ಚರಂಡಿ ಹೂಳು ಶೀಘ್ರ ತೆರವು ಅಗತ್ಯ

ಬಂಟ್ವಾಳ ಪುರಸಭೆ ವ್ಯಾಪ್ತಿಯ ವಿವಿಧ ಭಾಗ

Team Udayavani, Mar 28, 2022, 9:25 AM IST

bantwal

ಬಂಟ್ವಾಳ: ಈ ಬಾರಿ ಮಳೆಗಾಲ ಬೇಗನೆ ಆರಂಭಗೊಳ್ಳುವ ಲಕ್ಷಣ ಕಂಡುಬರುತ್ತಿದೆ. ಹೀಗಾಗಿ ನಗರ ಸ್ಥಳೀಯಾಡಳಿತಗಳು ಶೀಘ್ರದಲ್ಲಿ ಸಿದ್ಧಗೊಳ್ಳಬೇಕಾದ ಅನಿವಾರ್ಯ ಎದುರಾಗಿದೆ. ಬಂಟ್ವಾಳ ನಗರದ ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕಾಮಗಾರಿ ಆರಂಭಗೊಳ್ಳಬೇಕಿದ್ದು, ಪುರಸಭೆ ಕಾರ್ಯೋನ್ಮುಖವಾಗಬೇಕಿದೆ. ನಗರ ಭಾಗದಲ್ಲಿ ಹರಿಯುವ ನಾಲ್ಕೈದು ಬೃಹತ್‌ ತೋಡುಗಳಲ್ಲಿ ಹೂಳು ತುಂಬಿಕೊಂಡಿದ್ದು, ಪ್ರಸ್ತುತ ನೀರು ನಿಲ್ಲುತ್ತಿದೆ. ಅದು ಸರಾಗವಾಗಿ ಹರಿಯದೆ ಇದ್ದರೆ ಮಳೆಗಾಲದಲ್ಲಿ ಇನ್ನಷ್ಟು ತೊಂದರೆಯಾಗುವ ಆತಂಕವಿದೆ. ಜತೆಗೆ ಸಣ್ಣಪುಟ್ಟ ಚರಂಡಿಗಳು ಕೂಡ ಹದಗೆಟ್ಟಿದ್ದು, ಅವುಗಳ ಹೂಳು ತೆಗೆಯುವ ಕಾರ್ಯಗಳು ತುರ್ತಾಗಿ ನಡೆಯಬೇಕಾದ ಅಗತ್ಯ ಇದೆ.

ಪೊದೆಗಳ ತೆರವೂ ಅಗತ್ಯ

ಬಂಟ್ವಾಳ ಪೇಟೆ, ಭಂಡಾರಿ ಬೆಟ್ಟು, ಬಸ್ತಿಪಡು, ಮೆಲ್ಕಾರ್‌ ಮೊದಲಾದ ಭಾಗಗಳಲ್ಲಿ ತೋಡು ಗಳಲ್ಲಿ ಹೂಳಿನ ಜತೆಗೆ ಪೊದೆಗಳು ಕೂಡ ತುಂಬಿ ಹೋಗಿವೆ. ಹೀಗಾಗಿ ಅದರ ತೆರವು ಕೂಡ ನಡೆಯಬೇಕಿದೆ. ಹೂಳು ತೆಗೆದು ಪೊದೆಗಳನ್ನು ಹಾಗೇ ಬಿಟ್ಟಲ್ಲಿ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ತೊಂದರೆ ಎದುರಾಗಲಿದೆ. ಬಿ.ಸಿ.ರೋಡ್‌-ಜಕ್ರಿಬೆಟ್ಟು ಹೆದ್ದಾರಿಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕಾಮಗಾರಿ ಪರಿಣಾಮ ಇಲ್ಲಿನ ಚರಂಡಿ ಅವ್ಯ ವಸ್ಥೆಯಿಂದ ಕೆಲವು ಮನೆಗಳ ಅಂಗಳಕ್ಕೆ ಕೆಸರು ನೀರು ನುಗ್ಗಿತ್ತು. ಹೀಗಾಗಿ ನೂತನವಾಗಿ ನಿರ್ಮಿಸಲಾದ ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಗಿದೆಯೇ ಎಂಬುದನ್ನೂ ಖಚಿತಪಡಿಸಿಕೊಳ್ಳಬೇಕಿದೆ.

ಕೃತಕ ನೆರೆ ಭೀತಿ

ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ.ಸಿ.ರೋಡ್‌, ಪಾಣೆಮಂಗಳೂರು , ಮೆಲ್ಕಾರ್‌ ಭಾಗದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಾಗಿ ತಗ್ಗು ಪ್ರದೇಶಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ತುಂಬಿಸಲಾಗಿದೆ. ಈ ಎಲ್ಲ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದ್ದು, ಈ ಬಾರಿ ಇತರ ಕಡೆಗಳಿಗೆ ನೀರು ನುಗ್ಗಿ ಕೃತಕ ನೆರೆಯ ಭೀತಿಯೂ ಇದೆ. ಇವೆಲ್ಲ ನೇತ್ರಾವತಿ ನದಿ ಹಾಗೂ ತೋಡುಗಳ ಕಿನಾರೆ ಪ್ರದೇಶಗಳಾಗಿದ್ದು, ಸಾಕಷ್ಟು ಕಡೆಗಳ ನೀರು ತಗ್ಗು ಪ್ರದೇಶಕ್ಕೆ ಹರಿದು ಬಳಿಕ ನದಿ ಸೇರುತ್ತಿದ್ದವು. ಆದರೆ ಈಗ ಮಣ್ಣು ಹಾಕಿರುವುದರಿಂದ ನೀರು ಸರಾಗವಾಗಿ ಹರಿಯುವುದಕ್ಕೂ ತೊಂದರೆ ಎದುರಾಗಬಹುದು. ಹೆದ್ದಾರಿಗಾಗಿ ಮಣ್ಣು ತುಂಬಿರುವ ಜತೆಗೆ ಕೆಲವೆಡೆ ಖಾಸಗಿ ವ್ಯಕ್ತಿಗಳು ಜಮೀನಿನ ತಗ್ಗು ಪ್ರದೇಶಗಳಿಗೆ ಮಣ್ಣು ತುಂಬಿದ್ದಾರೆ. ಇದರಿಂದಲೂ ಕೃತಕ ನೆರೆ ಸೃಷ್ಟಿಯ ಆತಂಕವಿದೆ.

ಟೆಂಡರ್‌ ಕರೆದು ಕಾಮಗಾರಿ

ಮಳೆಗಾಲ ಸಿದ್ಧತೆಯ ಹಿನ್ನೆಲೆಯಲ್ಲಿ ಚರಂಡಿಯ ಹೂಳು ತೆಗೆಯುವುದು ಸೇರಿ ಇತರ ಕಾಮಗಾರಿಗಳಿಗೆ ಶೀಘ್ರದಲ್ಲಿ ಟೆಂಡರ್‌ ಕರೆದು ಕಾಮಗಾರಿ ಆರಂಭಿಸುತ್ತೇವೆ. ಪ್ರಸ್ತುತ ಟೆಂಡರ್‌ ಆಗದೆ ಕಾಮಗಾರಿ ನಡೆದಿಲ್ಲ ಎಂದು ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ತಿಳಿಸಿದ್ದಾರೆ.

ಟಾಪ್ ನ್ಯೂಸ್

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

3

Kinnigoli: ಈಗಲೇ ಕುಡಿಯುವ ನೀರಿನ ಸಮಸ್ಯೆ; ಒಂದೇ ವಾರದಲ್ಲಿ ನಾಲ್ಕು ಬೋರ್‌ವೆಲ್‌

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.