ಕಾಮಗಾರಿ ಸ್ಥಳದಲ್ಲಿ ವಾಹನ ನಿಲ್ಲಿಸದಂತೆ ಸಂಸದರಿಂದ ಸೂಚನೆ
Team Udayavani, Jul 6, 2018, 11:16 AM IST
ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಂಪ್ ವೆಲ್ ಬಳಿ ಫ್ಲೈ ಓವರ್ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಹೊಂದಿಕೊಂಡಂತೆ ತೊಕ್ಕೊಟ್ಟು ಮಾರ್ಗದ ಕಾಮಗಾರಿ ನಡೆಯಬೇಕಾದ ಜಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿ ಮಾಡಲಾಗುತ್ತಿದೆ. ಈ ರೀತಿ ಅನಧಿಕೃತವಾಗಿ ವಾಹನ ನಿಲ್ಲಿಸುವುದಕ್ಕೆ ಅನುಮತಿ ನೀಡಬಾರದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಟ್ರಾಫಿಕ್ ಪೊಲೀಸರಿಗೆ ಸೂಚಿಸಿದ್ದಾರೆ.
ಎನ್‌ಎಚ್‌ಎಐ ಮತ್ತು ನವಯುಗ ಗುತ್ತಿಗೆದಾರ ಸಂಸ್ಥೆಯ ಅಧಿಕಾರಿಗಳೊಂದಿಗೆ ಗುರುವಾರ ತೊಕ್ಕೊಟ್ಟು, ತಲಪಾಡಿ, ಪಂಪ್‌ವೆಲ್, ನಂತೂರು, ಕೊಟ್ಟಾರ ಹಾಗೂ ಸುರತ್ಕಲ್‌ಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ವೀಕ್ಷಣೆ ಮಾಡಿದ ಸಂದರ್ಭ ಅವರು ಅಧಿಕಾರಿಗಳಿಗೆ ಈ ಸೂಚನೆ ಕೊಟ್ಟಿದ್ದಾರೆ.
ಫ್ಲೈಓವರ್ ನಿರ್ಮಾಣದ ಸಂಪರ್ಕ ರಸ್ತೆಯ ಮಧ್ಯ ಭಾಗದ ಖಾಲಿ ವಾಹನಗಳನ್ನು ನಿಲ್ಲಿಸುವುದರಿಂದ ಸರ್ವಿಸ್ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಅಡ್ಡಿಯಾಗಿ ನಿತ್ಯ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿ ಇನ್ನುಮುಂದೆ ವಾಹನಗಳ ನಿಲುಗಡೆ ಮಾಡಲು ಅವಕಾಶ ನೀಡಬಾರದು ಎಂದು ಹೇಳಿದರು.
ಪಂಪ್‌ವೆಲ್‌ನಲ್ಲಿ ಮೇಲ್ಸೇತುವೆ ಪೂರ್ತಿಗೊಳಿಸುವ ಮೊದಲು ಸರ್ವೀಸ್ ರಸ್ತೆಯ ನಿರ್ಮಾಣ ಆಗಬೇಕು ಎಂದವರು ಸೂಚನೆ ನೀಡಿದರು. ಎನ್‌ಎಚ್‌ಎಐ ಅಧಿಕಾರಿ ಅಜಿತ್, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್, ಸತೀಶ್ ಕುಂಪಲ, ಲಲಿತಾ ಸುಂದರ್ ತೊಕ್ಕೊಟ್ಟು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.