ವರುಣನ ಅವಕೃಪೆ: ನಿರೀಕ್ಷೆಯಲ್ಲಿದ್ದ ಜನತೆಗೆ ತೀವ್ರ ಹತಾಶೆ

ಹೆಚ್ಚಿದ ಬೇಸಗೆ ಬಿಸಿಲು, ಸೆಕೆ: ಬಹುತೇಕ ಎಲ್ಲ ಜಲಮೂಲಗಳು ಬರಿದು, ಬೆಳೆಗಳೂ ಕುಂಠಿತ

Team Udayavani, May 12, 2019, 6:00 AM IST

26

ನೀರಿಲ್ಲದೆ ಸಂಪೂರ್ಣ ಬತ್ತಿರುವ ನಾಗಬನದ ಕೆರೆ.

ನಗರ: ಈ ಬಾರಿ ಮುಂಗಾರು ಪೂರ್ವ ಮಳೆ ಸುರಿಯದೇ ಇರುವುದು ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿ ಹತಾಶೆಗೆ ತಳ್ಳಿದೆ. ಬೇಸಗೆ ಬಿರು ಬಿಸಿಲಿನ ಝಳಕ್ಕೆ ಜನತೆ ತತ್ತರಿಸಿದೆ.

ಕಳೆದ ವರ್ಷ ಯುಗಾದಿಯ ಅವಧಿಯಲ್ಲಿ ಅಂದರೆ ಮಾರ್ಚ್‌ ತಿಂಗಳ ಮಧ್ಯ ಭಾಗದಲ್ಲಿ ಆರಂಭಗೊಂಡ ಮಳೆ ನಿರಂತರತೆಯನ್ನು ಕಾಯ್ದುಕೊಂಡು ಜನತೆಯಲ್ಲಿ ಒಂದಷ್ಟು ನಿರಾಳತೆಯನ್ನು ಮೂಡಿಸಿತ್ತು. ಆದರೆ ಈ ಬಾರಿ ಮೇ ತಿಂಗಳ ಎರಡನೇ ವಾರಕ್ಕೆ ಕಾಲಿಟ್ಟರೂ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಒಂದೇ ಒಂದು ಸಾಮಾನ್ಯ ಪ್ರಮಾಣದ ಮಳೆಯೂ ಸುರಿದಿಲ್ಲ.

ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ಬರಿದಾಗಿದೆ. ಮತ್ತೂಂದು ಭಾಗದ ಸೀರೆ ಹೊಳೆಯೂ ಜಲಮುಕ್ತಗೊಂಡಿದೆ. ಈ ಭಾಗದ ಕೃಷಿಕರು ತಮ್ಮ ಬದುಕಿನ ಬೆಳೆಗಳು ಬಿಸಿಲಿನ ತೀಕ್ಷ್ಣತೆಯಿಂದ ಸಾಯುತ್ತಿರುವುದನ್ನು ನೋಡಲಾರದೆ ಕಣ್ಣುಮುಚ್ಚಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಮತ್ತು ನಗರದ ಭಾಗದ ಜನತೆ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಜಿಲ್ಲೆಯ ಕೃಷಿಕರಲ್ಲಿ ಕೊಳವೆ ಬಾವಿಗಳಿದ್ದರೂ ಬಹುತೇಕ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಮತ್ತೂಂದು ಕಡೆ ವಿದ್ಯುತ್‌ ಸಮಸ್ಯೆಯೂ ಕೃಷಿಕರಿಗೆ ಇರುವ ನೀರನ್ನೂ ಸಮರ್ಪಕವಾಗಿ ಬಳಸಿಕೊಳ್ಳಲು ಬಿಡುತ್ತಿಲ್ಲ. ಹಳ್ಳಿಯ ಭಾಗಗಳಲ್ಲಿ ಕುಡಿಯುವ ನೀರಿನ ಬಾವಿಗಳು ಸದಾ ಜನತೆಯನ್ನು ಕಾಪಾಡುತ್ತಿದ್ದವು. ಆದರೆ ಈಗ ಕುಡಿಯುವ ನೀರಿನ ಬಾವಿಗಳು ಕಣ್ಮರೆಯಾಗಿವೆ. ಕೊಳವೆಬಾವಿಗಳನ್ನೇ ನಂಬಿರುವ ಹಳ್ಳಿಯ ಜನತೆಗೂ ನೀರಿನ ಬಿಸಿ ಉಂಟಾಗಿದೆ.

ನಗರಸಭಾ ವ್ಯಾಪ್ತಿಗೆ ಕುಮಾರಧಾರ ನದಿಗೆ ನಿರ್ಮಿಸಲಾದ ಕಿಂಡಿಅಣೆಕಟ್ಟಿನಿಂದ ನೀರು ಸರಬರಾಜು ನಡೆಯುತ್ತಿದ್ದರೂ ಕಿಂಡಿಅಣೆಕಟ್ಟಿನ ನೀರಿನ ಸಂಗ್ರಹ ಇಳಿಕೆಯಾಗತೊಡಗಿದೆ. ನಗರಸಭಾ ವ್ಯಾಪ್ತಿಯ ಪೆರಿಯತ್ತೋಡಿ, ಬೊಳ್ಳಾಣ, ಉರ್ಲಾಂಡಿ, ಬೆದ್ರಾಳ, ಕುಬಲಾಜೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು. ಇಲ್ಲಿ ಹೊಸ ಕೊಳವೆಬಾವಿ ಕೊರೆದರೂ ನೀರೇ ಸಿಗದೆ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕಿನ ಬಡಗನ್ನೂರು ಗ್ರಾ. ಪಂ. ವ್ಯಾಪ್ತಿಯ ನೆಕ್ರಾಜೆ, ಗಾಣಪದವು, ಒಳಮೊಗ್ರು ಗ್ರಾ. ಪಂ., ಬಲಾ°ಡು ಗ್ರಾ. ಪಂ. ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ.

ಗ್ರಾಮಾಂತರಕ್ಕೆ 26 ಹೊಸ ಕೊಳವೆಬಾವಿ
ತಾಲೂಕಿನ 41 ಗ್ರಾ.ಪಂ. ವ್ಯಾಪ್ತಿಗಳಲ್ಲಿ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿರುವಲ್ಲಿಗೆ ತುರ್ತಾಗಿ ಪರಿಹರಿಸಲು 26 ಕೊಳವೆ ಬಾವಿಗಳನ್ನು ಹೊಸದಾಗಿ ಕೊರೆಸಲು ತಾಲೂಕು ಪಂಚಾಯತ್‌ಕಾರ್ಯನಿರ್ವಾಹಣಾಧಿಕಾರಿಯವರು ಪುತ್ತೂರು ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಕಾರ್ಯಪಾಲಕ ಅಭಿಯಂತರರಿಗೆ ಸುತ್ತೋಲೆ ನೀಡಿದ್ದಾರೆ. ಕೆಲವು ಗ್ರಾಮ ಪಂ.ಚಾಯತ್‌ಗಳಲ್ಲಿರುವ 18 ಕೊಳವೆ ಬಾವಿಗಳನ್ನು ಪುನಶ್ಚೇತನಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ.

ನಗರದಲ್ಲಿ 6 ಹೊಸ ಕೊಳವೆಬಾವಿ
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲೂ ನೀರಿನ ಸಮಸ್ಯೆ ತಲೆದೋರಿದ ಕಡೆಗಳಲ್ಲಿ 6 ಕೊಳವೆಬಾವಿಗಳನ್ನು ಕೊರೆಸಲು ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯವರ ಅನುಮೋದನೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಮಚ್ಚಿಮಲೆ, ಉರ್ಲಾಂಡಿ ಪರಿಸರದಲ್ಲಿ ಈಗಾಗಲೇ ಕೊಳವೆ ಬಾವಿ ಕೊರೆಸಿದ್ದರೂ ಎರಡೂ ವಿಫಲಗೊಂಡಿವೆ. ಆದರೆ ಬೆದ್ರಾಳ ನೆಕ್ಕರೆ ಪರಿಸರದಲ್ಲಿ ಕೊರೆಸಿದ ಕೊಳವೆ ಬಾವಿಗೆ ನೀರು ಸಿಕ್ಕಿದೆ. ಪೆರಿಯತ್ತೋಡಿ, ಕುಬಲಾಜೆ ಪರಿಸರದಲ್ಲಿ ಕೊಳವೆ ಬಾವಿ ಕೊರೆಸಲು ಸಿದ್ಧತೆ ನಡೆಯುತ್ತಿದೆ.

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.