ಮಳೆ ಕೊಯ್ಲು: ಕೊಡಿಯಾಲ ಗ್ರಾ.ಪಂ. ಮಾದರಿ ನಡೆ 


Team Udayavani, Nov 17, 2018, 12:06 PM IST

17-november-8.gif

ಕಾಣಿಯೂರು: ಅಂತರ್ಜಲ ಹೆಚ್ಚಳಕ್ಕೆ ಪೂರಕವಾಗಿ ಇಂಗು ಗುಂಡಿಗಳ ಜತೆ ಮಳೆಕೊಯ್ಲು ಘಟಕ ನಿರ್ಮಿಸಿ ವ್ಯರ್ಥವಾಗಿ ಹರಿಯುವ ನೀರನ್ನು ಭೂಮಿಗೆ ಇಂಗಿಸುವುದು ಪ್ರಸ್ತುತ ದಿನಗಳಲ್ಲಿ ತೀರಾ ಆವಶ್ಯ. ಈ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಸುಳ್ಯ ತಾಲೂಕು ಕೊಡಿಯಾಲ ಗ್ರಾ.ಪಂ. ತನ್ನ ಕಟ್ಟಡದಲ್ಲೆ ಮಳೆ ನೀರು ಕೊಯ್ಲು ಘಟಕ ನಿರ್ಮಿಸಿ, ಮಾದರಿ ಕಾರ್ಯ ಮಾಡಿದೆ.

ಭವಿಷ್ಯಕ್ಕೆ ಪ್ರಯೋಜನ
ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ಭೂಮಿಯೊಳಗೆ ಇಂಗಿದ ನೀರು ಬ್ಯಾಂಕ್‌ನಲ್ಲಿಟ್ಟ ಹಣದಂತೆ ಎನ್ನುತ್ತಾರೆ ಹಿರಿಯರು. ಈ ಹಿಂದಿನ ಕಾಲದಲ್ಲಿ ಎಂತಹ ಬೇಸಿಗೆಯಲ್ಲೂ ಕುಡಿಯುವ ನೀರಿಗೆ, ಕೃಷಿಗೆ ನೀರಿಗೆ ಅಷ್ಟೊಂದು ತಾಪತ್ರಯ ಇರಲಿಲ್ಲ. ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುರಿಯುವ ಮಳೆ ನೀರು ಕೆರೆ, ಬಾವಿ, ಮಣ್ಣಿನ ಕಟ್ಟಗಳಲ್ಲಿ ಶೇಖರಣೆಯಾಗುತ್ತಿತ್ತು. ಆದರೆ ಈಗ ಕೆರೆ, ಬಾವಿ, ಮಣ್ಣಿನ ಕಟ್ಟಗಳು ಕಾಣಸಿಗುವುದೇ ವಿರಳ. ಮಳೆ ಕೊಯ್ಲು, ಜಲ ಮರುಪೂರಣ ಘಟಕಗಳಿಂದ ನಮ್ಮ ಅಂತರ್ಜಲ ಮಟ್ಟ ಹೆಚ್ಚಳಗೊಂಡು ಭವಿಷ್ಯದ ದಿನಗಳಿಗೆ ಪ್ರಯೋಜನವಾಗಲಿದೆ. 

ಸ್ವಯಂ ಪ್ರೇರಣೆಯಿಂದ ಅಳವಡಿಕೆ
ಹಲವು ಕಡೆಗಳಲ್ಲಿ ಕೆಲವು ಉತ್ಸಾಹಿಗಳು ತಮ್ಮ ಮನೆಯಲ್ಲಿ ಮಳೆ ಕೊಯ್ಲು, ಜಲ ಮರುಪೂರಣ ಘಟಕವನ್ನು ನಿರ್ಮಿಸಿದ್ದಾರೆ. ಇದರಿಂದ ಅವರ ಕೊಳವೆ ಬಾವಿಯಲ್ಲಿ ಬೇಸಿಗೆಯಲ್ಲೂ ನೀರಿನ ಮಟ್ಟ ಈ  ಹಿಂದಿನಂತೆ ಕುಸಿತವಾಗಿಲ್ಲ. ಮಳೆಕೊಯ್ಲಿನ ಮೂಲಕ ಮಳೆ ನೀರನ್ನು ಬಾವಿಗೆ ನೀರು ಇಂಗಿಸಿದರಿಂದ ನೀರು ಬಿರು ಬೇಸಿಗೆಯಲ್ಲೂ ಸಿಗುತ್ತದೆ.

ಉದ್ಯೋಗ  ಖಾತರಿಯಲ್ಲಿ ನಿರ್ಮಾಣ
ಕೊಡಿಯಾಲ ಗ್ರಾ.ಪಂ.ನಲ್ಲಿ ಮಳೆಕೊಯ್ಲ ಘಟಕವನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಯೋಜನೆಯಲ್ಲಿ ಮಾಡಲಾಗಿದೆ. ಅಂದಾಜು 1.45 ಲಕ್ಷ ರೂ ವೆಚ್ಚದ ಈ ಕಾಮಗಾರಿಯಲ್ಲಿ 140 ಮಾನನ ದಿನಗಳ ಕೆಲಸ ಮಾಡಲಾಗಿದೆ. ಮಳೆ ಕೊಯ್ಲು ಘಟಕದ ನೀರು ಇಂಗಲು ಟ್ಯಾಂಕ್‌ ನಿರ್ಮಾಣ ಮಾಡಲಾಗಿದೆ. ಕೇಂದ್ರ ಸರಕಾರದ ಉದ್ಯೋಗ ಖಾತರಿ ಯೋಜನೆಯ ಮೂಲಕ ಕೊಳವೆ ಬಾವಿಗಳಿಗೆ ಜಲ ಮರುಪೂರಣ ಘಟಕ ನಿರ್ಮಾಣಕ್ಕೆ ಅವಕಾಶವಿದೆ. ಗ್ರಾ.ಪಂ.ನಲ್ಲಿ ಉದ್ಯೋಗ ಚೀಟಿ ಮಾಡಿಸಿಕೊಂಡು ಯೋಜನೆಯ ಕುರಿತಾದ ಕೆಲ ದಾಖಲೆಗಳನ್ನು ನೀಡಿ ತಮ್ಮ ಮನೆಗಳಲ್ಲೂ ಈ ಘಟಕವನ್ನು ಆರಂಭಿಸಬಹುದು.

ಮಾದರಿ ಯೋಜನೆ 
ಇಂತಹ ಪ್ರಯತ್ನವನ್ನು ಎಲ್ಲ ಗ್ರಾ.ಪಂ.ಗಳು ಅನುಷ್ಠಾನಕ್ಕೆ ತಂದರೆ ಮಾದರಿ ಯೋಜನೆಯಾಗಿ ರೂಪುಗೊಳ್ಳಲು ಸಾಧ್ಯ. ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿಯೂ ಇದು ಸಹಕಾರಿ ಯಾಗಲಿದೆ. ಭೂಮಿ ಯಲ್ಲೂ ತೇವಾಂಶ ನಿಲ್ಲುವ ಜತೆಗೆ ವ್ಯರ್ಥವಾಗಿ ಹರಿದು ಹೋಗುವ ನೀರು ನಮ್ಮ ಭೂಮಿಯಲ್ಲೇ ಇಂಗುತ್ತದೆ.

ಜಲಸಂರಕ್ಷಣೆ ಉದ್ದೇಶ
ಜಲ ಸಂರಕ್ಷಣೆಯ ಹಿತದೃಷ್ಟಿಯಿಂದ ತಾ.ಪಂ. ನಿರ್ದೇಶನದಂತೆ ಆಡಳಿತ ಮಂಡಳಿಯ ಸಹಕಾರದಲ್ಲಿ ಉದ್ಯೋಗ ಖಾತರಿ ಯೋಜನೆಯ ಮೂಲಕ ಈ ಘಟಕ ನಿರ್ಮಿಸಲಾಗಿದೆ. ಸಾರ್ವಜನಿಕರಿಗೂ ಮಳೆಕೊಯ್ಲು ಘಟಕ ನಿರ್ಮಾಣ ಮಾಡಲು ಪೂರಕವಾಗಿ ಸಂದೇಶ ನೀಡುವ ದೃಷ್ಟಿಯಿಂದ ಈ ಘಟಕವನ್ನು ಮಾಡಲಾಗಿದೆ.
– ಮೋಹನ್‌ ಸಾಲಿಯಾನ್‌,
ಅಧ್ಯಕ್ಷರು ಕೊಡಿಯಾಲ ಗ್ರಾ.ಪಂ,

ಎಲ್ಲರಿಗೂ ಸಂದೇಶ
ಈ ಘಟಕವನ್ನು ಉದಾಹರಣೆಯಾಗಿಟ್ಟುಕೊಂಡು ಸಾರ್ವಜನಿಕರೂ ಮಳೆಕೊಯ್ಲು ಘಟಕ ಅನುಷ್ಠಾನ ಮಾಡವಂತಾಗಲಿ ಎಂಬ ಆಶಾಭಾವನೆ ಇದೆ. ಸ್ಥಳೀಯಾಡಳಿದಲ್ಲಿ ಇಂತಹ ಕೆಲಸ ಮಾಡಿದರೆ ಎಲ್ಲರಿಗೂ ಸಂದೇಶ ತಲುಪುವಂತಾಗುತ್ತದೆ. ಈ ನಿಟ್ಟಿನಲ್ಲಿ ಮಳೆಕೊಯ್ಲು ಘಟಕ ನಿರ್ಮಾಣ ಮಾಡಲಾಗಿದೆ.
 - ಹೂವಪ್ಪ ಗೌಡ,
   ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಕೊಡಿಯಾಲ

 ಪ್ರವೀಣ ಚೆನ್ನಾವರ

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.