ಮಳೆಹಾನಿ: ಶಾಸಕ ಭರತ್ ಶೆಟ್ಟಿ ಭೇಟಿ, ನೆರವು
Team Udayavani, May 31, 2018, 10:57 AM IST
ಸುರತ್ಕಲ್: ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಸುರತ್ಕಲ್ ಹೊಸ ಮಾರುಕಟ್ಟೆ ಕಾಮಗಾರಿ ನಡೆಯುವ ಸ್ಥಳ ಕೆರೆಯಂತಾದರೆ, ಸುರತ್ಕಲ್ ಬಂಟರ ಭವನದ ಹಿಂದಿನ ತೋಡು ತುಂಬಿ ಹರಿದು ಸುತ್ತಮುತ್ತಲಿನ ಮನೆಗಳು ಮುಳುಗಡೆಯಾಗಿದ್ದವು. ಅಗರಮೇಲು, ಚೊಕ್ಕಬೆಟ್ಟು, 7ನೇ ಬ್ಲಾಕ್ ಕೃಷ್ಣಾಪುರದಲ್ಲಿ ವರುಣಾಭರದಿಂದ ವಸತಿ ಬಡಾವಣೆಗಳು ಭಾಗಶಃ ಮುಳುಗಡೆಯಾಗಿ ಜನತೆ ತೀವ್ರ ಸಂಕಷ್ಟ ಅನುಭವಿಸಬೇಕಾಯಿತು.
ಮಂಗಳವಾರ ಮುಂಜಾನೆಯೇ ಕೃತಕ ನೆರೆಯ ಮುನ್ಸೂಚನೆ ಪಡೆದ ಡಾ| ವೈ. ಭರತ್ ಶೆಟ್ಟಿ ಅವರು ಭೇಟಿ ನೀಡಿ ಅಧಿಕಾರಿಗಳು, ಸ್ಥಳೀಯರೊಂದಿಗೆ ಪರಿಶೀಲನೆ ನಡೆಸಿದ್ದರು. ನಾರಾಯಣ ಗುರು ಶಾಲೆ ಕುಸಿದ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳ ಮಾಹಿತಿ ಪಡೆದರು. ಶಾಲೆಯ ಪುನರ್ ನಿರ್ಮಾಣ, ಮನೆ ಕುಸಿತ ಸಹಿತ ವಿವಿಧ ಪ್ರಕೃತಿ ವಿಕೋಪದ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು ಮರು ನಿರ್ಮಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ದೂರವಾಣಿ ಮೂಲಕ ಸಹಾಯ ಅರಸಿ ಬಂದ ಕಡೆಗೆ ಧಾವಿಸಿ ನೆರವು ನೀಡಿದರು.
ಕಾರ್ಯಕರ್ತರು, ಸ್ಥಳೀಯರೊಂದಿಗೆ ಜಡಿ ಮಳೆಯನ್ನೂ ಲೆಕ್ಕಿಸದೆ ಸಂತ್ರಸ್ತರ ರಕ್ಷಣೆಯಲ್ಲಿ ತಾನೂ ಕೈಜೋಡಿಸಿ ಶ್ಲಾಘನೆಗೆ ಪಾತ್ರರಾದರು. ಬಿಜೆಪಿಯ ಕಾರ್ಪೊರೇಟರ್, ಪದಾಧಿಕಾರಿಗಳು, ಕಾರ್ಯಕರ್ತರು ಜತೆಗಿದ್ದರು.
ಪಂಜಿಮೊಗರು: ಮನೆ ಕುಸಿದ ಸ್ಥಳಕ್ಕೆ ಭೇಟಿ
ಪಣಂಬೂರು: ಪಂಜಿಮೊಗರುವಿನಲ್ಲಿ ಮಂಗಳವಾರ ಮನೆ ಕುಸಿದು ಮೂವರಿಗೆ ಗಾಯವಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಾ| ವೈ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನೆಯವರೊಂದಿಗೆ ಮಾತುಕತೆ ನಡೆಸಿದ ಅವರು ಪರಿಹಾರ ಒದಗಿಸುವ ಭರವಸೆ ನೀಡಿದರು. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡರೂ ಪಾಲಿಕೆಯ ಎಡವಟ್ಟಿನಿಂದ ಕೃತಕ ನೆರೆ ಹಾವಳಿ ಉಂಟಾಗಿದೆ. ಇದನ್ನು ಅಧಿ ಕಾರಿಗಳೇ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ಶಾಸಕ ಭರತ್ ಶೆಟ್ಟಿ ಮಾತನಾಡಿ, ಪಾಲಿಕೆ ವೈಫಲ್ಯದಿಂದ ಸಮಸ್ಯೆ ಗಂಭೀರವಾಯಿತು. ರಾಜ್ಯ ಸರಕಾರ ವಿಶೇಷ ತಂಡ ಕಳಿಸಿ ನಷ್ಟವನ್ನು ಕೂಡಲೇ ಬಿಡುಗಡೆ ಮಾಡಬೇಕು. ರಸ್ತೆ, ಸೇತುವೆ, ಮನೆ, ಶಾಲೆಗಳಿಗೆ ಹಾನಿಯಾಗಿದೆ. ಮಂಗಳೂರು ಉತ್ತರ ಕ್ಷೇತ್ರದ ಪ್ರತೀ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಹಾರ ನೀಡುವ ಕುರಿತಂತೆ ಅಧಿಕಾರಿಗಳಲ್ಲಿ ಮಾತುಕತೆ ನಡೆಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.