ಪುತ್ತೂರು ಇಂದಿರಾ ಕ್ಯಾಂಟೀನ್‌ ಕಾಮಗಾರಿ ಆಮೆಗತಿ


Team Udayavani, Jan 4, 2019, 6:04 AM IST

4-january-5.jpg

ನಗರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಆರಂಭಿಸಿದ್ದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್‌ ಪುತ್ತೂರಿಗೂ ಮಂಜೂರಾಗಿದ್ದು, ಶಿಲಾನ್ಯಾಸ ನೆರವೇರಿಸಿ ವರ್ಷವಾಗುತ್ತಾ ಬಂದರೂ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆ ಭಾಗ್ಯ ಒದಗಿ ಬಂದಿಲ್ಲ.

ನಗರದ ಹೃದಯ ಭಾಗದ ಬಿಇಒ ಕಚೇರಿ ಬಳಿ 8 ಸೆಂಟ್ಸ್‌ ಜಾಗದಲ್ಲಿ ಇಂದಿರಾ ಕ್ಯಾಂಟೀನ್‌ಗೆ ಜಾಗ ಗುರುತಿಸಿ 2018ರ ಫೆಬ್ರವರಿಯಲ್ಲಿ ಸಮತಟ್ಟುಗೊಳಿಸಿ ಮಾರ್ಚ್‌ ತಿಂಗಳಲ್ಲಿ ಆಗಿನ ಶಾಸಕಿ ಶಕುಂತಳಾ ಟಿ. ಶೆಟ್ಟಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಅದಾದ ಬಳಿಕ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿ ಕಾಮಗಾರಿ ನಿಧಾನ ಗತಿಗೆ ಸಾಗಿತ್ತು. ಸೆಪ್ಟಂಬರ್‌ನಲ್ಲಿ ಮತ್ತೆ ಕಾಮಗಾರಿಗೆ ಚಾಲನೆ ದೊರೆತಿತ್ತು.

ಗರಿಗೆದರಿದ ನಿರೀಕ್ಷೆ
ಮಿನಿ ವಿಧಾನಸೌಧ, ಕೋರ್ಟ್‌, ತಾ.ಪಂ. ಕಚೇರಿ, ನಗರಸಭಾ ಕಚೇರಿ, ಸರಕಾರಿ ಆಸ್ಪತ್ರೆ, ಸರಕಾರಿ ಮಹಿಳಾ ಕಾಲೇಜು, ವಾರದ ಸಂತೆ ಎಲ್ಲವೂ ಇರುವ ಬಹುಮುಖ್ಯ ಜಾಗದಲ್ಲೇ ಇಂದಿರಾ ಕ್ಯಾಂಟೀನ್‌ ನಿರ್ಮಾಣಗೊಳ್ಳುತ್ತಿದ್ದು, ಪುತ್ತೂರಿನಲ್ಲಿ ಹೆಚ್ಚು ಮಂದಿಗೆ ಪ್ರಯೋಜನವಾಗುವ ನಿರೀಕ್ಷೆ ಗರಿಗೆದರಿದೆ.

ನೆರೆಯ ಬಂಟ್ವಾಳದಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೊಂಡಿದ್ದು, ಪುತ್ತೂರಿನ ಕ್ಯಾಂಟೀನ್‌ ಉದ್ಘಾಟನೆ ಬೇಗನೆ ಆಗಬೇಕೆನ್ನುವ ಆಶಯ ಸಾರ್ವಜನಿಕರದ್ದು.

ಇನ್ನೊಂದು  ತಿಂಗಳಲ್ಲಿ ಪೂರ್ಣ!
ಕ್ಯಾಂಟೀನ್‌ ಕಟ್ಟಡದ ಒಳಭಾಗದಲ್ಲಿ ಒಂದಷ್ಟು ಕೆಲಸಗಳು ಬಾಕಿ ಇರುವು ದರಿಂದ ಉದ್ಘಾಟನೆಗೆ ವಿಳಂಬ ವಾಗಿದೆ. ಜನವರಿ ತಿಂಗಳ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯಾಗಬಹುದು ಎನ್ನುವ ಮಾಹಿತಿ ಸಂಬಂಧಪಟ್ಟವರಿಂದ ಲಭ್ಯವಾಗಿದೆ. ಶೀಘ್ರ ಉದ್ಘಾಟನೆಗೊಳ್ಳದಿದ್ದಲ್ಲಿ ಮತ್ತೆ ಚುನಾವಣಾ ನೀತಿ ಸಂಹಿತೆಗೆ ಒಳಪಟ್ಟು ಮತ್ತೆ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು, ಜನಪ್ರತಿನಿಧಿಗಳ ಗಮನಹರಿಸಿದರೆ ಉತ್ತಮ.

ಮಾಹಿತಿ ಪಡೆವೆ
ಪುತ್ತೂರಿನ ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಸಂಬಂಧಿಸಿ ನನಗೆ ಮಾಹಿತಿ ಇಲ್ಲ. ಜಿಲ್ಲೆಯ ಇತರ ಕಡೆಗಳಲ್ಲೂ ಇಂದಿರಾ ಕ್ಯಾಂಟೀನ್‌ ಕಾಮಗಾರಿಗಳು ನಡೆಯುತ್ತಿದ್ದು, ಒಟ್ಟಿಗೇ ಉದ್ಘಾಟನೆಯಾಗಬಹುದು. ಮಾಹಿತಿ ಪಡೆದುಕೊಳ್ಳುತ್ತೇನೆ. 
– ಸಂಜೀವ ಮಠಂದೂರು,
ಶಾಸಕರು

ಮಾಹಿತಿ ಪಡೆದಿರುವೆ
ಸರಕಾರಿ ಆಸ್ಪತ್ರೆ, ಮಿನಿ ವಿಧಾನಸೌಧ ಇರುವುದರಿಂದ ಆಸಕ್ತಿಯಿಂದ ಗಮನಹರಿಸಿ ಸೂಕ್ತ ಜಾಗವನ್ನು ಗುರುತಿಸಿದ್ದೇವೆ. ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಒತ್ತಾಯಿಸಿದ್ದು, ಈ ತಿಂಗಳೊಳಗೆ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯಾಗುತ್ತದೆ.
ಶಕುಂತಳಾ ಟಿ. ಶೆಟ್ಟಿ,
  ಮಾಜಿ ಶಾಸಕರು

ವಿಶೇಷ ವರದಿ

ಟಾಪ್ ನ್ಯೂಸ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.