ಪುತ್ತೂರು ದೇಗುಲ: ವಿಷು ಉತ್ಸವ
Team Udayavani, Apr 16, 2018, 11:30 AM IST
ಪುತ್ತೂರು: ಸೌರಯುಗಾದಿ ವಿಷುವಿನ ಅಂಗವಾಗಿ ರವಿವಾರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಒಳಾಂಗಣದಲ್ಲಿ ವಿಷುಕಣಿ ಉತ್ಸವ ಬಲಿ ನಡೆಯಿತು. ಪ್ರಾತಃಕಾಲ ಶ್ರೀ ದೇವರ ಗರ್ಭಗುಡಿಯ ನಡೆ ತೆರೆದು ವಿಷುಕಣಿ ದರ್ಶನದ ಬಳಿಕ ಭಕ್ತರು ಶ್ರೀ ದೇವರನ್ನು ಭೇಟಿಮಾಡಿ ವಿಷು ಕಾಣಿಕೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಅನಂತರ ದೇವಾಲಯದ ಒಳಾಂಗಣದಲ್ಲಿ ವಿಷು ಕಣಿ ಪ್ರಯುಕ್ತ ಶ್ರೀ ದೇವರ ಉತ್ಸವ ಬಲಿ ನಡೆಯಿತು.
ಸುತ್ತುಗಳ ಆಕರ್ಷಣೆ
ದೇವಾಲಯದಲ್ಲಿ ವಿಶೇಷವಾಗಿ ಮೊದಲಿಗೆ ತಂತ್ರ ಸುತ್ತು, ಅನಂತರ ಉಡಿಕೆ ಸುತ್ತು, ಚೆಂಡೆ ಸುತ್ತಿನ ಬಳಿಕ ವಸಂತ
ಕಟ್ಟೆ ಪೂಜೆ, ಸೇವೆಯ ವಾದ್ಯ ಸುತ್ತುಗಳು, ಶಂಖ, ಜಾಗಟೆ ಸುತ್ತು, ಬ್ಯಾಂಡ್ ವಾಲಗ ಸುತ್ತು ಮತ್ತು ಸರ್ವ ವಾದ್ಯ ಸುತ್ತು ನಡೆಯಿತು. ಬಳಿಕ ಶ್ರೀ ದೇವರು ಒಳಗಾಗಿ ಮಹಾ ಪೂಜೆ ನಡೆದು ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಮಧ್ಯಾಹ್ನ ವಿಷು ಕಣಿಯ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೌರ ಯುಗಾದಿ ವಿಷುಕಣಿಯು ಜಾತ್ರೆ ಸಂದರ್ಭದಲ್ಲಿಯೇ ಬರುತ್ತದೆ.
ದೀಪದ ಬಲಿ ವಿಶೇಷ
ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ಬೆಳ್ಳಿ ಮೂಡುವ ಹೊತ್ತಿಗೆ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ. ಪ್ರತಿವರ್ಷ ಎ. 16ರಂದು ಸೂರ್ಯೋದಯಕ್ಕೆ ಮೊದಲು ಈ ಉತ್ಸವ ನಡೆಯುತ್ತದೆ. ದೀಪ ಬಲಿ ಉತ್ಸವ ನಡೆಯುವುದರಿಂದ ದೇವಾಲಯದಲ್ಲಿ ಎ. 16ರಂದು ಜಾತ್ರೆ ಪ್ರಯುಕ್ತ ಬೆಳಗಿನ ಉತ್ಸವ ನಡೆಯುವುದಿಲ್ಲ. ವರ್ಷದಲ್ಲಿ ಒಂದು ದಿನ ಮಾತ್ರ ಅಂದರೆ ಜಾತ್ರೆಯ ಸಂದರ್ಭದ ಎ. 16ರಂದು ಮಾತ್ರ ಶ್ರೀ ದೇವರ ದೀಪ ಬಲಿ ಉತ್ಸವ ನಡೆಯುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.