ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ 11ನೇ ದಿನಕ್ಕೆ
Team Udayavani, Jun 2, 2018, 11:23 AM IST
ಪುತ್ತೂರು: ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸು ವಂತೆ ಆಗ್ರಹಿಸಿ ಪುತ್ತೂರು ಪ್ರಧಾನ ಅಂಚೆ ಕಚೇರಿಯ ಎದುರು ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಧರಣಿ ಶುಕ್ರವಾರ 11ನೇ ದಿನಕ್ಕೆ ಕಾಲಿಟ್ಟಿದೆ.
ಗ್ರಾಮೀಣ ಅಂಚೆ ನೌಕರರ ಬೇಡಿಕೆ ಈಡೇರಿಸುವ ಕುರಿತು ಕೇಂದ್ರದ ನಾಯಕ ರೊಂದಿಗೆ ಮಾತುಕತೆ ನಡೆದಿದೆ. ಆದರೂ ಬೇಡಿಕೆ ಈಡೇರಿಸುವ ಕುರಿತು ಲಿಖಿತ ಭರವಸೆ ದೊರೆಯುವ ತನಕ ನಾವು ಪ್ರತಿಭಟನೆಯನ್ನು ಹಿಂದೆ ಪಡೆಯುವುದಿಲ್ಲ ಎಂದು ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ಬಂಟ್ವಾಳ ವಿಭಾಗದ ಕಾರ್ಯದರ್ಶಿ ಗಣೇಶ್ ಹೇಳಿದರು.
ದಿಲ್ಲಿ ಚಲೋ
ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ 10 ದಿನಗಳಿಂದ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಕುರಿತು ಮಾತುಕತೆಗಳು ನಡೆಯುತ್ತಿವೆ. ಆದರೆ ಲಿಖಿತ ಭರವಸೆಗಳು ದೊರೆತಿಲ್ಲ. ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಹಮ್ಮಿಕೊಳ್ಳ ಲಾಗಿದ್ದು, ಸಾವಿರಾರು ನೌಕರರು ಹೊಸದಿಲ್ಲಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸರಕಾರದಿಂದ ಲಿಖಿತ ಭರವಸೆ ದೊರೆಯದಿದ್ದಲ್ಲಿ ಇಲಾಖೆ ನೌಕರರೂ ಜೂ. 4ರಿಂದ ನಮ್ಮ ಜೊತೆ ಕೈಜೋಡಿಸಲಿದ್ದು, ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಅಂಚೆ ಇಲಾಖೆಯು ಹಣಕಾಸಿನ ಪ್ರಮುಖ ವ್ಯವಹಾರ ಕೇಂದ್ರವಾಗಿದೆ. ಹತ್ತು ದಿನಗಳಿಂದ ಪತ್ರಗಳು ಬಟವಾಡೆ ಆಗದೇ ಕಚೇರಿಯಲ್ಲಿಯೇ ಉಳಿದಿವೆ. ಶಾಲೆ, ಕಾಲೇಜುಗಳು ಆರಂಭಗೊಂಡಿದ್ದು, ಅಗತ್ಯ ದಾಖಲೆ ಪತ್ರಗಳು ಬಟವಾಡೆ ಆಗದೆ ಕಚೇರಿಯಲ್ಲಿಯೇ ರಾಶಿ ಬಿದ್ದಿವೆ. ಸಾರ್ವಜನಿಕರಿಗೆ ಇಷ್ಟೊಂದು ತೊಂದರೆ ಉಂಟಾಗುತ್ತಿದ್ದರೂ ಇಲಾಖೆ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indira Gandhi ಮುಂದೆ ಅಮಿತ್ ಶಾ ಬಚ್ಚಾ!: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ
BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!
Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ
Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.