ರಾಯಿ: ಸರಕಾರಿ ಜಮೀನಿನಲ್ಲಿ ಆವರಣಗೋಡೆ ನಿರ್ಮಾಣಕ್ಕೆ ಆಕ್ಷೇಪ
Team Udayavani, May 13, 2019, 6:04 AM IST
ಪುಂಜಾಲಕಟ್ಟೆ: ಸರಕಾರಿ ಮತ್ತು ದೈವಸ್ಥಾನಗಳ ಸ್ಥಳಕ್ಕೆ ಸಂಬಂಧಿಸಿ ವಿವಾದ ಅಸ್ತಿತ್ವದಲ್ಲಿರುವಾಗ ದೈವಸ್ಥಾನ ಸಮಿತಿಯಿಂದ ಮತ್ತೆ ವಿವಾದಿತ ಸ್ಥಳಕ್ಕೆ ಆವರಣ ಗೋಡೆ ನಿರ್ಮಾಣಕ್ಕೆ ಗ್ರಾಮ ಪಂಚಾಯತ್ ಆಕ್ಷೇಪ ವ್ಯಕ್ತಪಡಿಸಿದ್ದು, ಪೊಲೀಸರ ಮಧ್ಯ ಪ್ರವೇಶದಿಂದ ಆವರಣ ಗೋಡೆ ನಿರ್ಮಾಣ ಕಾರ್ಯ ಸ್ಥಗಿತಗೊಂಡ ಘಟನೆ ಶನಿವಾರ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ಸಂಭವಿಸಿದೆ.
ರಾಯಿ ಗ್ರಾ.ಪಂ. ಕಚೇರಿ ಎದುರಿನ 1 ಎಕ್ರೆ ಜಾಗದಲ್ಲಿ ಸ್ಥಳೀಯ ದೈವಸ್ಥಾನಕ್ಕೆ ಸಂಬಂಧಿಸಿ ಕಳೆದ ಎ. 24ರಂದು ಆವರಣ ಗೋಡೆ ನಿರ್ಮಿಸುತ್ತಿರುವಾಗ ಸ್ಥಳೀಯ ಗ್ರಾ.ಪಂ. ಆಕ್ಷೇಪ ವ್ಯಕ್ತಪಡಿಸಿತ್ತು. ಬಂಟ್ವಾಳ ಗ್ರಾಮಾಂತರ ಠಾಣಾ ಎಸ್‌ಐ ಪ್ರಸನ್ನ ಎಂ. ಸೂಚನೆ ಮೇರೆಗೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ, ತಹಶೀಲ್ದಾರರ ಮೂಲಕ ಕಂದಾಯ ಇಲಾಖೆ ಅಧಿಕಾರಿಗಳು ಇಲ್ಲಿನ ಮೀಸಲಿಟ್ಟ ಜಮೀನು ಸರ್ವೇ ನಡೆಸಿದ ಬಳಿಕವೇ ಕಾಮಗಾರಿ ನಡೆಸುವಂತೆ ಸೂಚಿಸಿದ್ದರು. ಇದೀಗ ಮತ್ತೆ ಆರಂಭಿಸಿದ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಜಮಾಯಿಸಿದ್ದರು.
ದೈವಸ್ಥಾನ ಮತ್ತು ಸಾರ್ವಜನಿಕ ಉದ್ದೇಶ
ಈ ಜಾಗ ಮೈಸಂದಾಯ ಕೊಡಮಣಿತ್ತಾಯಿ, ಧೂಮಾವತಿ ದೈವಸ್ಥಾನ ಮತ್ತು ಸಾರ್ವಜನಿಕ ಉದ್ದೇಶಕ್ಕಾಗಿ ಸಹಾಯಕ ಆಯುಕ್ತರು ಈಗಾಗಲೇ ಮೀಸಲಿಟ್ಟಿದ್ದಾರೆ ಎಂದು ದೈವಸ್ಥಾನದ ವ್ಯವಸ್ಥಾಪನ ಸಮಿತಿ ತಿಳಿಸಿದೆ. ಗ್ರಾ.ಪಂ. ಸಾರ್ವಜನಿಕ ಆಟದ ಮೈದಾನಕ್ಕೆ ಮೀಸಲಿಟ್ಟ 1 ಎಕ್ರೆ ಜಮೀನಿನಲ್ಲಿ ಮೈಸಂದಾಯ ಕೊಡಮಣಿತ್ತಾಯಿ, ಧೂಮಾವತಿ ದೈವದ ಹೆಸರಿನಲ್ಲಿ ಅತಿಕ್ರಮಣಗೊಳಿಸಿ ಆವರಣ ಗೋಡೆ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾ.ಪಂ. ಆಡಳಿತ ಮಂಡಳಿ ವಿರೋಧ ವ್ಯಕ್ತಪಡಿಸಿದೆ.
ಈ ಒಂದು ಎಕ್ರೆ ಸರಕಾರಿ (ಪರಂಬೋಕು) ಜಮೀನು ಆಟದ ಮೈದಾನಕ್ಕಾಗಿ ಮೀಸಲಿಟ್ಟು, ಗ್ರಾ.ಪಂ. ಈಗಾಗಲೇ ನಿರ್ಣಯ ಕೈಗೊಂಡಿದೆ ಎಂದು ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಒ ಹೆಸರಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದಾರೆ.
ಇಲ್ಲಿನ ಸರ್ವೇ ನಂ. 86/1ಪಿ1ರಲ್ಲಿ ಒಟ್ಟು 3.84 ಎಕ್ರೆ ಜಮೀನಲ್ಲಿ ಈಗಾಗಲೇ ಗ್ರಾ.ಪಂ., ಹಾಲು ಉತ್ಪಾದಕರ ಸಹಕಾರಿ ಸಂಘ, ಪಶು ವೈದ್ಯಕೀಯ ಕೇಂದ್ರ, ಅಂಚೆ ಕಚೇರಿ ಮತ್ತಿತರ ಕಟ್ಟಡ ನಿರ್ಮಾಣಗೊಂಡಿದೆ. ಉಳಿದಂತೆ ಇಲ್ಲಿನ ಉಳಿಕೆ ಒಂದು ಎಕ್ರೆ ಜಮೀನಿನಲ್ಲಿ ಅಶ್ವತ್ಥ ಮರದಡಿ ಪ್ರತೀವರ್ಷ ದೊಂಪದಬಲಿ ಉತ್ಸವ ನಡೆಸಲಾಗುತ್ತಿದೆ.ಇಲ್ಲಿನ ದೈವದ ನುಡಿಯಂತೆ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಆವರಣಗೋಡೆ ನಿರ್ಮಿಸಲಾಗುತ್ತಿದೆ ಎಂದು ಸಮಿತಿ ಅಧ್ಯಕ್ಷ ಕೆ. ರಮೇಶ ನಾಯಕ್ ರಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.