ಸಂಚಾರಕ್ಕೆ ಮುಕ್ತಗೊಂಡು ವಾರ ಕಳೆಯುವುದರೊಳಗೆ ಅಪಘಾತ: ವ್ಯಾಪಕ ಚರ್ಚೆ

ಪಂಪ್‌ವೆಲ್‌ ಫ್ಲೈಓವರ್‌

Team Udayavani, Feb 11, 2020, 5:59 AM IST

kemmu-26

ಪಂಪ್‌ವೆಲ್‌ ಫ್ಲೈಓವರ್‌.

ಮಹಾನಗರ: ಪಂಪ್‌ವೆಲ್‌ ಫ್ಲೈಓವರ್‌ ಸಂಚಾರಕ್ಕೆ ಮುಕ್ತಗೊಂಡು ವಾರ ಕಳೆಯುವುದರೊಳಗೆ ರಸ್ತೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನಿರ್ಮಾಣ ಕಾಮಗಾರಿ ಪೂರ್ತಿಗೊಳ್ಳಲು 10 ವರ್ಷ ಗಳ ಕಾಲ ತೆಗೆದುಕೊಂಡ ಈ ಫ್ಲೆ$çಓವರ್‌ ಉದ್ಘಾಟನೆಗೊಂಡು ಒಂದು ವಾರ ಆಗು ವಷ್ಟರಲ್ಲಿ ಅಪಘಾತ ಸಂಭವಿಸಿ ರುವ ಬಗ್ಗೆ ವಿವಿಧ ಆರೋಪಗಳು ಕೇಳಿ ಬರುತ್ತಿವೆ.

ಪಂಪ್‌ವೆಲ್‌ ಜಂಕ್ಷನ್‌ನಲ್ಲಿ ನಿರ್ಮಾಣ ಗೊಂಡಿರುವ ಫ್ಲೆ$çಓವರ್‌ ಸೇತುವೆಯಿಂದ ಉಜೊjàಡಿ ಅಂಡರ್‌ ಪಾಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಮತಟ್ಟಾಗಿಲ್ಲ, ಅದು ತಗ್ಗಾ ಗಿದೆ ಮಾತ್ರವಲ್ಲದೆ ಅಲ್ಲಿ ತಿರುವು ಕೂಡ ಇದೆ. ದಕ್ಷಿಣ ದಿಕ್ಕಿನ ಉಜೊjàಡಿಯಲ್ಲಿ ಮತ್ತು ಉತ್ತರ ದಿಕ್ಕಿನಲ್ಲಿ ಕರ್ಣಾಟಕ ಬ್ಯಾಂಕ್‌ ಪ್ರಧಾನ ಕಚೇರಿ ಬಳಿಯಿಂದ ಆಚೆಗೆ ಎತ್ತರ ಪ್ರದೇಶ ಇದ್ದು, ಈ ಎತ್ತರದ ಭಾಗದಿಂದ ವಾಹನ ಗಳು ವೇಗವಾಗಿ ಬರುವುದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಕಾರಣ ಆಗುತ್ತದೆ. ಫ್ಲೈಓವರ್‌ನ್ನು ಕೊನೆಯ ಹಂತದಲ್ಲಿ ಅವಸರವಸರವಾಗಿ ನಿರ್ಮಾಣ ಮಾಡಿರುವುದರಿಂದ ಮಳೆಗಾಲದಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂಬಿತ್ಯಾದಿ ಆರೋಪಗಳನ್ನು ಮಾಡಲಾಗುತ್ತಿದೆ.

ಶನಿವಾರ ಸಂಜೆ ಈ ಫ್ಲೈಓವರ್‌ ಮೇಲೆ ಸಂಭವಿಸಿದ ಅಪಘಾತದಲ್ಲಿ ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ವೇಗ ವಾಗಿ ಚಲಿ ಸುತ್ತಿದ್ದ ಆಲ್ಟೊ ಕಾರು ಚಾಲ ಕನ ನಿಯಂತ್ರಣ ತಪ್ಪಿ ಬಲಗಡೆ ಇದ್ದ ಡಿವೈಡರ್‌ ದಾಟಿ ವಿರುದ್ಧ ದಿಕ್ಕಿನ ರಸ್ತೆ ಯಲ್ಲಿ ಉಜೊjಡಿಯಿಂದ ನಂತೂರು ಕಡೆ ಸಂಚರಿಸುತ್ತಿದ್ದ ಡಸ್ಟರ್‌ ಕಾರಿಗೆ ಢಿಕ್ಕಿ ಹೊಡೆದು ಬಳಿಕ ಪಲ್ಟಿ ಹೊಡೆದು ಸರ್ವಿಸ್‌ ರಸ್ತೆಗೆ ಬಿದ್ದಿತ್ತು. ಈ ಘಟನೆಯಲ್ಲಿ ಡಸ್ಟರ್‌ ಕಾರಿ ನಲ್ಲಿ ಪ್ರಯಾಣಿ ಸುತ್ತಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರು.

ಈ ಅಪಘಾತಕ್ಕೆ ರಸ್ತೆಯ ಸಂರಚನೆ ಕಾರಣವೇ ಅಥವಾ ಆಲ್ಟೋ ಕಾರಿನ ಚಾಲ ಕನ ಅಜಾಗ್ರತೆ ಮತ್ತು ಅತಿ ವೇಗದ ಚಾಲನೆ ಕಾರಣವೇ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಾಗಿದೆ.
ಆದರೆ ಈಗ ಕೇಳಿ ಬರುತ್ತಿರುವ ಬಹುತೇಕ ಆರೋಪಗಳು ರಸ್ತೆ ಕಾಮಗಾರಿಯ ಸ್ವರೂಪದ ಕಡೆಗೆ ಬೆಟ್ಟು ಮಾಡುತ್ತಿವೆ. ಈ ರಸ್ತೆಯಲ್ಲಿ ದಿನ ನಿತ್ಯ ವಾಹನ ಚಲಾಯಿಸಿಕೊಂಡು ಹೋಗುತ್ತಿರುವ ಚಾಲಕರು ಕೂಡ ರಸ್ತೆಯ ತಾಂತ್ರಿಕ ಸ್ವರೂಪವನ್ನು ದೂರುತ್ತಿದ್ದಾರೆ.

ಬುಧವಾರ ಸತ್ಯ ಶೋಧನ ತಂಡ ಭೇಟಿ
ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಪಂಪ್‌ ವೆಲ್‌ ಫ್ಲೈಓವರ್‌ ಮೇಲೆ ಅಪಘಾತ ಸಂಭ ವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವುದು ನಮ್ಮ ಗಮನಕ್ಕೆ ಬಂದಿದೆ. ನಮ್ಮ ಸತ್ಯ ಶೋಧನ ತಂಡವು ಬುಧವಾರ (ಫೆ.12) ಅಪಾರಹ್ನ 3 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಫ್ಲೈಓವರ್‌ ಕಾಮಗಾರಿ ಕುರಿತಂತೆ ಪರಿಶೀಲನೆ ನಡೆಸಲಿದೆ. ಶಾಸಕ, ಮಾಜಿ ಸಚಿವ ಯು.ಟಿ. ಖಾದರ್‌, ವಿ.ಪ.ಸದಸ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಸಚಿವ ರಮಾನಾಥ ರೈ ಮತ್ತಿತರರು ತಂಡದಲ್ಲಿರಲಿದ್ದಾರೆ. ಕಾಮಗಾರಿಯಲ್ಲಿ ಲೋಪ ದೋಷಗಳು ಕಂಡು ಬಂದರೆ ಅವುಗಳನ್ನು ಸರಿ ಪಡಿಸುವಂತೆ ಒತ್ತಾಯಿ ಸಲಾ ಗುವುದು. ಸರಿಪಡಿಸದಿದ್ದರೆ ಪ್ರತಿಭ ಟನೆ ಯನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಉದಯವಾಣಿಗೆ ತಿಳಿಸಿದ್ದಾರೆ.

ನಮಗೆ ಯಾವ ದೂರುಗಳೂ ಬಂದಿಲ್ಲ
ಪಂಪ್‌ವೆಲ್‌ ಫ್ಲೈಓವರ್‌ ಸಮತಟ್ಟಿನಲ್ಲಿರದೆ ಏರು ತಗ್ಗುಗಳಿಂದ ಹಾಗೂ ತಿರುವಿನಿಂದ ಕೂಡಿದೆ ಎಂಬ ಆರೋಪಗಳು ನಮ್ಮ ಗಮನಕ್ಕೆ ಬಂದಿವೆ. ಆದರೆ ಈ ಬಗ್ಗೆ ಯಾರಿಂದಲೂ ದೂರುಗಳು ಬಂದಿಲ್ಲ. ಅಲ್ಲಿ ನಡೆದ ಅಪಘಾತದ ಕುರಿತಂತೆ ತನಿಖೆ ನಡೆಯುತ್ತಿದೆ.
 - ಲಕ್ಷ್ಮೀ ಗಣೇಶ್‌, ಡಿಸಿಪಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.