ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ 

Team Udayavani, Oct 29, 2017, 2:54 PM IST

29-Mng–12.jpg

ಪುತ್ತೂರು: ಎರಡು ವರ್ಷಗಳಿಂದ ಬೇಡಿಕೆ ಮುಂದಿಡುತ್ತಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆಗ್ರಹಿಸಿ ತಾಲೂಕು ಪಂಚಾಯತ್‌ ಸದಸ್ಯೆ ಕೆ.ಟಿ. ವಲ್ಸಮ್ಮ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ತಾ.ಪಂ. ಸಾಮಾನ್ಯ ಸಭೆ ನಡೆಯಿತು.
ಸಭೆ ಆರಂಭವಾಗುತ್ತಿದ್ದಂತೆ ಕಪ್ಪು ಬಟ್ಟೆ ಹೊದ್ದುಕೊಂಡು ಆಗಮಿಸಿದ ಕೆ.ಟಿ. ವಲ್ಸಮ್ಮ, ವೇದಿಕೆಯಲ್ಲಿದ್ದವರಿಗೆ ಮನವಿ ನೀಡಿದರು. ಬಳಿಕ ಕಪ್ಪು ಬಟ್ಟೆಯನ್ನು ಬಾಯಿಗೆ ಕಟ್ಟಿ ಸಭೆಯಲ್ಲಿ ಕುಳಿತು ಕೊಂಡರು. ಇವರ ಪರವಾಗಿ ಸದಸ್ಯೆ ಉಷಾ ಅಂಚನ್‌ ವಿಷಯ ಪ್ರಸ್ತಾಪಿಸಲು ಮುಂದಾದರು. ಇದನ್ನು ತಡೆದ ತಾ.ಪಂ. ಇಒ ಜಗದೀಶ್‌, ಮತ್ತೂಮ್ಮೆ ವಿಚಾರವನ್ನು ಹೇಳುವ ಅಗತ್ಯವಿಲ್ಲ. ಮನವಿ ನೀಡಿದ್ದಾರೆ. ಆದರೆ ಸಭೆ ಯಲ್ಲಿ ಮನವಿ ನೀಡಿದ ಕಾರಣ, ಪರಿಶೀಲಿ ಸಲು ಸ್ವಲ್ಪ ಸಮಯ ಬೇಕು. ಬಳಿಕವಷ್ಟೇ ಉತ್ತರಿಸಲಾಗುವುದು ಎಂದರು.

ಮೇಲಧಿಕಾರಿ ಗಮನಕ್ಕೆ ತರುವೆ
ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ್‌ ಮಾತನಾಡಿ, ಸೀಮಿತ ಅನುದಾನವಿದ್ದರೂ ಇರುವುದನ್ನು ಸಮಾನವಾಗಿ ಹಂಚಲಾಗಿದೆ. ಇದು ಸದಸ್ಯ ರಿಗೂ ಗೊತ್ತಿದೆ. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇನೆ. ಕೆಡಿಪಿ ಸಭೆ ಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆ ಹಿಂದೆಗೆದುಕೊಳ್ಳಿ ಎಂದು ಮನವಿ ಮಾಡಿಕೊಂಡರು.

ಜಿಲ್ಲಾ ಪಂಚಾಯತ್‌ ಸದಸ್ಯ ಸರ್ವೋತ್ತಮ ಗೌಡ ಮಾತನಾಡಿ, ಇದಕ್ಕೆ ಉತ್ತರ ನೀಡ ಬೇಕಾದವರು ಕಂದಾಯ
ಇಲಾಖೆ ಅಧಿಕಾರಿಗಳು. ಸದಸ್ಯೆ ನೀಡಿದ ಮನವಿಯಲ್ಲಿ ಹೆಚ್ಚಿನ ಬೇಡಿಕೆಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟಿದೆ ಎಂದರು.

ಪಠ್ಯಪುಸಕ ಕೊರತೆ 
ಪುತ್ತೂರು ತಾಲೂಕಿನ ಪ್ರಾಥಮಿಕ ಶಾಲೆಗಳು ಆರಂಭವಾಗಿ ಆರು ತಿಂಗಳು ಕಳೆಯಿತು. ಆದರೆ 3 ಸಾವಿರ ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ಕೊರತೆ ಇದೆ ಎಂಬ ಮಾಹಿತಿಯನ್ನು ಸಭೆಗೆ ನೀಡಲಾಯಿತು. ಇದು ಸದಸ್ಯೆ ಆಕ್ರೋಶಕ್ಕೂ ಕಾರಣವಾಯಿತು.  

ಈ ಬಗ್ಗೆ ಮಾತನಾಡಿದ ಸದಸ್ಯೆ ತೇಜಸ್ವೀನಿ, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಹೀಗಾಗಿದೆ. ಕೆಲವೇ ದಿನದಲ್ಲಿ ಪರೀಕ್ಷೆಗಳು ಬರಲಿವೆ. ಇದಕ್ಕೆ 3 ಸಾವಿರ ವಿದ್ಯಾರ್ಥಿಗಳು ಏನು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಉಷಾ ಅಂಚನ್‌ ವಿವರಣೆ ಕೇಳಿದರು. 

ಉತ್ತರಿಸಿದ ಶಿಕ್ಷಣ ಸಂಯೋಜನಾಧಿಕಾರಿ, ಮುಖ್ಯಶಿಕ್ಷಕರು ಬೇಡಿಕೆ ಸಲ್ಲಿಸಿದ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದೆ. ಆದರೆ ಹೆಚ್ಚುವರಿ ಬೇಡಿಕೆಯ ಪಠ್ಯಪುಸ್ತಕ ಸರಬರಾಜಾಗಿಲ್ಲ.  ಈ ಬಗ್ಗೆ ಮೇಲಧಿಕಾರಿಗಳಲ್ಲಿ ಪ್ರಶ್ನಿಸಿದಾಗ, ಮುದ್ರಣ ಆಗಿಲ್ಲ ಎಂಬ ಉತ್ತರ ನೀಡಿದ್ದಾರೆ ಎಂದರು. 

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

police crime

ಕೊಳತ್ತಮಜಲಿನಲ್ಲಿ ಹೊಡೆದಾಟ; ಎರಡು ಪ್ರತ್ಯೇಕ ಪ್ರಕರಣ ದಾಖಲು

police

Bantwal: ಹಾಡಹಗಲೇ ಮನೆಯಿಂದ ನಗದು ಕಳವು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.