ಮಂಗಳೂರಿನಲ್ಲಿ ಮಳೆ; ಮರ ಧರೆಗೆ
Team Udayavani, Aug 29, 2019, 5:39 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆ ಬುಧವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಬೆಳಗ್ಗೆ ಉತ್ತಮ ಮಳೆಯಾಗಿದ್ದು, ಗಾಳಿ ಕೂಡ ಹೆಚ್ಚಾಗಿತ್ತು. ಬಲ್ಮಠ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಒಂದರ ಮೇಲೆ ಮೂರು ಮರಗಳು ಉರುಳಿ ಬಿದ್ದು ಅಪಾರ್ಟ್ ಮೆಂಟ್ ಪಾರ್ಕಿಂಗ್ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳಿಗೆ ಹಾನಿಯುಂಟಾಗಿದೆ.
ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನ ಕೆರೆ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ವಿಟ್ಲ, ಕನ್ಯಾನ, ಮಡಂತ್ಯಾರು, ಉಳ್ಳಾಲ ಸುಳ್ಯ, ಸುಬ್ರಹ್ಮಣ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.
ಉಡುಪಿಯಲ್ಲಿ ಉತ್ತಮ ಮಳೆ
ಉಡುಪಿ ಜಿಲ್ಲೆಯಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ. ತೆಕ್ಕಟ್ಟೆ, ಕುಂದಾಪುರ, ಬೈಂದೂರು, ಕಾರ್ಕಳ, ಪಡುಬಿದ್ರಿ, ಕಾಪು ಭಾಗಗಳಲ್ಲಿ ಸಾಧಾರಣ ಮಳೆಯಾಯಿತು. ಉಡುಪಿ ನಗರದಲ್ಲಿ ರಾತ್ರಿ ಭಾರೀ ಮಳೆ ಸುರಿದಿತ್ತು.
ಕಾಸರಗೋಡು: ಎಲ್ಲೊ ಅಲರ್ಟ್
ಕಾಸರಗೋಡು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರದ ತನಕ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆ ಆ.29 ರಂದು ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ.
ಕೊಡಗು: ಹೆದ್ದಾರಿಗೆ ಉರುಳಿದ ಮರ
ಮಡಿಕೇರಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಾಗುತ್ತಿದೆ. ಬುಧವಾರ ಕೆಲವೆಡೆ ಉತ್ತಮ ಮಳೆ ಯಾಗಿದ್ದು, ಹೆದ್ದಾರಿಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಮಡಿಕೇರಿ ವ್ಯಾಪ್ತಿಯಲ್ಲಿ ಸಂಜೆ ಸುರಿದ ಮಳೆಗೆ 2ನೇ ಮೊಣ್ಣಂಗೇರಿ ಸಮೀಪ ಮಂಗಳೂರು ಹೆದ್ದಾರಿಯಲ್ಲಿ ಬೃಹತ್ ಮರ ಉರುಳಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲವು ಗಂಟೆಗಳ ಬಳಿಕ ಮರವನ್ನು ತೆರವುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.