ಪೂಜಾರಿ ‘ಕೈ’ ಹಿಡಿದ ರಾಹುಲ್‌: ಕರಾವಳಿಯಲ್ಲಿ  ಒಗ್ಗಟ್ಟಿನ ಮಂತ್ರ !


Team Udayavani, Mar 29, 2018, 1:51 PM IST

29-March-10.jpg

ಮಂಗಳೂರು: ವಿಧಾನಸಭೆ ಚುನಾವಣೆ ಮುಂದಿಟ್ಟುಕೊಂಡು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆ ಮೂಲಕ ಕರಾವಳಿಗೆ ನೀಡಿರುವ ಮೊದಲ ಭೇಟಿಯು ರಾಜಕೀಯವಾಗಿ ಹಲವು ರೀತಿಯ ವಿಶ್ಲೇಷಣೆಗಳಿಗೆ ಕಾರಣವಾಗಿದೆ. ಆ ಪೈಕಿ ಪ್ರಸಿದ್ಧ ಕುದ್ರೋಳಿ ದೇವಸ್ಥಾನ ಭೇಟಿ ಹಾಗೂ ತಮ್ಮ ಅಜ್ಜಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಪ್ತರಾಗಿದ್ದ ಪಕ್ಷದ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರೊಂದಿಗೆ ನಡೆಸಿದ ಕುಶಲೋಪರಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಪಕ್ಷದ ಅಧ್ಯಕ್ಷರಾದ ಬಳಿಕ ರಾಹುಲ್‌ ಗಾಂಧಿ ಮೊದಲ ಬಾರಿಗೆ ಕರಾವಳಿಯ ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಗೆ ಭೇಟಿ ನೀಡಿದ್ದರು. ಮಂಗಳೂರಿನ ನೆಹರೂ ಮೈದಾನದ ನಡೆದ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶದಲ್ಲಿ ಕೇಂದ್ರದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ ಹಿಡಿದು ಮಾಜಿ ಶಾಸಕರಾದ ವಿಜಯಕುಮಾರ್‌ ಶೆಟ್ಟಿ ವರೆಗೆ ಎಲ್ಲ ಸ್ಥಳೀಯ ನಾಯಕರು-ಮುಖಂಡರು ಪಾಲ್ಗೊಂಡಿದ್ದರು. ಆದರೆ ಒಂದು ಕಾಲದಲ್ಲಿ ಕರಾವಳಿ ಭಾಗದಲ್ಲಿ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದುಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯ ರಾಗಿದ್ದ ಮಾಜಿ ಸಚಿವ, ಅಪ್ಪಟ ಕಾಂಗ್ರೆಸ್‌ ನಾಯಕ ಜನಾರ್ದನ ಪೂಜಾರಿ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು. ಅನಾರೋಗ್ಯದ ಕಾರಣದಿಂದ ಸಮಾವೇಶದಲ್ಲಿ ಪಾಲ್ಗೊಂಡಿರಲಿಲ್ಲ ಎನ್ನಲಾಗುತ್ತಿದೆ.

ಸಮಾವೇಶ ಮುಗಿದ ಬಳಿಕ ರಾಹುಲ ಹೋಗಿದ್ದು ಪಕ್ಷದ ಹಿರಿಯ ಮುತ್ಸದ್ದಿ ಜನಾರ್ದನ ಪೂಜಾರಿ ಅವರ ಬಳಿಗೆ. ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಒಂದು ಸಮುದಾಯದ ಮತದಾರರ ಮನ ಗೆಲ್ಲುವ ಪ್ರಯತ್ನ ಮಾಡಿದ್ದರೆ; ಇನ್ನೊಂದು ಕಡೆ ಹಿರಿಯರಾದ ಪೂಜಾರಿ ಅವರನ್ನು ಮಾರ್ಗದರ್ಶಕರು ಎಂಬ ಧಾಟಿಯಲ್ಲಿ ದೇವಸ್ಥಾನದ ಸುತ್ತ ಕೈ ಹಿಡಿದು ನಡೆಸುತ್ತ ಮುಂಬರುವ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸಂದೇಶ ರವಾನಿಸಿದ್ದಾರೆ. ಏಕೆಂದರೆ ಇತ್ತೀಚೆಗೆ ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂಬ ಭಾವ ಉಭಯ ಜಿಲ್ಲೆಗಳ ಕೆಲವು ಹಿರಿಯ ನಾಯಕರಲ್ಲಿದೆ. ಇದನ್ನು ಕೆಲವು ನಾಯಕರು ಬಹಿರಂಗವಾಗಿಯೂ ವ್ಯಕ್ತಪಡಿಸಿದ್ದೂ ಇದೆ. ಮುನಿಸಿಕೊಂಡಿದ್ದ ಮನಸ್ಸುಗಳನ್ನು ರಾಹುಲ್‌ ಸಮಾಧಾನಿಸಲು ಯತ್ನಿಸಿರುವುದು ವಿಶ್ಲೇಷಣೆಗೆ ಎಡೆಮಾಡಿದೆ.

ಹಿರಿಯ ನಾಯಕರ ವಿಶ್ವಾಸ
ಜನಾಶೀರ್ವಾದ ಯಾತ್ರೆಯ ಮರುದಿನ ಮಂಗಳೂರಿನ ಸರ್ಕಿಟ್  ಹೌಸ್‌ನಲ್ಲಿ ಉಭಯ ಜಿಲ್ಲೆಗಳ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕಾರ್ಯವನ್ನು ರಾಹುಲ್‌ ಗಾಂಧಿ ಮಾಡಿದ್ದಾರೆ. ಹಾಲಿ ಶಾಸಕರು, ಸಂಸದರ ಜತೆಗೆ ಮಾಜಿ ಶಾಸಕರು, ಮಾಜಿ ಸಂಸದರು, ಮಾಜಿ ವಿಧಾನ ಪರಿಷತ್‌ ಸದಸ್ಯರನ್ನು ಕೂಡ ಆಹ್ವಾನಿಸಿ ಅವರೊಂದಿಗೆ ಸಂವಾದ ನಡೆಸಿದ್ದಾರೆ. ಖುದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ತಮಗೆ ಮನ್ನಣೆ ಕೊಟ್ಟಿರುವುದು ಹಿರಿಯ ನಾಯಕರಲ್ಲಿ ಸಮಾಧಾನದ ಭಾವನೆ ಮೂಡಿಸಿದೆ.

ಕುದ್ರೋಳಿಯಲ್ಲಿ ರಾಹುಲ್‌ ಅವರು ಪೂಜಾರಿ ಅವರಿಗೆ ತೋರಿದ ಗೌರವಕ್ಕೆ ರಾಜಕೀಯವಾಗಿಯೂ ನಾನಾ ರೀತಿಯ ವ್ಯಾಖ್ಯಾನ ನೀಡಲಾಗುತ್ತಿದೆ. ಜನಾರ್ದನ ಪೂಜಾರಿ ಪಾಲಿಗೆ ಕಾಂಗ್ರೆಸ್‌ನಲ್ಲಿ ಇತ್ತೀಚಿಗೆ ನಡೆದಿರುವ ಬೆಳವಣಿಗೆಗಳು, ಪೂಜಾರಿಯವರು ಬಹಿರಂಗವಾಗಿ ಅಸಮಾಧಾನ ತೋಡಿಕೊಂಡಿರುವುದು ಮತ್ತು ಆ ಬಗ್ಗೆ ಪೂಜಾರಿಯವರು ಕಣ್ಣೀರು ಕೂಡ ಹಾಕಿರುವುದು ಬಿಲ್ಲವ ಸಮುದಾಯದ ಅದರಲ್ಲಿಯೂ ಪೂಜಾರಿಯ ಅಭಿಮಾನಿ ವರ್ಗದ ಮತಗಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕ ಕಾಂಗ್ರೆಸ್‌ ನಲ್ಲಿ ಮನೆ ಮಾಡಿದೆ. ಈ ವೇಳೆ ಪೂಜಾರಿ ಅವರ ಮಾತುಗಳನ್ನು ರಾಹುಲ್‌ ಗಂಭೀರವಾಗಿ ಆಲಿಸುವ ಮೂಲಕ ಪಕ್ಷದಲ್ಲಿ ಪೂಜಾರಿ ಅವರು ಅತ್ಯಂತ ಹಿರಿಯ ನಾಯಕರು ಮತ್ತು ಅವರ ಬಗ್ಗೆ ಪಕ್ಷಕ್ಕೆ ಅತ್ಯಂತ ಗೌರವವಿದೆ ಎಂಬ ಸಂದೇಶವನ್ನು ಪಕ್ಷದೊಳಗೆ ಮತ್ತು ಪೂಜಾರಿ ಅವರ ಸಮುದಾಯಕ್ಕೂ ರವಾನಿಸಿದ್ದಾರೆ. ಈ ವೇಳೆ ಭಾವುಕರಾಗಿದ್ದ ಪೂಜಾರಿ ಅವರು ರಾಹುಲ್‌ಗೆ ಆಶೀರ್ವಾದ ಮಾಡಿ ಮುಂದಿನ ಪ್ರಧಾನಿಯಾಗುವಂತೆ ಹರಸಿದ್ದಾರೆ ಎಂದು ಪೂಜಾರಿಯವರ ಆಪ್ತ ಮೂಲಗಳು ‘ಉದಯವಾಣಿ’ಗೆ ತಿಳಿಸಿವೆ.

ಇತ್ತೀಜೆಗೆ ಉಭಯ ಜಿಲ್ಲೆಗಳಲ್ಲಿ ನಡೆದಿರುವ ಕೆಲವು ಬೆಳವಣಿಗೆಗಳು ಮತ್ತು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್‌ ಸ್ಥಾನವನ್ನು ನೀಡದಿರುವುದು ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಸೃಷ್ಟಿಸಿದ್ದವು. ಜಿಲ್ಲೆಯ ಮುಸ್ಲಿಂ ಸಮುದಾಯದ ಪ್ರಮುಖ ನಾಯಕರಲ್ಲಿ ಓರ್ವರಾಗಿರುವ ಮಾಜಿ ಮೇಯರ್‌ ಆಶ್ರಫ್‌ ಕಾಂಗ್ರೆಸ್‌ಗೆ ರಾಜೀನಾಮೆ ಕೂಡ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್‌ ಅವರು ಮುಸ್ಲಿಂ ಸಮುದಾಯದ ಆನೇಕ ಹಿರಿಯ ಮತ್ತು ಪ್ರಮುಖ ನಾಯಕರನ್ನೂ ಆಹ್ವಾನಿಸಿ ಸಂವಾದ ನಡೆಸಿ ಅವರೆಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ಮಾಡಿದ್ದಾರೆ. ಒಟ್ಟಾರೆ ರಾಹುಲ್‌ ಕರಾವಳಿ ಭೇಟಿ ವೇಳೆ ಪಕ್ಷದಲ್ಲಿ ಈಗಾಗಲೇ ಮುನಿಸಿಕೊಂಡಿರುವ ಪಕ್ಷದ ಹಿರಿಯ ನಾಯಕರ ಅಸಮಾಧಾನಕ್ಕೆ ಸಮಾಧಾನದ ಟಾನಿಕ್‌ ಕೊಟ್ಟು ಹೋಗಿದ್ದಾರೆ ಎನ್ನಲಾಗುತ್ತಿದೆ.

ಜನಾರ್ದನ ಪೂಜಾರಿಗೆ ದಿಲ್ಲಿಗೆ ಆಹ್ವಾನ
ರಾಹುಲ್‌ ಗಾಂಧಿ ಮಾ.20ರಂದು ಕುದ್ರೋಳಿ ದೇವಾಲಯಕ್ಕೆ ಭೇಟಿ ನೀಡಿದಾಗ ಜನಾರ್ದನ ಪೂಜಾರಿ ಆತ್ಮೀಯವಾಗಿ ಬರಮಾಡಿಕೊಂಡಿದ್ದರು. ರಾಹುಲ್‌ ಕೂಡ ಅತ್ಯಂತ ಗೌರವದಿಂದ ನಡೆದುಕೊಂಡರು. ‘ನಿಮ್ಮ ಅಜ್ಜಿ ಇಂದಿರಾ ಗಾಂಧಿಯವರು, ತಂದೆ ರಾಜೀವ್‌ ಗಾಂಧಿ ದೇಶಕ್ಕೆ ಅತ್ಯುತ್ತಮ ಸೇವೆ ನೀಡಿದ್ದಾರೆ. ನಿಮ್ಮನ್ನು (ರಾಹುಲ್‌) ಕೂಡ ದೇವರು ಇದೇ ಹಾದಿಯಲ್ಲಿ ಮುನ್ನಡೆಸಲಿ ಹಾಗೂ ದೇಶದ ಮುಂದಿನ ಪ್ರಧಾನಿಯಾಗಿ’ ಎಂದು ಪೂಜಾರಿ ಆಶೀರ್ವದಿಸಿದ್ದರು. ಆ ಸಂದರ್ಭ ರಾಹುಲ್‌ ‘ನಿಮ್ಮ ಆರೋಗ್ಯವನ್ನು ಕಾಪಾಡಿ ಹಾಗೂ ಹೊಸದಿಲ್ಲಿಗೆ ಬನ್ನಿ’ ಎಂದು ಪೂಜಾರಿಯನ್ನು ವಿನಂತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಶವ ಕುಂದರ್‌

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.