ಪುತ್ತೂರು ಸರಕಾರಿ ಆಸ್ಪತ್ರೆ: ಜನೌಷಧ ಕೇಂದ್ರ ಉದ್ಘಾಟನೆ


Team Udayavani, Mar 31, 2017, 10:31 AM IST

3003rjh3.jpg

ಪುತ್ತೂರು: ಮಾರುಕಟ್ಟೆ ಬೆಲೆಗಿಂತ ಕಡಿಮೆ ಎಂದಾಕ್ಷಣ ಜನೌಷಧದ ಗುಣಮಟ್ಟದ ಕುರಿತು ಯಾರಿಗೂ ಅನುಮಾನ ಬೇಡ. ಜನಸಾಮಾನ್ಯರಿಗೆ ಉತ್ತಮ ವೈದ್ಯಕೀಯ ಸೇವೆ ಲಭಿಸಬೇಕೆಂಬ ಉದ್ದೇಶ ದಿಂದ ಕೇಂದ್ರ ಸರಕಾರ ಮಾಡಿರುವ ಯೋಜನೆಯ ಸದು ಪಯೋಗಪಡಿಸಿಕೊಳ್ಳಿ  ಎಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ  ಅವರು ಹೇಳಿದರು.

ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಕಾರದೊಂದಿಗೆ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಪುತ್ತೂರು ಆರಂಭಿಸಿರುವ ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಯಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು.

ಉತ್ತಮ ಯೋಜನೆಯನ್ನು ಜಾರಿಗೆ ತಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಜನ ಔಷಧ ಕೇಂದ್ರದಿಂದಲೇ ಔಷಧ ಪಡೆದುಕೊಳ್ಳಬೇಕು ಎಂದು ಕಾನೂನನ್ನು ಜಾರಿ ಗೊಳಿಸಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಖಾತೆ ಸಚಿವ ರಮೇಶ್‌ ಅವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು.

ಮೇಲ್ಛಾವಣಿಗೆ ಅನುದಾನ
ಪುತ್ತೂರು ಸರಕಾರಿ ಆಸ್ಪತ್ರೆ ಕಟ್ಟಡದ ಮೇಲ್ಛಾವಣಿ ರಚನೆಗೆ ವೈದಾಧಿಕಾರಿಗಳ ಬೇಡಿಕೆಯಂತೆ 5 ಲಕ್ಷ ರೂ. ಮಂಜೂರು ಮಾಡಿಸಿದ್ದೇನೆ. ಇನ್ನೂ 5 ಲಕ್ಷ ರೂ. ಹಣಕ್ಕೆ  ರೋಟರಿಯವರು ಕೈಜೋಡಿ ಸಿದರೆ ಅನುಕೂಲ ವಾಗಬಹುದು ಎಂದು ಶಾಸಕರು ಅಭಿಪ್ರಾಯಿಸಿದರು.

300 ಬೆಡ್‌ನ‌ ಆಸ್ಪತ್ರೆ
ನಗರದ‌ಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಆರಂಭಿಸ ಬೇಕಾದರೆ ಸರಕಾರಿ ಆಸ್ಪತ್ರೆ 300 ಬೆಡ್‌ಗಳ ಆಸ್ಪತ್ರೆಯಾಗ ಬೇಕು. ಈಗ 100 ಬೆಡ್‌ನ‌ ಆಸ್ಪತ್ರೆಯಾಗಿರುವ ಸರಕಾರಿ ಆಸ್ಪತ್ರೆಯನ್ನು ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸ ಲಾಗುವುದು. ಬಳಿಕ ಮೆಡಿಕಲ್‌ ಕಾಲೇಜು ಆರಂಭಿಸಲಾ ಗುವುದು ಎಂದು ಹೇಳಿದರು.

ಉತ್ತಮ ಯೋಜನೆ
ಭಾರತೀಯ ಜನೌಷಧ ಕೇಂದ್ರವನ್ನು ಉದ್ಘಾಟಿಸಿದ ದ.ಕ. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಸಮಾಜ ಕಟ್ಟಕಡೆಯ ವ್ಯಕ್ತಿಗೂ ಗುಣಮಟ್ಟದ ಔಷಧ ದೊರೆತು ಆರೋಗ್ಯವಂತನಾಗಿರಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೈಗೆಟಕುವ ಬೆಲೆಯಲ್ಲಿ ಔಷಧ ವಿತರಸುವ ಯೋಜನೆಯನ್ನು ಅನುಷ್ಠಾನ  ಮಾಡಿದ್ದಾರೆ. ಇದೊಂದು ಉತ್ತಮ ಯೋಜನೆ ಎಂದರು.

ಸೇವೆಯ ಉದ್ದೇಶ
ಮುಖ್ಯ ಅತಿಥಿಯಾಗಿದ್ದ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ರಾಜ್ಯ ಸಭಾಪತಿ ಬಸೂÅರು ರಾಜೀವ ಶೆಟ್ಟಿ ಮಾತನಾಡಿ, ಜನೌಷಧ ಕೇಂದ್ರಕ್ಕೆ ಸರಕಾರ ಸಬ್ಸಿಡಿ ದರದಲ್ಲಿ ಔಷಧ ನೀಡುತ್ತಿದೆ. ಈಗ 615 ವಿವಿಧ ಔಷಧಗಳನ್ನು ಸರಕಾರ ಪೂರೈಕೆ ಮಾಡುತ್ತದೆ. ರಾಜ್ಯದಲ್ಲಿ 200 ಮಳಿಗೆಗಳನ್ನು ತೆರೆಯಲು ಸರಕಾರ ರೆಡ್‌ ಕ್ರಾಸ್‌ ಸಂಸ್ಥೆಗೆ ಅವಕಾಶ ಕೊಟ್ಟಿದೆ. ಹಣಕ್ಕಾಗಿ ಕೆಲಸ ಮಾಡದೆ ಸೇವೆ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದು ಹೇಳಿದರು.

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಸಾದ್‌ ಕೌಶಲ್‌, ತಾ.ಪಂ. ಸದಸ್ಯೆ ಭವಾನಿ ಚಿದಾನಂದ, ನಗರ ಸಭೆ ಅಧ್ಯಕ್ಷೆ ಜಯಂತಿ ಬಲಾ°ಡು ಜನೌಷಧ ಕೇಂದ್ರದ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವಂತೆ ಹೇಳಿದರು.

ಸರಕಾರದ “ಕಾಯ ಕಲ್ಪ’ ಪ್ರಶಸ್ತಿ ಯೋಜನೆಯಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆ ಸಮಾಧಾನಕರ ಬಹುಮಾನ ಪಡೆದಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಪ್ರದೀಪ್‌ ಕುಮಾರ್‌ ಅವರನ್ನು ರೆಡ್‌ ಕ್ರಾಸ್‌ ಪುತ್ತೂರು ಘಟಕದ ವತಿಯಿಂದ ಗೌರವಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ ಕುಮಾರ್‌ ರೈ ಉಪಸ್ಥಿತರಿದ್ದರು.

ಭಾರತೀಯ ರಡ್‌ ಕ್ರಾಸ್‌ ಪುತ್ತೂರು ಘಟಕದ ಸಭಾಪತಿ ಆಸ್ಕರ್‌ ಆನಂದ್‌ ಸ್ವಾಗತಿಸಿ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಪ್ರದೀಪ್‌ ಕುಮಾರ್‌ ವಂದಿಸಿದರು. ರೆಡ್‌ ಕ್ರಾಸ್‌ ಸಂಸ್ಥೆ ಪುತ್ತೂರು ಘಟಕದ ಸದಸ್ಯ ಪ್ರೊ| ಬಿ. ಜೆ. ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.

ಜಾಲತಾಣ ಉದ್ಘಾಟನೆ
ಜೇಸಿಐ ಪುತ್ತೂರು ಮತ್ತು ಇಂಡಿಯನ್‌ ರೆಡ್‌ ಕ್ರಾಸ್‌ ಸಂಸ್ಥೆ ಪುತ್ತೂರು ಘಟಕ ಕೈಗೊಂಡ ರಕ್ತದಾನಿ ಗಳ ಜಾಲತಾಣ (ಬ್ಲಿಡ್‌ ಫಾರ್‌ ಆಲ್‌)ವನ್ನು  ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಉದ್ಘಾಟಿಸಿದರು. ಯೋಜನೆಯಲ್ಲಿ ರಕ್ತದಾನಿಗಳ ಮಾಹಿತಿ ಜಾಲ ತಾಣದಲ್ಲಿ ಲಭ್ಯವಿರುತ್ತದೆ. ರಕ್ತದ ಅಗತ್ಯವುಳ್ಳವರು ಜಾಲ ತಾಣದಲ್ಲಿ ನೋಡಿ, ನೇರವಾಗಿ ಆ ವ್ಯಕ್ತಿಗೆ ಅಥವಾ ಸಂಘ ಸಂಸ್ಥೆಯನ್ನು ಸಂಪರ್ಕಿಸಿ ರಕ್ತವನ್ನು ಪಡೆದುಕೊಳ್ಳಲು ಅವಕಾಶವಿದೆ ಎಂದು ಪ್ರೊ| ಬಿ. ಜೆ. ಸುವರ್ಣ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

America-Congress

House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!

Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು‌ ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

BNG-winter

Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ

Womens-Commssion

Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.