ಪುತ್ತೂರು: ಏಳು ಹಂತಗಳ ರಾಜಗೋಪುರ ಲೋಕಾರ್ಪಣೆ
Team Udayavani, Mar 26, 2018, 11:39 AM IST
ಪುತ್ತೂರು: ರಾಮ ನವಮಿಯ ಪುಣ್ಯದಿನದಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಾಜ ಗೋಪುರ ಲೋಕಾರ್ಪಣೆಗೊಂಡಿದೆ. ಏಳು ಹಂತಗಳ ಈ ರಾಜಗೋಪುರ ಉದ್ಘಾಟನೆಯೊಂದಿಗೆ, ಭಕ್ತರ ಬಹುದಿನಗಳ ಬೇಡಿಕೆಯೊಂದು ಈಡೇರಿದಂತಾಗಿದೆ.
ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಮಾ. 25ರಂದು ಬೆಳಗ್ಗೆ 7 ಗಂಟೆಯಿಂದ ಗಣಪತಿ ಹವನ, ಸಹಸ್ರ ಕಲಶಾಭಿಷೇಕ, ಮಧ್ಯಾಹ್ನ 11.28ರ ಮಿಥುನ ಲಗ್ನ ಮುಹೂರ್ತದಲ್ಲಿ ನೂತನ ರಾಜಗೋಪುರದ ಶಿಖರ ಪ್ರತಿಷ್ಠೆ, ಕಲಶಾಭಿಷೇಕ, ರಾಜಗೋಪುರ ಸಮರ್ಪಣೆ, ಉದ್ಘಾಟನೆ, ಸಭಾ ಕಾರ್ಯಕ್ರಮ ನಡೆಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಸಾಮೂಹಿಕ ಅನ್ನಸಂತರ್ಪಣೆ ಜರಗಿತು. ಗೋಪುರದ ಮೇಲ್ಭಾಗದಲ್ಲಿ ಐದು ಕಲಶಗಳನ್ನು ಪ್ರತಿಷ್ಠೆ ಮಾಡಲಾಯಿತು. ಕ್ರೇನ್ ಮೂಲಕ ತಂತ್ರಿಗಳು ಹಾಗೂ ಇತರರು ಗೋಪುರದ ಮೇಲ್ಭಾಗ ತಲುಪಿ, ಧಾರ್ಮಿಕ ವಿಧಿ ನೆರವೇರಿಸಿದರು.
ಸಭಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ಸಂಪುಟ ನರಸಿಂಹಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ
ಸ್ವಾಮೀಜಿ ಆಶೀರ್ವ ಚನ ನೀಡಿದರು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಶಾಸಕರಾದ ವಿನಯ್ ಕುಮಾರ್ ಸೊರಕೆ, ಶಕುಂತಳಾ ಶೆಟ್ಟಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಸ್ಥಪತಿ ಎ. ಶೇಖರ್ ಉಪಸ್ಥಿತರಿದ್ದರು.
ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ವಿವಿಧ ಮಹಿಳಾ ಮಂಡಳಿ ಯಿಂದ ಭಜನ ಸಂಕೀರ್ತನೆ, ಸಂಜೆ 5ರಿಂದ ಭಜನೆ ಮತ್ತು ನೃತ್ಯ ಸಂಭ್ರಮ, ರಾತ್ರಿ 7.30ರಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಿತು. ರಾಜಗೋಪುರ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಶ್ರೀ ಸತ್ಯಸಾಯಿ ಸೇವಾ ಸಮಿತಿ ವತಿಯಿಂದ ಮಜ್ಜಿಗೆ ವ್ಯವಸ್ಥೆ ಮಾಡಲಾಗಿತ್ತು.
ಹೀಗಿದೆ ಗೋಪುರ
ಗುಡಿಯಲ್ಲಿರುವ ದೇವರ ಕಾಲಿನ ಭಾಗವೇ ರಾಜಗೋಪುರ ಎಂಬ ನಂಬಿಕೆಯಿದೆ. ಪುತ್ತೂರು ದೇಗುಲದ ರಾಜಗೋಪುರ ಮಧುರೈ ಶೈಲಿಯಲ್ಲಿದೆ. 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡ ಈ ಭವ್ಯ ರಾಜಗೋಪುರವನ್ನು ತಾಂಬೂಲ ಪ್ರಶ್ನೆಯಲ್ಲಿ ಕಂಡುಬಂದಂತೆ ನಿರ್ಮಿಸಲಾಗಿದೆ. ರಾಜಗೋಪುರದ ಎತ್ತರ 47 ಅಡಿ. ಸುತ್ತಳತೆ 19 ಅಡಿ. ತಳದಲ್ಲಿ ವಿಸ್ತಾರ ಜಾಗವಿದ್ದು, ಮೇಲ್ಭಾಗಕ್ಕೆ ಹೋದಂತೆ ಮೊನಚಾಗುತ್ತಾ ಸಾಗುತ್ತದೆ. ವಿವಿಧ ಶಿಲ್ಪ, ಕಾಷ್ಠಶಿಲ್ಪ, ಶಿಲಾಶಿಲ್ಪ, ರಾಜವೈಭವದ ವಿಗ್ರಹ ಕೆತ್ತನೆಗಳಿವೆ. ಮೇಲ್ಭಾಗದಲ್ಲಿ 5 ಕಲಶಗಳನ್ನು ಪ್ರತಿಷ್ಠಾಪಿಸಲಾಗಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಆನೆ ನಿಷಿದ್ಧ. ಇಲ್ಲಿಗೆ ಆನೆ ಬರುವಂತೆಯೇ ಇಲ್ಲ. ಈ ಹಿನ್ನೆಲೆಯಲ್ಲಿ ರಾಜಗೋಪುರದ ಯಾವುದೇ ಭಾಗದಲ್ಲೂ ಆನೆಯ ಕೆತ್ತನೆ ಇಲ್ಲ ಎನ್ನುವುದು ವಿಶೇಷ.
ಮಾ. 26ರಂದು
ರಾಜಗೋಪುರ ಲೋಕಾರ್ಪಣೆ ಹಿನ್ನೆಲೆ ಯಲ್ಲಿ ಮಾ. 26ರಂದು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಬೆಳಗ್ಗೆ 6ರಿಂದ 7.30ರವರೆಗೆ ರುದ್ರ ಪಾರಾಯಣ, 9ರಿಂದ ಶತರುದ್ರಾಭಿಷೇಕ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ ದೇವರ ಬಲಿ ಉತ್ಸವ, ಬಂಡಿ ಉತ್ಸವ ನಡೆಯಲಿದೆ. ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಭಜನ ಸಂಕೀರ್ತನೆ ನಡೆಯಲಿದೆ. ಸಂಜೆ 4ರಿಂದ 7.30ರವರೆಗೆ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿಯಿಂದ ಭಜನೆ ಮತ್ತು ಮಂಗಲೋತ್ಸವ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.