ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗುಣಮುಖ
Team Udayavani, Jan 15, 2023, 6:40 AM IST
ಮಂಗಳೂರು: ನಾಗುರಿಯಲ್ಲಿ ನ. 19ರಂದು ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಪುರುಷೋತ್ತಮ ಅವರು ಪೂರ್ಣವಾಗಿ ಗುಣಮುಖಗೊಂಡಿದ್ದಾರೆ ಎಂದು ಅವರು ಚಿಕಿತ್ಸೆ ಪಡೆದ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಉದಯ ಕುಮಾರ್ ಕೆ. ತಿಳಿಸಿದ್ದಾರೆ.
ಪುರುಷೋತ್ತಮ ಅವರು ಸೋಂಕಿನಿಂದ ರಕ್ಷಿಸಿಕೊಳ್ಳಲು ಇನ್ನೂ ಕನಿಷ್ಠ ಒಂದು ತಿಂಗಳ ಕಾಲ ಮನೆಯಲ್ಲೇ ಉಳಿದುಕೊಳ್ಳುವಂತೆ ವೈದ್ಯರು ಸೂಚಿಸಿರುವುದಾಗಿ ಅವರ ಮನೆಯವರು ತಿಳಿಸಿದ್ದಾರೆ. ಪುರುಷೋತ್ತಮ ಅವರ ಮನೆ ದುಃಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಗುರು ಬೆಳದಿಂಗಳು ಫೌಂಡೇಶನ್ ಮೂಲಕ ದುರಸ್ತಿ ಕೈಗೊಳ್ಳಲಾಗಿದೆ. ಹೀಗಾ ಗಿ ಕುಟುಂಬ ಸದ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.
ಪರಿಹಾರ ಇನ್ನೂ ಬಾಕಿ
ಪುರುಷೋತ್ತಮ ಅವರಿಗೆ ಸರಕಾರದಿಂದ ಪರಿಹಾರ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದರು. ಆದರೆ ಪರಿಹಾರ ಇನ್ನಷ್ಟೇ ದೊರೆಯಬೇಕಿದೆ. ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವರು 50,000 ರೂ. ಮತ್ತು ಸುನಿಲ್ ಕುಮಾರ್ 25,000 ರೂ. ನೆರವು ನೀಡಿದ್ದರು. ಪುರುಷೋತ್ತಮ ಅವರ ಚಿಕಿತ್ಸೆಯ ವೆಚ್ಚವನ್ನು ಇಎಸ್‌ಐ ಮತ್ತು ಸರಕಾರದ ವತಿಯಿಂದ ಭರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Manipal: ಅಪಘಾತ ತಡೆಯಲು ಹೀಗೆ ಮಾಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.