ರೇಸ್ ನಲ್ಲಿದೆ ಅಮ್ಮೆ ರ್‌ ಪೊಲೀಸಾ ರಿಲೀಸ್‌ ಡೇಟ್‌! 

Team Udayavani, May 31, 2018, 3:49 PM IST

31-may-12.jpg

ಬಹುನಿರೀಕ್ಷಿತ ‘ಅಮ್ಮೆರ್‌ ಪೊಲೀಸಾ’ ತುಳು ಚಿತ್ರವು ನಿರೀಕ್ಷೆಯಂತೆ ಜೂನ್‌ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದರೂ, ಈಗ ಚಿತ್ರಕ್ಕೆ ಥಿಯೇಟರ್‌ ಸಮಸ್ಯೆಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಚಿತ್ರ ಬಿಡುಗಡೆಗೆ ಜೂನ್‌ ತಿಂಗಳ ಮೂರು
ದಿನಾಂಕಗಳು ಲಿಸ್ಟ್‌ ನಲ್ಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ಫಿಕ್ಸ್‌ ಆಗಲಿದೆ.

ಜೂ. 15ರಂದು ಸಲ್ಮಾನ್‌ ಖಾನ್‌ ಅಭಿನಯದ ‘ರೇಸ್‌-3’ ಹಿಂದಿ ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಅದು ಮಂಗಳೂರು ಥಿಯೇಟರ್‌ನಲ್ಲೂ ರಿಲೀಸ್‌ ಆಗುತ್ತಿರುವುದರಿಂದ ‘ಅಮ್ಮೆರ್‌ ಪೊಲೀಸಾ’ ಚಿತ್ರದ ದಿನಾಂಕ ಮುಂದೂಡುವ ಸಾಧ್ಯತೆ ಇದೆ. ಜತೆಗೆ ರಜನೀಕಾಂತ್‌ ಅಭಿನಯದ ‘ಕಾಲ’ ತಮಿಳು ಚಿತ್ರಕ್ಕೆ ಪ್ರಸ್ತುತ ಕರ್ನಾಟಕದಲ್ಲಿ ಅವಕಾಶ ಇಲ್ಲ ಎಂದು ಹೇಳಿದರೂ, ಮುಂದೆ ಚಿತ್ರ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದರೆ, ‘ಕಾಲ’ದಿಂದಲೂ ತೊಂದರೆ ಎದುರಾಗಬಹುದು.

ಎಕ್ಕಸಕ, ಪಿಲಿಬೈಲ್‌ ಯಮುನಕ್ಕ ಎಂಬ ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಸೂರಜ್‌ ಶೆಟ್ಟಿ ಅವರೇ ‘ಅಮ್ಮೆರ್‌ ಪೊಲೀಸಾ’ ಚಿತ್ರವನ್ನೂ ನಿರ್ದೇಶನ ಮಾಡಿದ್ದು, ಈ ಚಿತ್ರ ತುಳುಚಿತ್ರ ಪ್ರೇಮಿಗಳಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟಿಸಿದೆ. ಹೀಗಾಗಿ ಇದರ ಬಿಡುಗಡೆಗಾಗಿ ಎಲ್ಲರೂ ತುದಿಗಾಲಲ್ಲಿ ನಿಂತಿದ್ದು, ಇನ್ನೂ ಬಿಡುಗಡೆಯ ದಿನಾಂಕ ನಿಗದಿಯಾಗದೇ ಇರುವುದು ಚಿತ್ರಪ್ರೇಮಿಗಳಿಗೆ ನಿರಾಸೆಯನ್ನು ತಂದಿದೆ.

ಕಳೆದ ಹಲವು ವರ್ಷಗಳಿಂದ ತುಳು ಚಿತ್ರಗಳಿಗೆ ಇದೇ ರೀತಿಯಲ್ಲಿ ಥಿಯೇಟರ್‌ ಸಮಸ್ಯೆ ಎದುರಾಗುತ್ತಿದ್ದು, ಅದಕ್ಕೊಂದು ಶಾಶ್ವತ ಪರಿಹಾರ ಇನ್ನೂ ಸಾಧ್ಯವಾಗಿಲ್ಲ. ಚಿತ್ರತಂಡ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು ಬಿಡುಗಡೆಗೆ ತಯಾರಿ ನಡೆಸಿದರೆ ಆ ಸಂದರ್ಭದಲ್ಲಿ ಇತರ ಭಾಷೆಗಳ ಚಿತ್ರ ಬಿಡುಗಡೆಗೆ ಬಂದರೆ ತುಳು ಚಿತ್ರತಂಡ ಹಿಂದೆ ಸರಿಯಲೇ ಬೇಕಾಗುತ್ತದೆ. 

ತುಳು ಚಿತ್ರಕ್ಕೆ ಸೀಮಿತ ಮಾರುಕಟ್ಟೆ ವ್ಯಾಪ್ತಿ ಇರುವುದರಿಂದ ಮಂಗಳೂರು, ಉಡುಪಿ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪ್ರಮುಖ ಥಿಯೇಟರ್‌ಗಳು ಲಭ್ಯವಾಗಬೇಕಾಗುತ್ತದೆ. ಪ್ರಸ್ತುತ ‘ಅಮ್ಮೆರ್‌ ಪೊಲೀಸಾ’ ಚಿತ್ರಕ್ಕೂ ಅದೇ ಸಮಸ್ಯೆ ಎದುರಾಗಿದ್ದು, ಜೂ. 15, 22, 28 ದಿನಾಂಕಗಳಲ್ಲಿ ಒಂದನ್ನು ಚಿತ್ರತಂಡ ಆರಿಸಲಿದೆ. ಆದರೆ ಇನ್ನೂ ಯಾವ ದಿನಾಂಕ ಎಂಬುದು ಪಕ್ಕಾ ಆಗಿಲ್ಲ. ಇನ್ನೆರಡು ದಿನಗಳಲ್ಲಿ ಬಿಡುಗಡೆಯ ದಿನಾಂಕವನ್ನು ಅಂತಿಮಗೊಳಿಸಲಿದ್ದೇವೆ ಎಂದು ಚಿತ್ರದ ನಿರ್ದೇಶಕ ಸೂರಜ್‌ ಶೆಟ್ಟಿ ತಿಳಿಸಿದ್ದಾರೆ.

ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.