ಮಂಗಳೂರು;ಶಾಲಾ ಬಸ್ ಮೇಲೆ ಉರುಳಿದ ಮರ – 17 ಮಕ್ಕಳು ಪ್ರಾಣಾಪಾಯದಿಂದ ಪಾರು
Team Udayavani, Aug 14, 2019, 10:42 AM IST
ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನವೊಂದರ ಮೇಲೆ ಮರ ಉರುಳಿಬಿದ್ದ ಘಟನೆ ಬುಧವಾರದಂದು ನಡೆದಿದೆ. ಮಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಸೇರಿದ ಬಸ್ ಇದಾಗಿದ್ದು ಘಟನೆಯ ಸಂದರ್ಭದಲ್ಲಿ ಬಸ್ಸಿನಲ್ಲಿ 17 ಜನ ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ನಗರದ ನಂತೂರು ವೃತ್ತದ ಬಳಿ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ಸಿನ ಒಳಗಿದ್ದ ಮಕ್ಕಳು ಭಯಗೊಂಡಿದ್ದರು. ಬಳಿಕ ಮಕ್ಕಳ ಸಹಿತ ಬಸ್ಸಿನಲ್ಲಿದ್ದವರನ್ನು ಸುರಕ್ಷಿತವಾಗಿ ಇಳಿಸಿ ಬದಲೀ ವ್ಯವಸ್ಥೆಯ ಮೂಲಕ ಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಡಿಸಿಪಿ ಸಹಿತ ಇತರೇ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಸ್ಸಿನಲ್ಲಿ ಸಂಚರಿಸುತ್ತಿದ್ದ ಶಾಲಾ ಮಕ್ಕಳ ಸಹಿತ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿಯನ್ನು ಸಂಬಂಧಿತ ಶಾಲೆಯ ಪ್ರಾಂಶುಪಾಲರು ತನಗೆ ನೀಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರಾಗಿರುವ ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.