ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗಾಳಿ ಸಹಿತ ಮಳೆ; ಹಾನಿ


Team Udayavani, Apr 3, 2019, 6:30 AM IST

male

ಮಂಗಳೂರು/ವೇಣೂರು/ಬಂಟ್ವಾಳ: ರಾಜ್ಯದ ದಕ್ಷಿಣ ಒಳನಾಡಿ ನಲ್ಲಿ ಕಾಣಿಸಿಕೊಂಡ ಮೇಲ್ಮೆ ç ಸುಳಿಗಾಳಿ ಪರಿಣಾಮ, ಕರಾವಳಿ ಪ್ರದೇಶದ ಅನೇಕ ಕಡೆಗಳಲ್ಲಿ ಮಂಗಳವಾರ ಗಾಳಿ ಸಹಿತ ಮಳೆಯಾಗಿದೆ.

ಮಂಗಳೂರು ನಗರದಲ್ಲಿ  ಸಂಜೆ 5 ಗಂಟೆ ವೇಳೆಗೆ ಧೂಳು ಮಿಶ್ರಿತ ಪ್ರಬಲ ಗಾಳಿಯೊಂದಿಗೆ ಸಾಧಾರಣ ಮಳೆಯಾಗಿತ್ತು. ಕಳೆದ ಕೆಲ ದಿನಗಳಿಂದ
ಬಿಸಿಲಿನ ಧಗೆಯಲ್ಲಿದ್ದ ಕರಾವಳಿಯಲ್ಲಿ ಮಂಗಳವಾರ ಸುರಿದ ಮಳೆಯಿಂದ ವಾತಾವರಣ ತಂಪಾಗಿದೆ. ವೇಣೂರು ಪರಿಸರದಲ್ಲಿ ಸಂಜೆ ಸುಮಾರು ಅರ್ಥ ತಾಸು ಉತ್ತಮ ಮಳೆ ಸುರಿಯಿತು. ಚರಂಡಿ ಬ್ಲಾಕ್‌ ಆದ ಕಾರಣ ಇಲ್ಲಿಯ
ಕಾಲೇಜು ರಸ್ತೆಯ ಮುಂಭಾಗದಲ್ಲಿನ ಅಂಗಡಿಗಳಿಗೆ ನೀರು ನುಗ್ಗಿತು. ನಾರಾವಿ ಹಾಗೂ ವೇಣೂರು ವ್ಯಾಪ್ತಿಯ ಕುರೊÉಟ್ಟು, ಪೆರ್ಮುಡ ಹಾಗೂ ಕಲ್ಲತ್ತಿ ಪ್ರದೇಶಗಳಲ್ಲಿ ವಿದ್ಯುತ್‌ ತಂತಿ ಮೇಲೆ ಮರ ಉರುಳಿ ಬಿದ್ದು ಸುಮಾರು 8ಕ್ಕೂ ಅಧಿಕ ಕಂಬಗಳು ದರಾಶಾಹಿಯಾಗಿವೆ.

ಅಮಾrಡಿ: ಮನೆಗೆ ಹಾನಿ
ಬಂಟ್ವಾಳ: ತಾಲೂಕಿನ ಅಮಾrಡಿ ಗ್ರಾಮದ ಬೆದ್ರಗುಡ್ಡೆ ನಿವಾಸಿ ಮೋಹನ ಜೋಗಿ ಅವರ ಹಂಚಿನ ಛಾವಣಿಯ ಮನೆಗೆ ತೆಂಗಿನ ಮರಬಿದ್ದು ಮನೆ ಸಂಪೂರ್ಣ ಜಖಂ ಆಗಿದೆ. ಈ ಸಂದರ್ಭ ಪತ್ನಿ, ಮಕ್ಕಳು ಸೇರಿ ನಾಲ್ವರು ಮನೆಯಲ್ಲಿದ್ದರು. ಪುತ್ರಿಗೆ ತರಚು ಗಾಯಗಳಾಗಿವೆ. ಸುಮಾರು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ಗ್ರಾಮ ಲೆಕ್ಕಿಗ ಶಶಿಕುಮಾರ್‌ ಸ್ಥಳ ಮಹಜರು ಮಾಡಿ ತಿಳಿಸಿದ್ದಾರೆ. ತಹಶೀಲ್ದಾರ್‌ ಸಣ್ಣರಂಗಯ್ಯ ಸ್ಥಳಕ್ಕೆ ಭೇಟಿ ನೀಡಿದರು.
ಬಿರುಗಾಳಿಗೆ ಕೆಲವು ಅಂಗಡಿಗಳ ನಾಮಫಲಕ ಉದುರಿ ಬಿದ್ದಿವೆ.

ಬಿರುಗಾಳಿಯಿಂದ ಪೊಳಲಿ ಕ್ಷೇತ್ರದ ಮುಂಭಾಗದ ಹಾಲ್‌ ಎದುರಿನ ಪಾರ್ಕಿಂಗ್‌ ಸ್ಥಳದಲ್ಲಿ ಹಾಕಿದ್ದ ಶಾಮಿಯಾನದ ಕಂಬ ವಾಲಿದ್ದರಿಂದ ಒಂದು ಭಾಗ ಕುಸಿಯಿತಾದರೂ ಕೂಡಲೇ ಸ್ಥಳೀಯರು ತೆರವು ಮಾಡಿದರು.

ಕುರ್ನಾಡು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ಹಾಕಿದ್ದ ಶಾಮಿಯಾನ ಭಾರೀ ಗಾಳಿಗೆ ನೆಲಸಮವಾಗಿದೆ. ಉತ್ಸವ ಸೋಮವಾರ ಕೊನೆಗೊಂಡಿದ್ದರಿಂದ ಯಾವುದೇ ಸಮಸೆಯಾಗಿಲ್ಲ.

ಕಡಬ: ಅಪಾರ ಹಾನಿ
ಕಡಬ ಪರಿಸರದಲ್ಲಿ ಮಂಗಳವಾರ ಸಂಜೆ ಗಾಳಿ ಮಳೆಗೆ ಹಲವು ಮರಗಳು
ರಸ್ತೆಗುರುಳಿದ್ದು, ಅಪಾರ ಕೃಷಿ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಕಟ್ಟಡಗಳ ಮೇಲ್ಛಾವಣಿಯ ಸಿಮೆಂಟ್‌ ಶೀಟುಗಳು, ಅಂಗಡಿಯ ನಾಮಫ‌ಲಕಗಳು ಸೇರಿದಂತೆ ಹಲವು ಸೊತ್ತುಗಳು ನಾಶವಾಗಿವೆ. ಮರ್ಧಾಳದ ಚಾಕೋಟೆಕೆರೆ, ಅಳೇರಿ ಹಾಗೂ ಕೋಡಂದೂರಿನಲ್ಲಿ ಬೃಹತ್‌ ಗಾತ್ರದ ಮೂರು ಮರಗಳು ರಸ್ತೆಗುರುಳಿದ್ದರಿಂದ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆ¨ªಾರಿಯ ಸಂಚಾರದಲ್ಲಿ ಕೆಲಕಾಲ ತಡೆಯುಂಟಾಯಿತು. ಹಲವು ಮನೆಗಳ ಮೇಲ್ಛಾವಣಿಯ ಹಂಚು, ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಸಾವಿರಾರು ಅಡಿಕೆ ಮರಗಳು, ತೆಂಗು, ರಬ್ಬರ್‌ ಕೃಷಿ ನಾಶವಾಗಿವೆ.

ಉಜಿರೆ, ಲಾೖಲ, ಧರ್ಮಸ್ಥಳ, ಸುರತ್ಕಲ್‌, ಹೊಸಂಗಡಿ, ಕೊಕ್ಕಡ, ಪುತ್ತೂರು, ಉಪ್ಪಿನಂಗಡಿ, ಹತ್ಯಡ್ಕ, ಪಟ್ರಮೆ, ನೆಲ್ಯಾಡಿ, ಪುಂಜಾಲಕಟ್ಟೆ, ಕಿನ್ನಿಗೋಳಿ, ಹಳೆಯಂಗಡಿ, ಮೂಡುಬಿದಿರೆ, ಸವಣೂರು, ಪಣಕ್ಕಜೆ ಪರಿಸರದಲ್ಲಿ ಉತ್ತಮ ಮಳೆಯಾಗಿದೆ. ಜೋರಾದ ಗಾಳಿ ಮಳೆಗೆ ಜಿಲ್ಲೆಯ ಕೆಲವು ಕಡೆಗಳಲ್ಲಿ ವಿದ್ಯುತ್‌ ಕೈಕೊಟ್ಟಿತ್ತು.

ಕೊಡಗಿನಲ್ಲಿ ಆಲಿಕಲ್ಲು ಮಳೆ; ಬೆಳೆ ಹಾನಿ
ಮಡಿಕೇರಿ/ಸೋಮವಾರಪೇಟೆ: ಕೊಡಗು ಜಿಲ್ಲೆಯ ವಿವಿಧೆಡೆ ಮಂಗಳವಾರ ಅಪರಾಹ್ನ ಗುಡುಗು, ಸಿಡಿಲು ಸಹಿತ ಅರ್ಧ ಗಂಟೆಗೂ ಹೆಚ್ಚು ಕಾಲ ಉತ್ತಮ ಮಳೆಯಾಗಿದ್ದು, ಕಾಫಿ ಬೆಳೆಗಾರರು ಹರ್ಷಗೊಂಡಿದ್ದಾರೆ.

ಸೋಮವಾರಪೇಟೆಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ನಾಟಿ ಮಾಡಿದ್ದ ಮೆಣಸಿನ ಗಿಡಗಳು ಹಾನಿಗೀಡಾಗಿ ಅಪಾರ ನಷ್ಟ ಸಂಭವಿಸಿದೆ. ಗಾಳಿಯ ರಭಸವೂ ಹೆಚ್ಚಾಗಿತ್ತು.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.