ಪುತ್ತೂರು, ಸುಳ್ಯ ಮತ್ತೆ ಮಳೆ ಬಿರುಸು
Team Udayavani, Jun 20, 2018, 12:38 PM IST
ಪುತ್ತೂರು: ನಾಲ್ಕು ದಿನಗಳಿಂದ ವಿರಾಮ ಪಡೆದಿದ್ದ ಮಳೆ ಸೋಮವಾರ ರಾತ್ರಿಯಿಂದ ಮತ್ತೆ ಬಿರುಸು ಪಡೆದುಕೊಂಡಿದೆ.
ಪುತ್ತೂರು ತಾಲೂಕಿನ ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಮಂಗಳವಾರ ಬೆಳಗ್ಗಿನಿಂದ ನಿರಂತರ ಸಾಧಾರಣ ಮಳೆಯಾಗಿದೆ. ತಾಲೂಕಿನ ಕುಂಬ್ರ, ಈಶ್ವರಮಂಗಲ, ಸುಳ್ಯಪದವು, ಬೆಟ್ಟಂಪಾಡಿ, ನೆಲ್ಯಾಡಿ, ಉಪ್ಪಿನಂಗಡಿ, ಪುರುಷರಕಟ್ಟೆ ಮೊದಲಾದ ಕಡೆಗಳಲ್ಲಿ ಉತ್ತಮವಾಗಿ ಮಳೆ ಸುರಿದಿದೆ. ಚರಂಡಿ, ಹಳ್ಳ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಚರಂಡಿ ಅವ್ಯವಸ್ಥೆಯ ಕಾರಣದಿಂದ ಹಲವು ಕಡೆಗಳಲ್ಲಿ ರಸ್ತೆಯಲ್ಲೇ ನೀರು ಹರಿಯುವ ದೃಶ್ಯ ಕಂಡುಬಂತು.
77 ಮಿ.ಮೀ. ಮಳೆ
ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನ ವರೆಗಿನ 24 ಗಂಟೆಗಳ ಅವಧಿಯಲ್ಲಿ ಪುತ್ತೂರು ತಾಲೂಕಿನಾದ್ಯಂತ ಒಟ್ಟು 77 ಮಿ.ಮೀ. ಹಾಗೂ ಸರಾಸರಿ 12.8 ಮಿ.ಮೀ. ಮಳೆಯಾಗಿದೆ. ಪುತ್ತೂರು ನಗರದಲ್ಲಿ 8.6 ಮಿ.ಮೀ., ಉಪ್ಪಿನಂಗಡಿಯಲ್ಲಿ 17 ಮಿ.ಮೀ., ಶಿರಾಡಿಯಲ್ಲಿ 24 ಮಿ.ಮೀ., ಕೊಯಿಲದಲ್ಲಿ 9.8 ಮಿ.ಮೀ., ಐತ್ತೂರುನಲ್ಲಿ 9.2 ಮಿ.ಮೀ., ಕಡಬದಲ್ಲಿ 8.4 ಮಿ.ಮೀ. ಮಳೆ ಸುರಿದಿದೆ. ಮಂಗಳವಾರ ಬೆಳಗ್ಗಿನ ಬಳಿಕ ಮಳೆಯ ಪ್ರಮಾಣ ಹೆಚ್ಚಾಗಿದೆ.
ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಆಗಾಗ್ಗೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಅಣೆಕಟ್ಟಿನ ಕಸ ತೆರವಿಗೆ ಶ್ರಮದಾನ ನಡೆಸಲಾಯಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.