ಪಿಯು ಪರೀಕ್ಷೆ ದೈನಂದಿನ ಸಮಗ್ರ ಮಾಹಿತಿ ಆನ್‌ಲೈನ್‌ನಲ್ಲಿ

Team Udayavani, Mar 2, 2020, 7:35 AM IST

puc-summery

ಮಂಗಳೂರು: ಇದೇ ಮೊದಲ ಬಾರಿಗೆ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳ ದೈನಂದಿನ ಸಮಗ್ರ ಮಾಹಿತಿಯು ಪರೀಕ್ಷೆ ಮುಗಿದ ಕೂಡಲೇ ಆನ್‌ಲೈನ್‌ನಲ್ಲಿ ಲಭಿಸಲಿದೆ. ಈ ಸಂಬಂಧ ರಾಜ್ಯದ 1,016 ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದ್ದು, ಪರೀಕ್ಷೆಗಳನ್ನು ಇನ್ನಷ್ಟು ಪಾರದರ್ಶಕಗೊಳಿಸುವುದು ಉದ್ದೇಶ.

ಪ್ರತಿ ವರ್ಷವೂ ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭ ಆಯಾ ದಿನದ ಹಾಜರಾತಿ ಇತ್ಯಾದಿ ಮಾಹಿತಿಯನ್ನು ನಿಗದಿತ ಕೇಂದ್ರಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು ಕೈಬರಹದಲ್ಲಿ ಜಿಲ್ಲಾ ಮಟ್ಟಕ್ಕೆ ಕಳುಹಿಸಬೇಕಿತ್ತು. ಅನಂತರ ಅದು ಬೆಂಗಳೂರಿನಲ್ಲಿರುವ ಇಲಾಖೆಯ ಮುಖ್ಯ ಕಚೇರಿಗೆ ರವಾನೆಯಾಗುತ್ತಿತ್ತು. ಈ ಪ್ರಕ್ರಿಯೆಗೆ ಕನಿಷ್ಠ ಮೂರು ದಿನ ಬೇಕಾಗುತ್ತಿತ್ತು. ಈ ಬಾರಿ ಪರೀಕ್ಷೆ ಮುಗಿದ ಕೂಡಲೇ ಸಂಬಂಧಿತ ಮಾಹಿತಿಗಳು ಲಭ್ಯವಾಗುವಂತೆ ಆನ್‌ಲೈನ್‌ ಅಪ್‌ಡೇಟ್‌ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

ತತ್ಕಾಲಕ್ಕೆ 5 ರೀತಿಯ ಮಾಹಿತಿ
ಈ ಬಾರಿ ಎಲ್ಲ ಜಿಲ್ಲಾ ಕೇಂದ್ರಗಳಿಂದ ಪ್ರತಿ ಪರೀಕ್ಷಾ ಕೇಂದ್ರದ ಐದು ರೀತಿಯ ದೈನಂದಿನ ಮಾಹಿತಿಗಳು ಇಲಾಖೆಯ ವೆಬ್‌ಸೈಟ್‌ನಲ್ಲೇ ಅಪ್‌ಡೇಟ್‌ ಆಗಲಿವೆ. ಪ್ರಶ್ನೆಪತ್ರಿಕೆಯು ಪರೀಕ್ಷಾ ಕೇಂದ್ರಗಳಿಗೆ ತಲುಪಿದ ಸಮಯ, ವಿದ್ಯಾರ್ಥಿಗಳ ಒಟ್ಟು ಸಂಖ್ಯೆ, ಹಾಜರು, ಗೈರುಹಾಜರು ಸಂಖ್ಯೆ, ಪರೀಕ್ಷಾ ಅಕ್ರಮಗಳು ನಡೆದಿದ್ದರೆ ಆ ಮಾಹಿತಿ, ಪರೀಕ್ಷಾ ಕೇಂದ್ರಗಳಲ್ಲಿರುವ ಅಧಿಕಾರಿಗಳ ಹೆಸರು, ಉಪಯೋಗಿಸಿದ ಪ್ರಶ್ನೆಪತ್ರಿಕೆಗಳ ಸಂಖ್ಯೆ ಇತ್ಯಾದಿಗಳನ್ನು ಆಯಾ ದಿನ ಅಧಿಕಾರಿಗಳು ಅಪ್‌ಡೇಟ್‌ ಮಾಡಬೇಕು.

ಪಾರದರ್ಶಕತೆ ಮತ್ತು ಕ್ಷಿಪ್ರವಾಗಿ ಮಾಹಿತಿ ಪಡೆಯುವ ಉದ್ದೇಶದಿಂದ ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಪರೀಕ್ಷೆಗೆ 6.79 ಲಕ್ಷ ವಿದ್ಯಾರ್ಥಿಗಳು
ಮಾ.4ರಿಂದ 23ರ ವರೆಗೆ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ವಿಜ್ಞಾನ ವಿಭಾಗದ 2.17 ಲಕ್ಷ, ವಾಣಿಜ್ಯ ವಿಭಾಗದ 2.61 ಲಕ್ಷ, ಕಲಾ ವಿಭಾಗದ 2.01 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಪಿಯುಸಿ ಪರೀಕ್ಷೆಯಲ್ಲಿ ಪಾರದರ್ಶಕ ವ್ಯವಸ್ಥೆ ಮತ್ತು ತತ್‌ಕ್ಷಣದ ಮಾಹಿತಿ ಸಿಗುವಂತಾಗಲು ಇದೇ ಮೊದಲ ಬಾರಿಗೆ ಪರೀಕ್ಷೆ ಮಾಹಿತಿಗಳನ್ನು ಅಪ್‌ಡೇಟ್‌ ಮಾಡಲು ಆನ್‌ಲೈನ್‌ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಎಲ್ಲ ಜಿಲ್ಲಾ ಕೇಂದ್ರಗಳ ಎಲ್ಲ ಸೆಂಟರ್‌ಗಳಿಂದ ಮಾಹಿತಿಗಳು ಇಲಾಖೆ ವೆಬ್‌ಸೈಟ್‌ನಲ್ಲೇ ಅಪ್‌ಡೇಟ್‌ ಆಗಲಿವೆ. ಇದರಿಂದ ಕೇಂದ್ರ ಕಚೇರಿಗೆ ಸಕಾಲಕ್ಕೆ ಮಾಹಿತಿ ಸಿಗಲಿದೆ.
– ಕಲ್ಲಯ್ಯ, ಜಂಟಿ ನಿರ್ದೇಶಕರು (ಪರೀಕ್ಷಾಂಗ), ಪ.ಪೂ. ಶಿಕ್ಷಣ ಇಲಾಖೆ, ಬೆಂಗಳೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.