ಪುತ್ತೂರು:ಹೋಟೆಲ್ ನಲ್ಲಿ ಭಿನ್ನಕೋಮಿನ ಯವಕ-ಯುವತಿಗೆ ಹಲ್ಲೆ ಆರೋಪ:ಹಿಂದೂಸಂಘಟನೆಯ ಇಬ್ಬರ ಬಂಧನ

Team Udayavani, Sep 21, 2021, 3:30 PM IST

ಪುತ್ತೂರು ನಗರ ಪೊಲೀಸ್ ಠಾಣೆ

ಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಇಲ್ಲಿನ ಬೈಪಾಸ್ ರಸ್ತೆಯ ಪ್ರತಿಷ್ಟಿತ ಹೊಟೇಲೊಂದರಲ್ಲಿರುವ ಸಂದರ್ಭ ಅಲ್ಲಿಗೆ ಬಂದ ಹಿಂದೂ ಜಾಗರಣ ವೇದಿಕೆಯವರು ಹಲ್ಲೆ ನಡೆಸಿದ್ದಾರೆಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.

ಜೂ. ೨ರಂದು ಪುತ್ತೂರು ಕೆಮ್ಮಾಯಿಯಲ್ಲಿ ಕಾರಿನಲ್ಲಿ ಬಂದ ತಂಡವೊಂದು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ವಶದಲ್ಲಿದ್ದ ಕಾರು ಯುವತಿಯ ಹೆಸರಿನಲ್ಲಿದ್ದು, ಅದನ್ನು ಬಿಡುಗಡೆಗೊಳಿಸಲು ಯುವತಿ ಪುತ್ತೂರಿಗೆ ಬಂದಿದ್ದರೆಂದು ಹೇಳಲಾಗುತ್ತಿದೆ.

ರೆಸ್ಟೋರೆಂಟ್‌ನಲ್ಲಿ ಕಳೆದ ಮೂರು ದಿನಗಳಿಂದ ಭಿನ್ನ ಕೋಮಿನ ಯುವತಿ ಮತ್ತು ಯುವಕರು ತಂಗಿದ್ದ ಕುರಿತು ಮಾಹಿತಿ ಪಡೆದ ಸಂಘಟನೆಯೊಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬರುವ ಮೊದಲೇ ಸಂಘಟನೆಯ ಕೆಲವರು ಹೊಟೇಲ್ ಎದುರು ಜಮಾಯಿಸಿದ್ದರೆನ್ನಲಾಗಿದೆ. ಇದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವತಿ ಮತ್ತು ಯುವಕರಿಬ್ಬರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಯುವತಿ ತಾನು ಬೆಂಗಳೂರಿನ ಆನೇಕಲ್ ತಾಲೂಕಿನ ಹಳೇಪೇಟೆ ನಿವಾಸಿ ರಾಜೇಶ್ವರಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ದಟ್ಟ ಮಂಜು ಕವಿದ ವಾತಾವರಣ; ಉಧಾಂಪುರ್ ನಲ್ಲಿ ಸೇನಾ ಹೆಲಿಕಾಪ್ಟರ್ ಪತನ, ಪೈಲಟ್ ಪಾರು

ಆಕೆ ನೀಡಿದ ಹೇಳಿಕೆಯಂತೆ ಪ್ರಕರಣವೊಂದಕ್ಕೆ ಸಂಬಂಧಿಸಿ ಠಾಣೆಯಲ್ಲಿರುವ ತನ್ನ ಮಾಲಕತ್ವದ ಕಾರನ್ನು ಬಿಡಿಸಲು ತನ್ನ ಜೊತೆ ಕೆಲಸ ಮಾಡುತ್ತಿರುವ ಮಂಗಳೂರು ಉಳ್ಳಾಲ ನಿವಾಸಿ ಯು.ಕೆ.ಮಹಮ್ಮದ್ ಅರಾಫತ್ ಮತ್ತು ಬೆಂಗಳೂರು ಕೊಟ್ಟಿಗೇರಿ ನಿವಾಸಿ ಶಿವ ಅವರೊಂದಿಗೆ ಬಾಡಿಗೆ ವಾಹನದಲ್ಲಿ ಸೆ.18ಕ್ಕೆ ಪುತ್ತೂರಿಗೆ ಬಂದು, ಇಲ್ಲಿ ಲಾಡ್ಜ್‌ನಲ್ಲಿ ಮೂವರು ತಂಗಿದ್ದೆವು. ಸೆ.20 ರಂದು ಬೈಪಾಸ್‌ನ ರೆಸ್ಟೋರೆಂಟ್‌ನಲ್ಲಿ ನಾವು ಊಟ ಮಾಡಿಕೊಂಡಿದ್ದಾಗ ಅಲ್ಲಿಗೆ ಬಂದ ತಂಡವೊಂದು ನಮ್ಮ ಬಳಿ ಬಂದು ಹೆಸರು ಕೇಳಿ ಅವಾಚ್ಯ ಶಬ್ದಗಳಿಂದ ಬೈದು, ನನ್ನ ಜೊತೆಯಲ್ಲಿದ್ದ ಶಿವ ಎಂಬವರಿಗೆ ಹಲ್ಲೆ ನಡೆಸಿದ್ದಾರೆ ಮತ್ತು ನಮ್ಮ ಫೋಟೊ ತೆಗೆದು ಅವಮಾನ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಆಕೆ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕಾರನ್ನು ಬಿಡಿಸಲು ಬಂದಿದ್ದ ಯುವತಿ!: ಜೂ.2 ರಂದು ಪುತ್ತೂರು ಕೆಮ್ಮಾಯಿಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಆಗಿನ ಎಸ್.ಐ ಜಂಬೂರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿದ್ದರು. ಈ ವೇಳೆ ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಕಾರು ತಪಾಸಣೆಗೆ ವೇಳೆ ನಿಲ್ಲಿಸದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಮಂಗಳೂರು ಉಳ್ಳಾಲ ಕೋಟೆಪುರದ ಮೊಹಮ್ಮದ್ ಅರಾಫತ್, ಯು.ಕೆ.ನಾಸಿರ್, ಸೋಮೇಶ್ವರದ ಮಹಮ್ಮದ್ ಆಸೀಫ್ ಅವರು ಬಂಧಿತರಾಗಿದ್ದರು. ಅವರು ಬಂದಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಕಾರು ರಾಜೇಶ್ವರಿ ಅವರ ಹೆಸರಿನಲ್ಲಿದ್ದರಿಂದ ಅವರು ಪುತ್ತೂರಿಗೆ ಬಂದಿದ್ದು, ಕಳೆದ ಮೂರು ದಿನಗಳಿಂದ ಪುತ್ತೂರಿನಲ್ಲಿ ತಂಗಿದ್ದರೆನ್ನಲಾಗಿದೆ. ಈಕೆಯ ಜೊತೆ ಬೆಂಗಳೂರು ಕೊಟ್ಟೆಗೇರಿ ನಿವಾಸಿ ಶಿವ ಮತ್ತು ಕೆಮ್ಮಾಯಿಯಲ್ಲಿ ಪೊಲೀಸ್ ಕರ್ತವ್ಯದಲ್ಲಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಉಳ್ಳಾಲ ಕೋಟೆಪುರದ ಮೊಹಮ್ಮದ್ ಅರಾಫತ್ ಜೊತೆಗಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.