ಪುತ್ತೂರು, ಬೆಳ್ತಂಗಡಿ: ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ
Team Udayavani, Oct 18, 2020, 12:19 PM IST
ಬೆಳ್ತಂಗಡಿ, ಅ.17: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಅ.17ರಂದು ನ್ಯಾಯಾಲಯದ ಆವರಣದಲ್ಲಿ ಕೊರೊನಾ ವಿರುದ್ಧ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.
ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶ ನಾಗೇಶಮೂರ್ತಿ ಮಾಹಿತಿ ನೀಡುವ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿ, ಕೊರೊನಾ ವಿರುದ್ಧ ನಾವೆಲ್ಲರೂ ಜಾಗೃತರಾಗಿ ಸರಕಾರದ ಮುಂಜಾಗ್ರತಾ ಕ್ರಮ ಪಾಲಿಸಿದಲ್ಲಿ ಕೊರೊನಾ ಸೋಂಕು ಹೋಗಲಾಡಿಸಬಹುದು ಎಂದರು.
ಮುಖ್ಯ ಅತಿಥಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ.ನ್ಯಾಯಾಧೀಶ ಸತೀಶ್ ಕೆ.ಜಿ., ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್.ಲೋಬೋ, ಕಾರ್ಯದರ್ಶಿ ಕೆ.ಕೃಷ್ಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕ ಕಿರಣ್ ಕುಮಾರ್ ಜಿ.ಕೆ., ಹಾಜರಿದ್ದರು.
ಹೆಚ್ಚುವರಿ ನ್ಯಾಯಾಧೀಶ ಸತೀಶ್ ಕೆ.ಜಿ. ಕೊರೊನಾ ವಿರುದ್ಧ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪ್ರಮಾಣವಚನ ಬೋಧಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣ ಶೆಣೈ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಮಮ್ತಾಜ್ ಬೇಗಂ ವಂದಿಸಿದರು.
ಪುತ್ತೂರು, ಅ. 17: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪುತ್ತೂರು ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕೋವಿಡ್-19 ಅಭಿಯಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಶನಿವಾರ ಪುತ್ತೂರು ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಲಾಯಿತು.
5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡೊಲ್ಫ್ ಪಿರೇರಾ ಅವರು ಚಾಲನೆ ನೀಡಿ ಮಾತನಾಡಿ, ಈ ತನಕ ಯಾವುದೇ ಔಷಧ ಇಲ್ಲದೆ ಇರುವ ಕೊರೊನಾಕ್ಕೆ ಮುನ್ನೆಚ್ಚರಿಕಾ ಕ್ರಮಗಳೇ ಔಷಧವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೊರೊನಾ ವಿರುದ್ಧ ಹೋರಾಟ ಮಾಡಬೇಕಿದೆ. ಇದೀಗ ಜಾಗೃತಿ ಜಾಥಾ ಮೂಲಕ ಜನರಲ್ಲಿ ತಿಳಿವಳಿಕೆ ಮೂಡಿಸುವ ಪರಿಣಾಮಕಾರಿ ಪ್ರಯತ್ನ ಮಾಡಲಾಗುವುದು ಎಂದರು.
ಕರಪತ್ರ ಬಿಡುಗಡೆ ಮಾಡಿದ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ, ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಮಂಜುನಾಥ ಮಾತನಾಡಿ, ವೈರಸ್‌ನಿಂದ ರಕ್ಷಿಸಿಕೊಳ್ಳಲು ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಬಳಕೆ ಮುಂತಾದ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಪ್ರಧಾನ ವ್ಯವಹಾರಿಕ ನ್ಯಾಯಾಧೀಶ ಪ್ರಕಾಶ್ ಪಿ.ಎಂ. ಮಾಸ್ಕ್ ವಿತರಿಸಿ ಮಾತನಾಡಿದರು. ಮುಖ್ಯಅತಿಥಿಗಳಾಗಿ 2ನೇ ಹೆಚ್ಚುವರಿ ವ್ಯವಹಾರಿಕ ನ್ಯಾಯಾಧೀಶ ವೆಂಕಟೇಶನ್ ಎನ್., ಪುತ್ತೂರು ತಹಶೀ ಲ್ದಾರ್ ಟಿ.ರಮೇಶ್ ಬಾಬು, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್‌ಕುಮಾರ್ ರೈ, ವಕೀಲರ ಸಂಘದ ಪ್ರ. ಕಾರ್ಯದರ್ಶಿ ಮಂಜುನಾಥ ಎನ್.ಎಸ್. ಪಾಲ್ಗೊಂಡಿದ್ದರು.
ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ.ಸ್ವಾಗತಿಸಿ, ವಂದಿಸಿ ದರು. ನ್ಯಾಯವಾದಿ ದೀಪಕ್ ಬೊಳು ವಾರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.