ಪುತ್ತೂರು ಬ್ಯಾನರ್ ಪ್ರಕರಣ : ಎಲ್ಲಿ ಮುಟ್ಟಿಸಬೇಕೋ ಅಲ್ಲಿಗೆ ಮುಟ್ಟಿಸುತ್ತೇನೆ- ಯತ್ನಾಳ್
Team Udayavani, May 19, 2023, 3:26 PM IST
ಪುತ್ತೂರು: ಒಳಗಿನ ಸತ್ಯ ನಮಗೆ ಗೊತ್ತಿದೆ. ಎಲ್ಲಿ ಮುಟ್ಟಿಸಬೇಕೋ ಅಲ್ಲಿಗೆ ಮುಟ್ಟಿಸುತ್ತೇನೆ ಎಂದು ವಿಜಯಪುರ ನಗರ ಶಾಸಕ, ಬಿಜೆಪಿಯ ಪೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಗರದ ಆಸ್ಪತ್ರೆಯಲ್ಲಿ ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಬಳಿಕ ಮಾಧ್ಯಮದೊಂದಿಗೆ ಘಟನೆಯನ್ನು ಖಂಡಿಸಿ ಮಾತನಾಡಿದ ಯತ್ನಾಳ್, “ಇದರ ಹಿಂದೆ ಏನಿದೆ ಎಂಬುವುದು ಎಲ್ಲರಿಗೂ ತಿಳಿದಿದೆ. ಈ ಘಟನೆ ಪೊಲೀಸ್ ಇಲಾಖೆಗೆ ಗೌರವ ತರುವಂತದ್ದಲ್ಲ. ತಕ್ಷಣ ಡಿವೈಎಸ್ ಪಿ ಯನ್ನು ಅಮಾನತು ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:Virat Kohli ಶತಕದ ಬಗ್ಗೆ ಮೊದಲೇ ಭವಿಷ್ಯ ನುಡಿದಿದ್ದ ಫಾಫ್: ವಿಡಿಯೋ ನೋಡಿ
“ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ ಮರಣಹೋಮ ಆಗಿದೆ. ನಮ್ಮ ಕಡೆಯಿಂದ ತಪ್ಪಾಗದಂತೆ ನೋಡಿಕೊಳ್ಳಬೇಕಿದೆ. ಕಾಂಗ್ರೆಸ್ ಸರ್ಕಾರ ಇದೆಯೆಂದು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಸಹಿಸುವುದಿಲ್ಲ ಎಂದು ಹೇಳಿದರು.
ಕೇಂದ್ರದ ನಾಯಕರಿಗೆ ಘಟನೆ ಬಗ್ಗೆ ಕಾರ್ಯಕರ್ತರ ಭಾವನೆ ಬಗ್ಗೆ ತಿಳಿಸುತ್ತೇನೆ. ನಿಮ್ಮ ಭಾವನೆಗೆ ತಕ್ಕ ನಿರ್ಧಾರವನ್ನು ಕೇಂದ್ರ ತೆಗೆದುಕೊಳ್ಳಲಿದೆ ಎಂದು ಹೇಳಿದರಲ್ಲದೆ ವೈಯಕ್ತಿಕವಾಗಿ 1 ಲಕ್ಷ ರೂಪಾಯಿಯನ್ನು ವೈದ್ಯಕೀಯ ವೆಚ್ಚಕ್ಕಾಗಿ ನೀಡಿದರು. ಯಾರು ನೋವು ಪಡುವ ಅಗತ್ಯವಿಲ್ಲ, ಎಲ್ಲವನ್ನು ಸರಿಪಡಿಸುವ ಕೆಲಸ ಹೈಕಮಾಂಡ್ ಮಾಡಲಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.