ದ.ಕ.: ಆ. 30ರಿಂದ ಪಿಯು ತರಗತಿ


Team Udayavani, Aug 24, 2021, 7:04 AM IST

Untitled-2

ಸಾಂದರ್ಭಿಕ ಚಿತ್ರ

ಮಂಗಳೂರು: ದ. ಕ. ಜಿಲ್ಲೆಯಲ್ಲಿ ಕೆಲವು ಷರತ್ತು¤ಗಳಿಗೊಳಪಟ್ಟು ಆ. 30ರಿಂದ ಹಂತಹಂತವಾಗಿ ಪದವಿಪೂರ್ವ ತರಗತಿಗಳನ್ನು ಪ್ರಾರಂಭಿಸಲು ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್‌ ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ನಿರ್ಧರಿಸಲಾಗಿದೆ.

ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿರಬೇಕು. ಕ್ವಾರಂಟೈನ್‌ನಿಂದ ಹೊರಬಂದ ಅನಂತರ ಮತ್ತೂಮ್ಮೆ ಆರ್‌ಟಿಪಿಸಿಆರ್‌ ತಪಾಸಣೆ ಮಾಡಿಸಿ ಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು. ಇದೇ ಆಧಾರದಲ್ಲಿ ಮುಂದಿನ ದಿನಗಳಲ್ಲಿ 9, 10ನೇ ತರಗತಿಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಲೇಜುಗಳಿಗೆ ಸೂಚನೆ :

ವಿದ್ಯಾರ್ಥಿಗಳು ಸುರಕ್ಷಿತವಾಗಿ ಕಾಲೇಜಿಗೆ ಹಾಜರಾಗುವ ಬಗ್ಗೆ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿ ಸಿದ್ಧಪಡಿಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಕಾರದ ಎಸ್‌ಒಪಿಯಂತೆ ಕ್ರಮ ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಡಿಸಿ ತಿಳಿಸಿದರು.

ಸಚಿವ ಎಸ್‌. ಅಂಗಾರ ಮಾತನಾಡಿ, ಕೋವಿಡ್‌ ಸೋಂಕಿನ ಈ ಸಂದರ್ಭದಲ್ಲಿ ಕಾಲೇಜುಗಳ ಕೈಗೊಳ್ಳುವ ನಿಯಮಗಳನ್ನು ಕೂಡಲೇ ತಿಳಿಸಬೇಕು ಎಂದರು. ಈ ಹಿಂದೆ ಎಸೆಸೆಲ್ಸಿ ಹಾಗೂ ಇತರ ಪರೀಕ್ಷೆಗಳನ್ನು ನಡೆಸಿದ ವೇಳೆ ಕೈಗೊಂಡ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಿದರು.

ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾೖಕ್‌, ಹರೀಶ್‌ ಪೂಂಜ, ಪ್ರತಾಪ್‌ಚಂದ್ರ ನಾಯಕ್‌ ಮಾತನಾಡಿದರು. ಮೇಯರ್‌ ಪ್ರೇಮಾನಂದ ಶೆಟ್ಟಿ, ಎಸ್‌ಪಿ ಹೃಷಿಕೇಶ್‌ ಭಗವಾನ್‌ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಜಿ.ಪಂ. ಉಪಕಾರ್ಯದರ್ಶಿ ಆನಂದ್‌ ಕುಮಾರ್‌, ಎಡಿಸಿ ಪ್ರಜ್ಞಾ ಅಮ್ಮೆಂಬಳ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.