ಮಂಗಳೂರು : ಆರ್‌.ಎನ್‌. ನಾಯಕ್‌ ಕೊಲೆ ಪ್ರಕರಣ: ಮಾ. 30ಕ್ಕೆ ಹೊರಬೀಳಲಿದೆ ಮಹತ್ವದ ತೀರ್ಪು

ಬನ್ನಂಜೆ ರಾಜಾನ ಕೈವಾಡ ಆರೋಪ

Team Udayavani, Mar 29, 2022, 7:23 AM IST

ಆರ್‌.ಎನ್‌. ನಾಯಕ್‌ ಕೊಲೆ ಪ್ರಕರಣ: ಮಾ. 30ಕ್ಕೆ ಹೊರಬೀಳಲಿದೆ ಮಹತ್ವದ ತೀರ್ಪು

ಮಂಗಳೂರುಒಂಬತ್ತು ವರ್ಷಗಳ ಹಿಂದೆ ನಡೆದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್‌.ಎನ್‌. ನಾಯಕ್‌ ಕೊಲೆ ಪ್ರಕರಣದಲ್ಲಿ ಕುಖ್ಯಾತ ಭೂಗತ ಪಾತಕಿ ಬನ್ನಂಜೆ ರಾಜಾ ಯಾನೆ ರಾಜೇಂದ್ರ ಕುಮಾರ್‌ (54) ಭಾಗಿಯಾದ ಆರೋಪ ಕುರಿತಂತೆ ಬೆಳಗಾವಿಯ ಕೋಕಾ ನ್ಯಾಯಾಲಯವು ಮಾ. 30ರಂದು ತೀರ್ಪು ಪ್ರಕಟಿಸಲಿದೆ. ಆರೋಪಿ ಬನ್ನಂಜೆ ರಾಜಾ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾನೆ.

ರಾಜಾ ಮೇಲಿವೆ 48 ಪ್ರಕರಣಗಳು
ಬನ್ನಂಜೆ ರಾಜಾನ ಮೇಲೆ ಉಡುಪಿ, ಮಂಗಳೂರು, ಉತ್ತರ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಗದ ವಿವಿಧ‌ ಪೊಲೀಸ್‌ ಠಾಣೆಗಳಲ್ಲಿ ಮಾತ್ರವಲ್ಲದೆ ಕೇರಳದಲ್ಲಿಯೂ ಹಪ್ತಾ¤ ವಸೂಲಿ, ಸುಲಿಗೆ, ಕೊಲೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಒಟ್ಟು 48 ಪ್ರಕರಣಗಳಿವೆ. ಉ.ಕ. ಜಿಲ್ಲೆಯ ಬಿಜೆಪಿ ನಾಯಕ ಹಾಗೂ ಉದ್ಯಮಿ ಆರ್‌.ಎನ್‌. ನಾಯಕ್‌ ಅವರನ್ನು 2013ರಲ್ಲಿ ಸುಪಾರಿ ನೀಡಿ ಕೊಲೆ ಮಾಡಿಸಿದ ಪ್ರಕರಣ ಈ ಪೈಕಿ ಅತ್ಯಂತ ಪ್ರಮುಖವಾಗಿದೆ.
ರಾಜಾನನ್ನು ಮೊರೊಕ್ಕೊದಲ್ಲಿ 2015 ಫೆಬ್ರವರಿ 12ರಂದು ನಕಲಿ ಪಾಸ್‌ಪೋರ್ಟ್‌ ಹೊಂದಿದ ಆರೋಪದಡಿ ಬಂಧಿಸಿದ್ದು, ಬಳಿಕ ಭಾರತಕ್ಕೆ ಗಡೀಪಾರು ಮಾಡಲಾಗಿತ್ತು. ಅದೇ ವರ್ಷ ಆಗಸ್ಟ್‌ 14ರಂದು ಭಾರತಕ್ಕೆ ಕರೆತರಲಾಗಿತ್ತು. ಬೆಳಗಾವಿಯ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ವಿಚಾರಣೆಗಾಗಿ ಬೆಂಗಳೂರು, ಉಡುಪಿ ಹಾಗೂ ಮಂಗಳೂರಿಗೆ ಕರೆತರಲಾಗಿತ್ತು.

3 ಕೋಟಿ ರೂ. ನೀಡದ್ದಕ್ಕೆ ನಾಯಕ್‌ ಹತ್ಯೆ ಉದ್ಯಮಿಗಳನ್ನು ಬೆದರಿಸಿ ಹಪ್ತಾ ವಸೂಲಿ ದಂಧೆ ಯಲ್ಲಿ ತೊಡಗಿದ್ದ ಬನ್ನಂಜೆ ರಾಜಾ ಅಂಕೋಲಾದ ಉದ್ಯಮಿ ಹಾಗೂ ಬಿಜೆಪಿ ನಾಯಕ ಆರ್‌.ಎನ್‌. ನಾಯಕ್‌ ಅವರಿಗೆ 3 ಕೋಟಿ ರೂ. ಹಫ್ತಾ ಹಣ ನೀಡುವಂತೆ ಬೇಡಿಕೆ ಸಲ್ಲಿಸಿದ್ದ. ಆದರೆ ಹಣ ನೀಡಲು ನಿರಾಕರಿಸಿದ್ದರಿಂದ 2013 ಡಿಸೆಂಬರ್‌ 21ರಂದು ನಾಯಕ್‌ ಅವರನ್ನು ಬನ್ನಂಜೆ ರಾಜಾ ಕೊಲೆ ಮಾಡಿಸಿದ್ದನು ಎಂದು ಆರೋಪಿಸಲಾಗಿತ್ತು.

ಬಹಳಷ್ಟು ಕುತೂಹಲ ಕೆರಳಿಸಿದ್ದ
ಈ ಕೊಲೆ ಪ್ರಕರಣದಲ್ಲಿ ಒಟ್ಟು 16 ಮಂದಿ ಆರೋಪಿಗಳನ್ನು ಗುರುತಿಸಲಾಗಿದ್ದು, ಬನ್ನಂಜೆ ರಾಜಾ ಸೇರಿದಂತೆ 13 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಪ್ರಸ್ತುತ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಬನ್ನಂಜೆ ರಾಜಾ 9ನೇ ಆರೋಪಿಯಾಗಿದ್ದಾನೆ. ಹಣ ನೀಡಿ ಕೊಲೆ ಮಾಡಿಸಿದ ಆರೋಪ ಆತನ ಮೇಲಿದ್ದು, 500 ಪುಟಗಳ
ಚಾರ್ಜ್‌ ಶೀಟನ್ನು ಪೊಲೀಸರು ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಬೆಳಗಾವಿ ಕೋರ್ಟ್‌ಗೆ ಹಾಜರುಪಡಿಸಿದ್ದೇಕೆ?
2000 ಇಸವಿಯಲ್ಲಿ ರಚಿಸಿದ್ದ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ)ಯನ್ನು 13 ವರ್ಷಗಳ ಬಳಿಕ ಮೊದಲ ಬಾರಿಗೆ ಈ ಪ್ರಕರಣದಲ್ಲಿ ಕರ್ನಾಟಕದ ಪಶ್ಚಿಮ ವಲಯದ ಪೊಲೀಸರು ಅನ್ವಯಿಸಿ ಪ್ರಕರಣ ದಾಖಲಿಸಿದ್ದರು. ಕೋಕಾ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಲಯಗಳು ಬೆಳಗಾವಿ, ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾತ್ರ ಇದ್ದು, ಬನ್ನಂಜೆ ರಾಜಾನ ಮೇಲೆ ಪೊಲೀಸರು ಆರ್‌.ಎನ್‌. ನಾಯಕ್‌ ಹತ್ಯೆ ಹಿನ್ನೆಲೆಯಲ್ಲಿ ಕೋಕಾ ಪ್ರಕರಣ ದಾಖಲು ಮಾಡಿರುವ ಜಿಲ್ಲೆ ಬೆಳಗಾವಿ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ರಾಜಾನನ್ನು ಬೆಳಗಾವಿ ನ್ಯಾಯಾಲಯಕ್ಕೆ 2015 ಆ. 14ರಂದು ಹಾಜರುಪಡಿಸಲಾಗಿತ್ತು.

 

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.