Rahul Gandhi ಮೊಹಬ್ಬತ್‌ ಕೀ ದೂಕಾನ್‌ನಲ್ಲಿ ಹ*ತ್ಯೆ-ಆತ್ಮಹ*ತ್ಯೆ: ಪ್ರಹ್ಲಾದ್‌ ಜೋಶಿ

ಬಿಜೆಪಿ ರಾಜ್ಯಾಧ್ಯಕ್ಷರ ಪದವಿಗೂ ಚುನಾವಣೆ

Team Udayavani, Jan 3, 2025, 6:30 AM IST

prahlad-joshi

ಮಂಗಳೂರು: ರಾಹುಲ್‌ ಗಾಂಧಿ ಅವರು ರಾಜ್ಯದ ತಮ್ಮ ಮೊಹಬ್ಬತ್‌ ಕೀ ದೂಕಾನ್‌ನಲ್ಲಿ ಆತ್ಮಹ*ತ್ಯೆ, ಹ*ತ್ಯೆಗಳನ್ನು ಹಂಚುತ್ತಿದ್ದಾರೆ. ಖಟಾಕಟ್‌ ಆಗಿ ಫಲಾನುಭವಿಗಳಿಗೆ ಸೌಲಭ್ಯ ಹಂಚುವುದಾಗಿ ಹೇಳಿದವರು ವಾಲ್ಮೀಕಿ ನಿಗಮದ ಹಣ ನುಂಗಿ ಹಾಕಿದರು, ಗ್ಯಾರಂಟಿ ಯೋಜನೆ ಹೆಸರಲ್ಲಿ ಎಸ್‌ಸಿಪಿ ಟಿಎಸ್‌ಪಿ ಯೋಜನೆ ಹಣವನ್ನು ವರ್ಗಾವಣೆ ಮಾಡಿಕೊಂಡರು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಸರಕಾರ ರಾಜ್ಯದಲ್ಲಿ ದುರಾಡಳಿತದಲ್ಲಿ ನಿರತವಾಗಿದೆ. ಅದರ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದರು.

ಕಾಂಗ್ರೆಸ್‌ ಸರಕಾರದ ವಿರುದ್ಧ ಸಾಕಷ್ಟು ಆರೋಪಗಳಿವೆ, ಹಿಂದೆ ಈಶ್ವರಪ್ಪ, ಯಡಿಯೂರಪ್ಪ ಪ್ರಕರಣಗಳಲ್ಲಿ ಕಾಂಗ್ರೆಸ್‌ನವರು ಏನೇನು ಹೇಳಿದ್ದರೋ ಅದೆಲ್ಲವನ್ನೂ ಮರೆತಿದ್ದಾರೆ. ಸಿಎಂ ಸಿದ್ದರಾಮಯ್ಯ ಮೇಲೆಯೇ ಆರೋಪ ಬಂದಿತ್ತು. ಹೈಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇದೆ. ಆದರೂ ಭಂಡತನದಿಂದ ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಸರಕಾರ ಬಂದ ಬಳಿಕ ಚಂದ್ರಶೇಖರ ಎನ್ನುವವರ ಆತ್ಮಹತ್ಯೆಯ ಕಾರಣ ವಾಲ್ಮೀಕಿ ಹಗರಣ ಬಯಲಾಯಿತು, ಬೆಳಗಾವಿಯ ತಹಶೀಲ್ದಾರ್‌ ಕಚೇರಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ಪಿಎ ಮೇಲೆ ಆರೋಪಗಳಿವೆ. ಕಲಬುರ್ಗಿಯಲ್ಲಿ ಗುತ್ತಿಗೆದಾರನ ಆತ್ಮಹತ್ಯೆ, ಯಾದಗಿರಿಯಲ್ಲಿ ಕಾಂಗ್ರೆಸ್‌ ಶಾಸಕರ ಕಿರುಕುಳದಿಂದ ಎಸ್‌ಐ ಆತ್ಮಹತ್ಯೆ-ಇಂತಹ ಸರಣಿಗಳು ನಡೆಯುತ್ತಲೇ ಇವೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ, ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಪ್ರಮುಖರಾದ ರವಿಕುಮಾರ್‌, ಪ್ರೇಮಾನಂದ ಶೆಟ್ಟಿ, ಯತೀಶ್‌ ಅರ್ವಾರ್‌, ವಸಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಸಬ್ಸಿಡಿ ಮುಂದುವರಿಕೆ ಕೇಂದ್ರದ ಕೊಡುಗೆ
ರೈತರಿಗಾಗಿ ರಸಗೊಬ್ಬರಕ್ಕೆ ದೊಡ್ಡ ಪ್ರಮಾಣದಲ್ಲಿ ಸಬ್ಸಿಡಿ ಮುಂದುವರಿಕೆ ಮೂಲಕ ಕೇಂದ್ರ ಸರಕಾರ ಹೊಸ ವರ್ಷದಂದು ಕೊಡುಗೆ ನೀಡಿದೆ. ರಸಗೊಬ್ಬರದ ಮೂಲವಸ್ತು ಖನಿಜವಾದ್ದರಿಂದ ನಮ್ಮಲ್ಲಿ ಕೊರತೆ ಇದೆ, ಹಾಗಾಗಿ ರಸಗೊಬ್ಬರ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಅಲ್ಲದೆ ಬೆಳೆವಿಮೆ ಸರ್ವೆಯಲ್ಲಿ ಇರುವ ನ್ಯೂನತೆಗಳನ್ನು ಪರಿಹರಿಸಿ ತಂತ್ರಜ್ಞಾನ ಬಳಕೆ ಮಾಡಿ, ರೈತಸ್ನೇಹಿಯಾಗಿಸಲು ಕ್ರಮ ಕೈಗೊಳ್ಳಲಾಗಿದೆ, ಅದಕ್ಕಾಗಿಯೇ 824 ಕೋಟಿ ರೂ. ಮೀಸಲಿರಿಸಲಾಗಿದೆ ಎಂದೂ ತಿಳಿಸಿದರು.

ಪ್ರಿಯಾಂಕ್‌ ಖರ್ಗೆ ವಿರುದ್ಧ ಕಾನೂನಾತ್ಮಕ ಹೋರಾಟ
ಸಚಿವ ಪ್ರಿಯಾಂಕ್‌ ಖರ್ಗೆ ಅವರಂತೂ ಎಷ್ಟು ಕೆಳಗಿಳಿಯಬಹುದೋ ಅಷ್ಟು ಕೆಳಗಿಳಿದು ಬಿಜೆಪಿಯವರು ಬಟ್ಟೆ ಹರಿದುಕೊಂಡರೂ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ. ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರೂ ಇದುವರೆಗೆ ಇಂತಹ ದುರಹಂಕಾರದ ಹೇಳಿಕೆ ಕೊಟ್ಟಿಲ್ಲ. ಆದರೆ ಅಹಂಕಾರ ಪ್ರಿಯಾಂಕ್‌ ತಲೆಗೇರಿದೆ, ಅವರಿಗೆ ಜನ ಸೂಕ್ತ ಪಾಠ ಕಲಿಸುತ್ತಾರೆ. ಅವರ ವಿರುದ್ಧ ಕಾನೂನು- ರಾಜಕೀಯ ಹೋರಾಟ ಮಾಡುತ್ತೇವೆ ಎಂದು
ಜೋಷಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರ ಪದವಿಗೂ ಚುನಾವಣೆ
ಮಂಗಳೂರು : ಪ್ರಸ್ತುತ ಪಕ್ಷದಲ್ಲಿ ಬೂತ್‌ ಅಧ್ಯಕ್ಷರ ಆಯ್ಕೆ ಆಗಿದ್ದು, ಮಂಡಲ ಅಧ್ಯಕ್ಷರ ಚುನಾವಣೆ ಚಾಲ್ತಿಯಲ್ಲಿದೆ. ಅದೇ ರೀತಿ ಜಿಲ್ಲಾ ಅಧ್ಯಕ್ಷರು, ರಾಜ್ಯ ಅಧ್ಯಕ್ಷರ ಚುನಾವಣೆ ಕೂಡ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ತಿಳಿಸಿದ್ದಾರೆ.

ಬಿಜೆಪಿಯೊಳಗಿನ ಬಣಗಳ ತಿಕ್ಕಾಟ, ರಾಜ್ಯಾಧ್ಯಕ್ಷರ ಬದಲಾವಣೆ, ಆಯ್ಕೆ ಇತ್ಯಾದಿ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಇದೆ ಎಂದು ನಾನು ಹೇಳಲಾರೆ. ದೇಶಾದ್ಯಂತ ಪಕ್ಷದ ಆಂತರಿಕ ಪ್ರಜಾಪ್ರಭುತ್ವದ ಭಾಗವಾಗಿ ರಾಜ್ಯಾಧ್ಯಕ್ಷರೂ ಸೇರಿದಂತೆ ವಿವಿಧ ಘಟಕಗಳ ಚುನಾವಣ ಪ್ರಕ್ರಿಯೆ ನಡೆಯುತ್ತಿದೆ. ಅದರಂತೆಯೇ ಇಲ್ಲೂ ನಡೆಯಲಿದೆ ಎಂದು ಹೇಳಿದರು.

ಈ ಹಿಂದೆ ವಿಜಯೇಂದ್ರ ಅವರನ್ನು ಚುನಾವಣೆ ಯಲ್ಲಿ ಆಯ್ಕೆ ಮಾಡಿರಲಿಲ್ಲ, ಆಗಿನ ಪರಿಸ್ಥಿತಿಯಲ್ಲಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು. ಈಗ ಮತ್ತೆ ಚುನಾವಣೆ ನಡೆದು ಅವರೇ ಆಯ್ಕೆಯಾಗಲೂ ಬಹುದು ಎಂದರು.
ಚುನಾವಣೆ ನಡೆಸುವುದಕ್ಕಾಗಿ ರಾಜ್ಯದಲ್ಲಿ ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ನನಗೆ ಕೇರಳದ ಹೊಣೆ ಕೊಡಲಾಗಿದೆ. ನಮ್ಮಲ್ಲಿ ಪಕ್ಷದ ಆಂತರಿಕ ಚುನಾವಣೆ ಪಾರದರ್ಶಕವಾಗಿ ನಡೆಯಲಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

5-photography

Photography: ಎಲ್ಲೆಲ್ಲೂ ಫೋಟೋಗ್ರಫಿ

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Temple rights belong to Tantris, not the government: Kerala Minister

Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ

Abujhmad: Four Naxalites killed in gunfight; one policeman martyred

Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

UP: ವಿವಾಹದ ಮಧ್ಯೆ ಬಾತ್‌ರೂಮ್‌ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ

Isro grows cowpea seeds sprout in space in just four days

ISRO: ಅಂತರಿಕ್ಷದಲ್ಲಿ ಅಲಸಂದೆ ಬೀಜ ಮೊಳಕೆ: ಇಸ್ರೋ ಪ್ರಯೋಗಕ್ಕೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-uv-fusion

UV Fusion: ಪುಟ್ಟ ಕಂಗಳ ಕುತೂಹಲ

5-photography

Photography: ಎಲ್ಲೆಲ್ಲೂ ಫೋಟೋಗ್ರಫಿ

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Pune: ಪಿಜ್ಜಾ ಆರ್ಡರ್‌ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು

Temple rights belong to Tantris, not the government: Kerala Minister

Kerala: ದೇಗುಲ ಸಂಪ್ರದಾಯ ಬದಲು ಹಕ್ಕು ತಂತ್ರಿಗ‌ಳದ್ದು, ಸರ್ಕಾರದಲ್ಲ: ಕೇರಳ ಸಚಿವ

Abujhmad: Four Naxalites killed in gunfight; one policeman martyred

Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.