ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆಗಳಲ್ಲಿ ಅಳವಡಿಸುತ್ತಿದ್ದಾರೆ. ಜತೆಗೆ ತಮ್ಮ ಖುಷಿಯನ್ನು ಉಳಿದವರೊಂದಿಗೂ ಹಂಚಿಕೊಳ್ಳುತ್ತಿದ್ದಾರೆ. ಹೀಗಿರುವಾಗ, ‘ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆಗಳಲ್ಲಿ ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೊ ಸಮೇತ ನಮಗೆ ವಿವರವನ್ನು ವಾಟ್ಸಪ್ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. ವಾಟ್ಸಪ್ ನಂಬರ್: 9900567000
ಮಳೆಕೊಯ್ಲು ಅಳವಡಿಕೆ ಸರಳ
ನಾನು ಪಾಂಗಳ ಚರ್ಚ್ ಬಳಿ ಮಳೆ ನೀರು ಕೊಯ್ಲು ವ್ಯವಸ್ಥೆ ನೋಡಿದ್ದೆ. ಇದನ್ನು ಅಳವಡಿಸಲು ತುಂಬಾ ಖರ್ಚು ತಗಲುತ್ತದೆ ಎಂಬ ಯೋಚನೆ ನನ್ನಲ್ಲಿತ್ತು. ಸರಳ ವಿಧಾನದಲ್ಲಿಯೂ ಅಳವಡಿಸಿ, ನೀರಿನ ಸಮಸ್ಯೆಯನ್ನು ನಿವಾರಿಸಬಹುದು ಎಂಬುದನ್ನು ತಿಳಿದುಕೊಂಡೆ. ಉದಯವಾಣಿ ಅಭಿಯಾನವೂ ಇದಕ್ಕೆ ಪ್ರೇರಣೆಯಾಯಿತು. ಮುಂದಿನ ದಿನಗಳಲ್ಲಿ ನಮ್ಮ ಇತರೇ ಸಂಸ್ಥೆಯಲ್ಲೂ ಈ ವ್ಯವಸ್ಥೆ ಅಳವಡಿಸುವಂತೆ ತಿಳಿಸುತ್ತೇನೆ.
– ರೆ| ಶಶಿಕಲಾ ಅಂಚನ್