿದೆ ಎಂದರು.

ಅಕ್ರಮಗಳ ವಿರುದ್ದ ಧ್ವನಿ ಎತ್ತಿದವರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಹೋರಾಟದಲ್ಲಿ ಸಕ್ರಿಯ ವಾಗಿ ಪಾಲ್ಗೊಂಡ ಜನಪ್ರತಿನಿಧಿಗಳ ಮೇಲೆ ಸುಳ್ಳು ಕೇಸು ದಾಖಲಿಸಿ ಪೊಲೀಸ್‌ ಸ್ಟೇಷನ್‌ಗೆ ಕರೆಸುವ ಕೆಲಸ ಬಾರ್‌ ಮಾಲಕರಿಂದ ನಡೆಯುತ್ತಿದೆ ಎಂದು ಹೋರಾಟ ಸಮಿತಿ ಗೌರವಾಧ್ಯಕ್ಷ ಸರ್ವೋತ್ತಮ ಗೌಡ ಆರೋಪಿಸಿದರು.

ವೇದಿಕೆ ತಾಲೂಕು ಸಮಿತಿ ಸದಸ್ಯ ನಾರಾಯಣ ರೈ,  ನೀತಿ ಟ್ರಸ್ಟ್‌ ನ ರಾಜ್ಯಾಧ್ಯಕ್ಷ ಜಯನ್‌ ಟಿ., ಬೆಳ್ತಂಗಡಿ ತಾಲೂಕು ಡಿವೈಎಫೈ ಅಧ್ಯಕ್ಷ ಧನಂಜಯ ಗೌಡ ಪಟ್ರಮೆ,ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ತಾಲೂಕು ಯೋಜನಾಧಿಕಾರಿ ಧರ್ಣಪ್ಪ ಮೂಲ್ಯ, ಜನ ಜಾಗೃತಿ ತಾ.ಪಂ. ಸದಸ್ಯ ನಾರಾಯಣ ಭಟ್‌, ನೆಲ್ಯಾಡಿ ವಲಯ ಮೇಲ್ವಿಚಾರಕ ಧರ್ನಪ್ಪ ಗೌಡ,  ದಲಿತ ಸೇವಾ ಸಮಿತಿ ನೆಲ್ಯಾಡಿ-ಕೌಕ್ರಾಡಿ ಅಧ್ಯಕ್ಷ ಆನಂದ ಕೆ.ಪಿ., ಇಚಿಲಂಪಾಡಿ ತಾ.ಪಂ. ಸದಸ್ಯೆ ವಲ್ಸಮ್ಮ ಕೆ.ಟಿ., ಬಿಳಿನೆ ತಾ.ಪಂ. ಸದಸ್ಯೆ ಆಶಾ ಲಕ್ಷ್ಮಣ್‌, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಜಯಾನಂದ ಬಂಟ್ರಿಯಾಲ್‌, ಕೌಕ್ರಾಡಿ ತಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ, ನೆಲ್ಯಾಡಿ ತಾ.ಪಂ. ಸದಸ್ಯೆ ಉಷಾ ಅಂಚನ್‌, ಗೆಳತಿ ಯುವತಿ ಮಂಡಲದ ಅಧ್ಯಕ್ಷೆ ವಿಜಯಾ, ನೆಲ್ಯಾಡಿ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಜಯೇಶ್‌ ವಿ.ಜೆ.ಉಪಸ್ಥಿತರಿದ್ದರು. ಹೋರಾಟ ಸಮಿತಿ ಅಧ್ಯಕ್ಷ ರವಿಚಂದ್ರ ಸ್ವಾಗತಿಸಿ, ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಸದಸ್ಯ ಗಂಗಾಧರ ಶೆಟ್ಟಿ ನಿರೂಪಿಸಿದರು.

ಮನವಿ ಸಲ್ಲಿಕೆ
ಪ್ರತಿಭಟನ ಸ್ಥಳಕ್ಕೆ ಆಗಮಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾ ಯಿತು. ಮನವಿ ಸ್ವೀಕರಿಸಿದ ಅಬಕಾರಿ ಡಿವೈಎಸ್‌ಪಿ ಮುರಳೀಧರರವರು ಮಾತನಾಡಿ, ಬಾರ್‌ನ ಮಾಲಕರು ಪಂಚಾಯತ್‌ ರಸ್ತೆ ಮೂಲಕ ದಾರಿಯ ನೀಲ ನಕಾಶೆ ತೋರಿಸಿದ್ದಕ್ಕೆ ಅನುಮತಿ ನೀಡಲಾಗಿದೆ. ಇಲ್ಲಿ ನೀಡಿರುವ ಮನವಿಯನ್ನು ಅಬಕಾರಿ ಜಿಲ್ಲಾಧಿಕಾರಿಗಳಿಗೆ ಕಳಿಸುವುದಾಗಿ ಭರವಸೆ ನೀಡಿದರು. ನೆಲ್ಯಾಡಿ ಸಂತ ಜಾರ್ಜ್‌ ವಿದ್ಯಾಸಂಸ್ಥೆಯ ಬಳಿಯಿಂದ ನೆಲ್ಯಾಡಿ ಪೇಟೆವರೆಗೆ ಬೃಹತ್‌ ಪ್ರತಿಭಟನ ಮೆರವಣಿಗೆ ನಡೆಯಿತು. ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಹಲವಾರು ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡರು.

ಟಾಪ್ ನ್ಯೂಸ್

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

hk-patil

John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್

Supreme Court: ಆರೋಪಿ, ಅಪರಾಧಿ ಮನೆಯನ್ನು ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು

3-belagavi

Belagavi: ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

1-vitla

Vitla: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರಿನ ಬ್ರೇಕ್ ಫೇಲ್ ಆಗಿ ಪಲ್ಟಿ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

1(1

Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !

army-1

Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್‌ʼ ಚಿತ್ರದ ಟೈಟಲ್‌ ಬದಲಾವಣೆ

arrested

ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.