ಕೊರತೆಗಳಿಗೆ ಸುದ್ದಿಯಾಗುತ್ತಿದೆ ತಾಲೂಕು ಸರಕಾರಿ ಆಸ್ಪತ್ರೆ


Team Udayavani, Sep 17, 2018, 10:45 AM IST

17-sepctember-5.jpg

ಪುತ್ತೂರು: ಶತಮಾನಗಳ ಇತಿಹಾಸವನ್ನು ಹೊಂದಿರುವ ಪುತ್ತೂರು ಸರಕಾರಿ ಆಸ್ಪತ್ರೆಯು ಪ್ರಗತಿಯನ್ನು ಮೀರಿದ ಕೊರತೆಗಳಿಂದ ಇಂದು ಸುದ್ದಿಯಾಗುತ್ತಿದೆ. ಪ್ರಮುಖ ವೈದ್ಯರು -ಸಿಬಂದಿ ಕೊರತೆ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಹಿನ್ನಡೆ ಅನುಭವಿಸುತ್ತಿದೆ.

ಮಂಡಲ ಉಸ್ತುವಾರಿಯಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರಿ ಆಸ್ಪತ್ರೆ 1928ರಲ್ಲಿ 25 ಬೆಡ್‌ಗಳ ಸರಕಾರಿ ಆಸ್ಪತ್ರೆಯಾಗಿ ಕಾರ್ಯ ಆರಂಭಿಸಿತ್ತು. 1942 ರಲ್ಲಿ 33 ಬೆಡ್‌ಗಳಿಗೆ ವಿಸ್ತರಣೆಯಾಯಿತು. 1950ರಲ್ಲಿ 20 ಹಾಸಿಗೆಗಳನ್ನು ಕಲ್ಪಿಸಿ 53 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. 2000ನೇ ಇಸವಿಯಲ್ಲಿ 100 ಬೆಡ್‌ಗಳ ಆಸ್ಪತ್ರೆಯಾಗಿ ಮತ್ತೆ ಮೇಲ್ದರ್ಜೆಗೆ ಏರಿತ್ತು. ಅನಂತರದಲ್ಲಿ ರೋಗಿಗಳ ಸಂಖ್ಯೆ ವಿಪರೀತ ಏರಿಕೆಯಾಗಿದ್ದರೂ ವ್ಯವಸ್ಥೆಗಳಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ. ಪುತ್ತೂರಿಗೆ ಸರಕಾರಿ ಮೆಡಿಕಲ್‌ ಕಾಲೇಜು ಮಂಜೂರಾತಿಗೆ ಪ್ರಯತ್ನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೂರಕವಾಗಿ ಆಸ್ಪತ್ರೆಯನ್ನು 300 ಬೆಡ್‌ಗಳ ವ್ಯವಸ್ಥೆಗೆ ಏರಿಸಲು ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. 

ಪ್ರಮುಖ ವೈದ್ಯರೇ ಇಲ್ಲ
ಇಎನ್‌ಟಿ, ಜನರಲ್‌, ಮೈಕ್ರೋಬಯೋಲಜಿ, ಆಯುಷ್‌, ಮಕ್ಕಳವೈದ್ಯರು, ಸರ್ಜನ್‌, ಮೂಳೆ ತಜ್ಞರು ಮೊದಲಾದ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಪ್ರಮುಖವಾಗಿರುವ ಹೆರಿಗೆ ತಜ್ಞರು, ವೈದ್ಯಕೀಯ ತಜ್ಞ ಹುದ್ದೆಗಳು ಖಾಲಿ ಇವೆ. ಸರಕಾರಿ ಅಂಕಿ ಅಂಶದ ಪ್ರಕಾರ ಪ್ರತಿ ತಿಂಗಳು ಸಾಮಾನ್ಯ ಹೆರಿಗೆಗಳು ಮತ್ತು ಸಿಸೇರಿಯನ್‌ ಸೇರಿ ಸರಾಸರಿ 100ರಷ್ಟು ಹೆರಿಗೆ ಪ್ರಕರಣಗಳು ಬರುತ್ತವೆ. ಆದರೆ ಸುಮಾರು 1 ವರ್ಷಗಳಿಂದ ಇಲ್ಲಿ ಪೂರ್ಣಕಾಲಿಕ ಹೆರಿಗೆ ತಜ್ಞರೇ ಇಲ್ಲ. ಸಾಮಾನ್ಯ ಹೆರಿಗೆಗಳನ್ನು ಇತರ ಕರ್ತವ್ಯದ ವೈದ್ಯರು ಮಾಡುತ್ತಾರಾದರೂ ಸಿಸೇರಿಯನ್‌ ಪ್ರಕರಣಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಈ ಕಾರಣದಿಂದ ಸರಕಾರಿ ಆಸ್ಪತ್ರೆ ಇದ್ದೂ, ಸಮರ್ಪಕ ವ್ಯವಸ್ಥೆ ಪಡೆದುಕೊಳ್ಳಲಾಗದೆ ತಾಲೂಕಿನ ಜನತೆ ಖಾಸಗಿ ಆಸ್ಪತ್ರೆಯನ್ನು ಅವಲಂಭಿಸಬೇಕಾಗಿದೆ.

ಈ ವಿಚಾರ ಪ್ರತಿ ತಾಲೂಕು ಮಟ್ಟದ ಸಭೆಗಳಲ್ಲಿ ಚರ್ಚೆಯಾಗುತ್ತದೆ. ಶನಿವಾರ ನಡೆದ ಕೆಡಿಪಿ ಸಭೆಯಲ್ಲೂ ಚರ್ಚೆಯಾಗಿ ಸ್ಥಳೀಯ ಖಾಸಗಿ ವೈದ್ಯರೊಬ್ಬರನ್ನು ಗುತ್ತಿಗೆ ಆಧಾರದಲ್ಲಿ ನೇಮಕಕ್ಕೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ. ಉಳಿದ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಇಷ್ಟೊಂದು ಸುದೀರ್ಘ‌ ಸಮಯದ ಇಂತಹ ಪ್ರಮುಖ ಹುದ್ದೆಗಳು ಖಾಲಿಯಾಗಿರುವುದು ಯಾಕೆ? ಎನ್ನುವುದೂ ಅನುಮಾನಗಳನ್ನು ಹುಟ್ಟಿಸುತ್ತದೆ. ಆಸ್ಪತ್ರೆಯ ಒಳಗಿನ ಒಂದಷ್ಟು ಒಳ ಜಗಳಗಲೂ ಅವ್ಯವಸ್ಥೆಯಲ್ಲಿ ಪಾಲು ಪಡೆಯುತ್ತಿದೆ ಎನ್ನುವುದೂ ಗೌಪ್ಯ ಚರ್ಚೆಯಾಗಿ ಉಳಿದಿಲ್ಲ.

ಜನರೇಟರ್‌ ಸಮಸ್ಯೆ
ತಾ| ಸರಕಾರಿ ಆಸ್ಪತ್ರೆ ಅಂದ ಮೇಲೆ ಕೈಕೊಡುವ ವಿದ್ಯುತ್‌ ಸಮಸ್ಯೆಯನ್ನು ನಿಭಾಯಿಸಲು ಜನರೇಟರ್‌ ವ್ಯವಸ್ಥೆ ಇರಲೇ ಬೇಕು. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಓಬಿರಾಯನ ಕಾಲದ ಜನರೇಟರ್‌ ಇದೆ. ಆಗಾಗ ಕೈಕೊಡುವ ಈ ಜನರೇಟರ್‌ನಿಂದ ರೋಗಿಗಳು ನಿತ್ಯ ಪರದಾಡಬೇಕಾಗಿರುವುದು ಮಾಮೂಲಾಗಿದೆ. ತಿಂಗಳಿಗೆ 2-3 ಬಾರಿ ಕೈಕೊಡುವ ಜನರೇಟರ್‌ಗೆ ಪರ್ಯಾಯವಾಗಿ ಸಾವಿರಾರು ರೂ. ಖರ್ಚು ಮಾಡಿ ಬಾಡಿಗೆಯ ಜನರೇಟರನ್ನು ತರಲಾಗುತ್ತಿದೆ.

ವೈಟಿಂಗ್‌ನಲ್ಲಿ ಡಯಾಲಿಸಿಸ್‌
ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ವ್ಯವಸ್ಥೆಯಲ್ಲಿನ ಕೊರತೆಯೂ ಪ್ರಮುಖ ಸಮಸ್ಯೆಯಾಗಿದೆ. ಹಾಲಿ 3 ಡಯಾಲಿಸಿಸ್‌ ಯಂತ್ರಗಳು ಕಾರ್ಯ ನಿರ್ವಹಿಸುತ್ತಿದ್ದು, ದಿನಕ್ಕೆ 9 ಮಂದಿಗೆ ಡಯಾಲಿಸಿಸ್‌ ಸಾಧ್ಯವಾಗುತ್ತಿದೆ. ಆದರೆ ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್‌ ಮಾಡಲು ಅಸಾಧ್ಯವಾಗಿರುವ 30ಕ್ಕೂ ಹೆಚ್ಚು ರೋಗಿಗಳು ವೈಟಿಂಗ್‌ ಲಿಸ್ಟ್‌ನಲ್ಲಿದ್ದಾರೆ. ಹೊಸದಾಗಿ 4ನೆಯ ಡಯಾಲಿಸಿಸ್‌ ಯಂತ್ರ ಮಂಜೂರಾಗಿದ್ದರೂ ಹಾಲಿ ಇರುವ 50 ಕೆ.ವಿ. ಸಾಮರ್ಥ್ಯದ ಜನರೇಟರ್‌ನಲ್ಲಿ ಅದನ್ನು ಚಾಲೂ ಮಾಡಲು ಸಾಧ್ಯವಿಲ್ಲ ಎನ್ನುವುದು ಆಸ್ಪತ್ರೆ ಅಧಿಕಾರಿಗಳ ಮಾತು.

ಸರಕಾರಿ ಆಸ್ಪತ್ರೆಯಲ್ಲಿ ವ್ಯವಸ್ಥೆಗಳ ಅಭಿವೃದ್ಧಿಗೆ ಸಾಕಷ್ಟು ಜಾಗ ಇದೆ. ಹಾಲಿ ಉಪ ನೋಂದಣಿ ಕಚೇರಿ ಜಾಗವನ್ನೂ ಸರಕಾರಿ ಆಸ್ಪತ್ರೆ ಹೆಸರಿಗೆ ಜಿಲ್ಲಾಡಳಿತ ಮಾಡಿದೆ. ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ದೃಷ್ಟಿಯಿಂದ, ಪುತ್ತೂರು ಜಿಲ್ಲಾ ಕೇಂದ್ರವಾಗಿ ಅಭಿವೃದ್ಧಿಯಾಗುವ ದೃಷ್ಟಿಯಿಂದ ಪೂರಕ ವ್ಯವಸ್ಥೆ ಕಲ್ಪಿಸಲು ಅವಕಾಶಗಳಿವೆ.

ಶೇ. 60 ಹುದ್ದೆಗಳು ಖಾಲಿ
ಪುತ್ತೂರು ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ 112 ಮಂಜೂರಾದ ಹುದ್ದೆಗಳಿವೆ. ಇವುಗಳಲ್ಲಿ ಭರ್ತಿಯಾಗಿರುವುದು ಕೇವಲ 49 ಹುದ್ದೆಗಳು ಮಾತ್ರ. ಅದರಲ್ಲೂ 22 ಸ್ಟಾಫ್‌ ನರ್ಸ್‌ಗಳ ಪೈಕಿ ಮೂರು ಮಂದಿಗೆ ಇತ್ತೀಚೆಗೆ ವರ್ಗಾವಣೆಯಾಗಿದೆ. ಅಂದರೆ ತಾ| ಸರಕಾರಿ ಆಸ್ಪತ್ರೆಯಲ್ಲಿ ಶೇ. 60ರಷ್ಟು ಹುದ್ದೆಗಳು ಖಾಲಿಯಾಗಿವೆ.

ಹೆರಿಗೆ ತಜ್ಞರ ಶೀಘ್ರ ನೇಮಕ
ಆಸ್ಪತ್ರೆಯಲ್ಲಿ ಹೆರಿಗೆ ತಜ್ಞರ ನೇಮಕಕ್ಕೆ ವಿಶೇಷ ಪ್ರಯತ್ನ ನಡೆಸಲಾಗುತ್ತಿದೆ. ಸದ್ಯಕ್ಕೆ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ವೈದ್ಯರೊಬ್ಬರನ್ನು ಸಂಪರ್ಕಿಸಲಾಗಿದೆ. ಯಾರಾದರೂ ಹೆರಿಗೆ ತಜ್ಞರಿದ್ದಲ್ಲಿ ಅರ್ಜಿ ಸಲ್ಲಿಸಿದರೆ ನೇಮಕ ಮಾಡಿಕೊಳ್ಳಲು ಆದ್ಯತೆ ನೀಡುತ್ತೇವೆ.
– ಸಂಜೀವ ಮಠಂದೂರು
ಶಾಸಕರು ಪುತ್ತೂರು

ಶೀಘ್ರ ಜನರೇಟರ್‌
ಡಯಾಲಿಸಿಸ್‌ ವ್ಯವಸ್ಥೆ ಇರುವ ಎಲ್ಲ ಸರಕಾರಿ ಆಸ್ಪತ್ರೆಗಳಿಗೆ ಸರಕಾರ ಪ್ರತ್ಯೇಕ ಜನರೇಟರ್‌ ವ್ಯವಸ್ಥೆ ಒದಗಿಸುತ್ತಿದೆ. ಪುತ್ತೂರಿಗೂ ಶೀಘ್ರ ಜನರೇಟರ್‌ ಲಭ್ಯವಾಗಲಿದೆ. ಪ್ರಮುಖವಾಗಿ ಹೆರಿಗೆ ತಜ್ಞರು, ವೈದ್ಯಕೀಯ ತಜ್ಞ ವೈದ್ಯರ ಆವಶ್ಯಕತೆ ಇದೆ.
– ಡಾ| ವೀಣಾ ಆಡಳಿತ
ವೈದ್ಯಾಧಿಕಾರಿ, ಸರಕಾರಿ ಆಸ್ಪತ್ರೆ 

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.