Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Team Udayavani, Mar 19, 2024, 1:39 AM IST
ಮಂಗಳೂರು: ಕರಾವಳಿಯಲ್ಲಿ ಈ ಬಾರಿ ಬಿಸಿಲಿನ ಝಳದಿಂದ ಬೇಸಗೆಯ ಆರಂಭಿಕ ದಿನಗಳಲ್ಲೇ ಭಾರೀ ಸೆಕೆಯ ಅನುಭವವಾಗುತ್ತಿದೆ. ಸದ್ಯದ ವಾತಾವರಣದ ಸ್ಥಿತಿಗತಿ ಪ್ರಕಾರ ಕರಾವಳಿ ಮತ್ತು ಮಲೆನಾಡಿದ ಕೆಲವು ಕಡೆಗಳಲ್ಲಿ ಮಾ. 20-24ರ ವರೆಗೆ ಚದುರಿದಂತೆ, ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದ.ಕ. ಜಿಲ್ಲೆಯಲ್ಲಿ ಜನವರಿ ಮತ್ತು ಫೆಬ್ರವರಿಯಲ್ಲಿ ಒಟ್ಟು 60 ಮಿ.ಮೀ. ಮಳೆಯಾಗಿದ್ದು, ಉಡುಪಿಯಲ್ಲಿ 46 ಮಿ.ಮೀ. ಮಳೆಯಾಗಿದೆ. ಮಾರ್ಚ್ ತಿಂಗಳಿನಲ್ಲಿ ಇಲ್ಲಿಯ ವರೆಗೆ ಮಳೆಯಾಗಿಲ್ಲ. ದ.ಕ.ದಲ್ಲಿ ಸರಾಸರಿ ಮಾ. 1ರಿಂದ 18ರ ವರೆಗೆ 7 ಮಿ.ಮೀ., ಉಡುಪಿಯಲ್ಲಿ 3 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಒಂದು ಹನಿ ಮಳೆಯೂ ಸುರಿದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ವರ್ಷ ಮಾರ್ಚ್‌ನಲ್ಲಿ ದ.ಕ. ಜಿಲ್ಲೆಯಲ್ಲಿ 09 ಮಿ.ಮೀ. ಮತ್ತು ಉಡುಪಿ ಜಿಲ್ಲೆಯಲ್ಲಿ 2.8 ಮಿ.ಮೀ. ಮಳೆಯಾಗಿತ್ತು. ಜನವರಿ ಮತ್ತು ಫೆಬ್ರವರಿಯಲ್ಲಿ ಮಳೆಯಾಗಿರಲಿಲ್ಲ.ಮಂಗಳೂರಿನಲ್ಲಿ ಸೋಮವಾರ ದಿನದ ಗರಿಷ್ಠ ತಾಪಮಾನ 33.2 ಡಿ.ಸೆ. ಮತ್ತು ಕನಿಷ್ಠ 24.5 ಡಿ.ಸೆ. ತಾಪಮಾನ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ 2 ಡಿ.ಸೆ. ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.