Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
Team Udayavani, Apr 20, 2024, 1:12 AM IST
ಮಂಗಳೂರು/ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆಯ ವೇಳೆ ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.
ಮಂಗಳೂರಿನ ಹೊರ ವಲಯ, ಸುರತ್ಕಲ್, ಹಳೆಯಂಗಡಿ ಪರಿಸರದಲ್ಲಿ ಶುಕ್ರವಾರ ಮುಂಜಾನೆ ಮತ್ತು ರಾತ್ರಿ ವೇಳೆ ಸಾಧಾರಣ ಮಳೆ ಸುರಿದಿತ್ತು.
ಶುಕ್ರವಾರ ಸಂಜೆ ವೇಳೆಗೆ ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಉತ್ತಮ ಮಳೆಯಾಗಿದೆ. ಬಂಟ್ವಾಳ, ಪುತ್ತೂರು ತಾಲೂಕಿನ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಕೆಲವೆಡೆ ಸ್ವಲ್ಪ ಸಮಯ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು.
ಶುಕ್ರವಾರ ಚಾರ್ಮಾಡಿ, ನೆರಿಯ ಮುಂಡಾಜೆ, ಉಜಿರೆ, ಗುರಿಪಳ್ಳ, ಗೇರುಕಟ್ಟೆ, ತೋಟತ್ತಾಡಿ, ಚಿಬಿದ್ರೆ, ಕಡಿರುದ್ಯಾವರ, ದಿಡುಪೆ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ.
ಆಲಿಕಲ್ಲು ಮಳೆ
ಚಾರ್ಮಾಡಿ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾದರೆ ನೆರಿಯ ಕಡೆ ಗಾಳಿ, ಗುಡುಗಿನ ಸಹಿತ ಮಳೆ ಬಿದ್ದಿದೆ. ಉಜಿರೆ ಧರ್ಮಸ್ಥಳ ಸುತ್ತಮುತ್ತ ಹನಿ ಮಳೆಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಬ್ಲಾಕ್
ನಿಡಿಗಲ್-ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಕೆಸರುಮಯ ವಾತಾವರಣ ಉಂಟಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಅಂಬಡ್ತ್ಯಾರು ಎಂಬಲ್ಲಿ ಮಣ್ಣಿನ ರಸ್ತೆಯಲ್ಲಿ ಟ್ಯಾಂಕರ್ ಒಂದು ಜಾರಿದ ಪರಿಣಾಮ ಹಲವು ಸಮಯ ಟ್ರಾಫಿಕ್ ಸಮಸ್ಯೆ ತಲೆದೋರಿತ್ತು. ಕನಕಮಜಲು: ಮರ, ಕಂಬ ರಸ್ತೆಗೆ
ಸಂಜೆ ಬೀಸಿದ ಗಾಳಿ ಮಳೆಗೆ ಕನಕಮಜಲಿನಲ್ಲಿ ರಸ್ತೆಗೆ ಮರ, ವಿದ್ಯುತ್ ಕಂಬ ಉರುಳಿ ಸಂಚಾರಕ್ಕೆ ತಡೆ ಉಂಟಾಯಿತು.
ಕಡಲಬ್ಬರ ತುಸು ಬಿರುಸು
ಕುಂದಾಪುರ: ಗುರುವಾರ ಹಾಗೂ ಶುಕ್ರವಾರ ಮಂಗಳೂರು, ಉಳ್ಳಾಲ, ಮಲ್ಪೆ, ಗಂಗೊಳ್ಳಿ, ಭಟ್ಕಳ, ಹೊನ್ನಾವರ, ತದಡಿ, ಕಾರವಾರ ಸಹಿತ ಎಲ್ಲೆಡೆಯ ಕಡಲ ತೀರದ ಪ್ರದೇಶಗಳಲ್ಲಿ ಅಲೆಗಳ ಎತ್ತರ ಗರಿಷ್ಠ 3 ಅಡಿಯಿಂದ 4 ಅಡಿಯವರೆಗೆ ಇದ್ದುದು ಕಂಡು ಬಂದಿದೆ. ಗಾಳಿಯ ವೇಗವೂ ಹಗಲಿನಲ್ಲಿ ಗಂಟೆಗೆ ಗರಿಷ್ಠ 14 ರಿಂದ 21 ಕಿ.ಮೀ. ವರೆಗೆ ಬೀಸುತ್ತಿದೆ.
ಮೂರು ದಿನ ಮಳೆ ಸಾಧ್ಯತೆ
ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮುಂದಿನ ಮೂರು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಎ.20 ಮತ್ತು 21ರಂದು ಉತ್ತಮ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ “ಎಲ್ಲೋ ಅಲರ್ಟ್’ ಘೋಷಿಸಿದೆ. ಮಂಗಳೂರಿನಲ್ಲಿ ಶುಕ್ರವಾರ 34.5 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಮತ್ತು 26.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.8 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.