ಶಾಂತಿಮೊಗೇರು ರಸ್ತೆಗೆ ಡಾಮರು ಕಾಮಗಾರಿ

Team Udayavani, Jan 17, 2019, 5:54 AM IST

17-january-5.jpg

ಆಲಂಕಾರು : ಕಡಬ ತಾಲೂಕಿನ ಆಲಂಕಾರು ಹಾಗೂ ಕುದ್ಮಾರು ಗ್ರಾಮಗಳ ಮಧ್ಯೆ ಬರುವ ಶಾಂತಿಮೊಗೇರು ಸೇತುವೆಯ ಸಂಪರ್ಕ ರಸ್ತೆಯ ಉಳಿದ ಭಾಗದ ಡಾಮರು ಕಾಮಗಾರಿ ಎರಡು ದಿನಗಳಿಂದ ಭರದಿಂದ ಸಾಗುತ್ತಿದ್ದು, ಮುಕ್ತಾಯದ ಹಂತದಲ್ಲಿದೆ.

ಸೇತುವೆಯ ಸಂಪರ್ಕ ರಸ್ತೆಗಳ ಪೈಕಿ ಸುಮಾರು 800 ಮೀ. ರಸ್ತೆ ಡಾಮರು ಕಾಮಗಾರಿ ಅನುದಾನದ ಕೊರತೆಯಿಂದಾಗಿ ನನೆಗುದಿಗೆ ಬಿದ್ದಿತ್ತು. ಶಾಸಕ ಎಸ್‌. ಅಂಗಾರ ಅವರ ಶಿಫಾರಸಿನಂತೆ 34 ಲಕ್ಷ ರೂ. ಅನುದಾನದಲ್ಲಿ ಡಾಮರು ಕಾಮಗಾರಿ ನಡೆಯುತ್ತಿದೆ. ಕೂರ ಮಸೀದಿಯ ಹತ್ತಿರ ಹಾಗೂ 800 ಮೀ. ರಸ್ತೆ ಎರಡು ವರ್ಷಗಳಿಂದ ಹೊಂಡಮಯವಾಗಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಶಾಂತಿಮುಗೇರುವಿನಲ್ಲಿ ಸೇತುವೆ ನಿರ್ಮಾಣವಾದ ಬಳಿಕ ಈ ರಸ್ತೆಯಲ್ಲಿ ವಾಹನ ಸಂಚಾರ ಅಧಿಕವಾಗಿತ್ತು.

ಈ ರಸ್ತೆಗೆ ಡಾಮರು ಕಾಮಗಾರಿ ನಡೆಸಲು ಶಾಸಕರು ಸರಕಾರಕ್ಕೆ 1 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಿದ್ದರು. ಅನುದಾನ ಮಂಜೂರಾತಿ ವಿಳಂಬವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಈ ರಸ್ತೆಯನ್ನು ದುರಸ್ತಿ ಮಾಡುವ ಭರವಸೆ ನೀಡಿದ್ದರು. ಶಾಸಕರು, ಸಚಿವರ ಒತ್ತಡದ ಪರಿಣಾಮವಾಗಿ ಲೋಕೋಪಯೋಗಿ ಇಲಾಖೆ ಮುಖಾಂತರ 34 ಲಕ್ಷ ರೂ. ಬಿಡುಗಡೆಗೊಂಡು ಕಾಮಗಾರಿ ನಡೆಯುತ್ತಿದೆ.

ಮೂರು ದಶಕಗಳ ಬೇಡಿಕೆ
ಶಾಂತಿಮುಗೇರು ಎನ್ನುವಲ್ಲಿ ಸೇತುವೆ ನಿರ್ಮಾಣವಾಗಬೇಕು. ಇಲ್ಲಿ ರಸ್ತೆಗಳು ಅಭಿವೃದ್ಧಿಯಾಗಬೇಕು. ಆ ಮೂಲಕ ಸವಣೂರು, ಕುದ್ಮಾರು, ಕಾಣಿಯೂರು ಭಾಗದ ಜನರಿಗೆ ಆಲಂಕಾರು ನೆಲ್ಯಾಡಿ, ಕಡಬ, ಧರ್ಮಸ್ಥಳಕ್ಕೆ ಸುಲಭ ಸಂಪರ್ಕವಾಗಬೇಕು. ಮಾತ್ರವಲ್ಲ, ಅಪಾಯಕಾರಿ ನಾಡದೋಣಿ ಕಡವಿಗೆ ಮುಕ್ತಿ ದೊರೆಯಬೇಕು. ಮೈಸೂರಿನಿಂದ ಸುಳ್ಯ -ಬೆಳ್ಳಾರೆ-ಸವಣೂರು-ಶಾಂತಿಮೊಗೇರು-ಆಲಂಕಾರು-ನೆಲ್ಯಾಡಿ-ಧರ್ಮಸ್ಥಳಕ್ಕೆ ಸುಲಭ ಸಂಪರ್ಕವಾಗಬೇಕು ಎನ್ನುವ ಸುಮಾರು 30 ವರ್ಷದ ಬೇಡಿಕೆ ಸದ್ಯ ಈಡೇರಿದೆ. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಡಿಯಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗಿದೆ. ಇದರಲ್ಲಿ 50 ಲಕ್ಷ ರೂ. ಭೂಸ್ವಾಧೀನ ಪರಿಹಾರ ನೀಡಲಾಗಿದೆ. ಸೇತುವೆ ಸಂಪರ್ಕ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ವ್ಯಯ ಮಾಡಲಾಗಿದೆ. ಆಲಂಕಾರಿನಿಂದ ಸೇತುವೆಯ ತನಕ 4.5 ಕಿ.ಮೀ. ರಸ್ತೆಯನ್ನು 6 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ರಸ್ತೆ ಅಭಿವೃದ್ಧಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದೀಗ ಸಂಪರ್ಕ ರಸ್ತೆಯ ಉಳಿಕೆ ಭಾಗ ಕೂಡಾ ಅಭಿವೃದ್ದಿಯಾಗಿದ್ದು, ಮೂರು ದಶಕಗಳ ಬೇಡಿಕೆ ಈಡೇರಿದಂತಾಗಿದೆ.

ಆಶಯದಂತೆ ಕೆಲಸ
ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಶಾಂತಿಮೊಗೇರು ಸೇತುವೆಗೆ ಅನುದಾನ ಮಂಜೂರಾಗಿತ್ತು. ಸುಮಾರು 15.5 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾರ್ಯ ನಡೆದಿದೆ. ಆಲಂಕಾರು ತನಕ ರಸ್ತೆ ಅಭಿವೃದ್ಧಿ, ಸೇತುವೆಯ ಸಂಪರ್ಕ ರಸ್ತೆಯ ಅಭಿವೃದ್ಧಿಗೆ ಸರಕಾರದಿಂದ ಅನುದಾನ ತಂದು ಕಾಮಗಾರಿ ನಡೆಸಲಾಗಿದೆ. ಈ ಭಾಗದ ಜನತೆಯ ಆಶಯದಂತೆ ಈ ಎಲ್ಲ ಕಾರ್ಯಗಳನ್ನು ಮಾಡಲಾಗಿದೆ. ನನ್ನ ಕ್ಷೇತ್ರದಲ್ಲಿ ಇನ್ನಷ್ಟು ರಸ್ತೆಗಳು ಅಭಿವೃದ್ದಿಗೆ ಬಾಕಿ ಇದೆ. ಶೀಘ್ರವೇ ಬಾಕಿ ಇರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು.
– ಎಸ್‌.ಅಂಗಾರ,
 ಶಾಸಕರು, ಸುಳ್ಯ

ಟಾಪ್ ನ್ಯೂಸ್

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.