Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Team Udayavani, Nov 5, 2024, 7:00 AM IST
ಪುತ್ತೂರು: ರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ಸಿನಾನ್ಗೆ ಪುತ್ತೂರಿನ ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ನೆಕ್ಕಿಲಾಡಿ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂಟ್ವಾಳ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ರಿಕ್ಷಾದಲ್ಲಿ 18 ಸಾವಿರ ರೂ. ಮೌಲ್ಯದ ನಿಷೇಧಿತ ಎಂಡಿ ಎಂಎಯ ಮಾದಕ ವಸ್ತು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ರಿಕ್ಷಾದಲ್ಲಿದ್ದ ಇಬ್ಬರು ಆರೋಪಿಗಳು ಮಾದಕ ಪದಾರ್ಥವನ್ನು ಸಿನಾನ್ ಎಂಬಾಂತ ನೀಡಿರುವುದಾಗಿ ಹೇಳಿಕೆ ನೀಡಿದ್ದರು.
ತಲೆಮರೆಸಿಕೊಂಡಿದ್ದ ಆರೋಪಿ ಸಿನಾನ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿನಾನ್ಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.